ಶುಕ್ರವಾರ, ಡಿಸೆಂಬರ್ 27, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಂತರರಾಷ್ಟ್ರೀಯ ಸೇನಾ ಕ್ರೀಡಾಕೂಟದಲ್ಲಿ ಭಾಗವಹಿಸಲು ರಷ್ಯಾ‌ಗೆ ತೆರಳಲಿದೆ ಭಾರತೀಯ ಸೇನಾ ತಂಡ

Twitter
Facebook
LinkedIn
WhatsApp
ಅಂತರರಾಷ್ಟ್ರೀಯ ಸೇನಾ ಕ್ರೀಡಾಕೂಟದಲ್ಲಿ ಭಾಗವಹಿಸಲು ರಷ್ಯಾ‌ಗೆ ತೆರಳಲಿದೆ ಭಾರತೀಯ ಸೇನಾ ತಂಡ.

ನವದೆಹಲಿ: ರಷ್ಯಾದಲ್ಲಿ ಆಗಸ್ಟ್ 22 ರಿಂದ ಸೆಪ್ಟೆಂಬರ್ 4 ರ ವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಸೇನಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಭಾರತೀಯ ಸೇನೆಯ 101 ಸದಸ್ಯರ ತಂಡ ಅಲ್ಲಿಗೆ ತೆರಳಲಿದೆ.
ಭಾರತೀಯ ಸೇನಾ ತಂಡ ಆರ್ಮಿ ಸ್ಕೌಟ್ಸ್ ಮಾಸ್ಟರ್ಸ್ ಸ್ಪರ್ಧೆ [ಎ.ಎಸ್.ಎಂ.ಸಿ], ಎಲ್ಬ್ರಸ್ ರಿಂಗ್, ಪೊಲಾರ್ ಸ್ಟಾರ್, ಸ್ನೈಪೆರ್ ಪ್ರೆಂಟಿಯರ್ ಮತ್ತು ಸೇಫ್ ರೂಟ್ ಆಟಗಳಲ್ಲಿ ಭಾಗವಹಿಸಲಿದ್ದು, ಅತಿ ಎತ್ತರದ ಭೂ ಪ್ರದೇಶಗಳಲ್ಲಿ ವಿವಿಧ ಬಗೆಯ ಡ್ರಿಲ್‌ಗಳು, ಹಿಮ ಪ್ರದೇಶದಲ್ಲಿ ಕಾರ್ಯಾಚರಣೆ, ಸ್ನೈಪರ್ ನಲ್ಲಿ ಪಾಲ್ಗೊಳ್ಳಲಿದೆ. ಅಲ್ಲದೇ ಅಡೆತಡೆಯುಳ್ಳ ಭೂ ಪ್ರದೇಶದಲ್ಲಿ ವಿವಿಧ ರೀತಿಯ ಯುದ್ಧ ತಾಂತ್ರಿಕ ಕೌಶಲ್ಯಗಳನ್ನು ಈ ಸ್ಪರ್ಧೆಯಲ್ಲಿ ಪ್ರದರ್ಶಿಲಿದೆ.
ಓಪನ್ ವಾಟರ್ ಮತ್ತು ಫಾಲ್ಕನ್ ಹಂಟಿಂಗ್ ಕ್ರೀಡೆಗಳಲ್ಲಿ ಭಾಗವಹಿಸಲು ಇಬ್ಬರು ವೀಕ್ಷಕರನ್ನು ನಿಯೋಜಿಸಲಾಗಿದೆ. ಇದರಲ್ಲಿ ಭಾಗವಹಿಸುವ ತಂಡಗಳು ಪಾಂಟೂನ್ ಸೇತುವೆ ಮತ್ತು ಯು.ಎ.ವಿ. ಸಿಬ್ಬಂದಿ ಕೌಶಲಗಳನ್ನು ಪ್ರದರ್ಶಿಸಲಿವೆ.
ಭಾರತೀಯ ಸೇನೆಯ ವಿವಿಧ ಸಶಸ್ತ್ರಪಡೆಗಳಲ್ಲಿನ ಮೂರು ಹಂತಗಳ ಪರಿಶೀಲನೆಯ ಬಳಿಕ ಅತ್ಯುತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಈ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವುದು ಭಾರತೀಯ ಸೇನೆಯ ವೃತ್ತಿಪರತೆ ಯಾವ ಮಟ್ಟದಲ್ಲಿದೆ ಎಂಬುದರ ಪ್ರತೀಕವಾಗಿದೆ. ಈ ಸ್ಪರ್ಧೆ ಸೇನೆಯಿಂದ ಸೇನೆಯ ನಡುವೆ ಸಹಕಾರವನ್ನು ಪೋಷಿಸಲಿದ್ದು, ಭಾಗವಹಿಸುವ ರಾಷ್ಟ್ರಗಳ ನಡುವೆ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಲು ಇದು ಸಹಕಾರಿಯಾಗಲಿದೆ.
2019 ರಲ್ಲಿ ಜೈಸಲ್ಮೇರ್‌ನಲ್ಲಿ ಆರ್ಮಿ ಸ್ಕೌಟ್ಸ್ ಮಾಸ್ಟರ್ಸ್ ಸ್ಪರ್ಧೆ ನಡೆದಿತ್ತು. ಇದರಲ್ಲಿ ವಿಶ್ವದ ಎಂಟು ರಾಷ್ಟ್ರಗಳು ಪಾಲ್ಗೊಂಡಿದ್ದು, ಭಾರತ ಪ್ರಥಮ ಸ್ಥಾನ ಪಡೆದಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು