ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು

Twitter
Facebook
LinkedIn
WhatsApp
PTI1 7 2017 000189A 1

ಬೆಂಗಳೂರು: ಹೆಂಡತಿ (Wife) ಕಾಣುತ್ತಿಲ್ಲವೆಂದು ಗಂಡ (Husband), ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮಾರುತಿ ನಗರ​​ನ ಕಟ್ಟಡವೊಂದರಲ್ಲಿ ಎರಡು ಕುಟುಂಬ ವಾಸವಿದ್ದವು. 12 ವರ್ಷದ ಹಿಂದೆ ವಿವಾಹವಾಗಿದ್ದ ನವೀದ್ ಮತ್ತು ಝೀನತ್ ದಂಪತಿ ಕೆಳ ಮಹಡಿಯಲ್ಲಿ ವಾಸವಾಗಿದ್ದರು. 8 ವರ್ಷದ ಹಿಂದೆ ವಿವಾಹವಾಗಿದ್ದ ಮುಬಾರಕ್ ಮತ್ತು ಶಾಜಿಯಾ ದಂಪತಿ ಎರಡನೇ ಮಹಡಿಯಲ್ಲಿ ವಾಸವಾಗಿದ್ದರು.

ಹೀಗೆ ವಾಸವಿದ್ದ ಕುಟುಂಬಗಳ ನಡುವೆ ಅಕ್ರಮ ಸಂಬಂಧದ ಆರೋಪ ಕೇಳಿಬಂದಿದೆ. ಮುಬಾರಕ್ ಪತ್ನಿ ಶಾಜಿಯಾ, ಝೀನತ್ ​​ಪತಿ ನವೀದ್ ಜೊತೆ​ ಸಂಬಂಧ ಹೊಂದಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆ ಡಿಸೆಂಬರ್ 9 ,2022 ರಂದು ಶಾಜಿಯಾ ಮತ್ತು ನವೀದ್ ಇಬ್ಬರು ಮನೆಯಿಂದ ಹೊರಹೋದವರು ವಾಪಸ್ ಬರಲೇ ಇಲ್ಲ, ಪರಾರಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಇಬ್ಬರು ಒಟ್ಟಿಗೆ ಹೋಗಿದ್ದಾರೆಂದು ಝೀನತ್ ಮತ್ತು ಮುಬಾರಕ್ ಆರೋಪಿಸುತ್ತಿದ್ದಾರೆ.

ಈ ಸಂಬಂಧ ತಿಂಗಳ ಹಿಂದೆ ಝೀನತ್ ಮತ್ತು ಮುಬಾರಕ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಆದರೆ ದೂರು ನೀಡಿ ಒಂದು ತಿಂಗಳು ಕಳೆದರು ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಝೀನತ್ ಮತ್ತು ಮುಬಾರಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆ ಝೀನತ್ ಮತ್ತು ಮುಬಾರಕ್ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ಮಾಡಿ ಜ್ಞಾನಭಾರತಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇನ್ನು ಶಾಜಿಯಾ ಪುಟ್ಟ ಮಗುವನ್ನು ಕರೆದೊಯ್ದಿದ್ದಾಳೆ ಎಂದು ಮುಬಾರಕ್ ಭಾವುಕರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ