ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಡಿಕೆ ಬೆಲೆ ನಾಗಾಲೋಟ. ಬೆಳೆಗಾರರಲ್ಲಿ ಹರ್ಷ ಮೂಡಿಸಿದೆ ಅಡಿಕೆ!

Twitter
Facebook
LinkedIn
WhatsApp
ಅಡಿಕೆ ಬೆಲೆ ನಾಗಾಲೋಟ. ಬೆಳೆಗಾರರಲ್ಲಿ ಹರ್ಷ ಮೂಡಿಸಿದೆ ಅಡಿಕೆ!

ಉಡುಪಿ : ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಬಹುದಿನಗಳಿಂದ ಸರಿಯಾದ ಬೆಲೆ ಇಲ್ಲದೇ ಸೋರಗುತಿತ್ತು. ಆದರೆ ಈಗ ಅಡಿಕೆ ಬೆಳೆಗೆ ಬಂಪರ್ ಬೆಲೆ ಬಂದಿದ್ದು, ಪ್ರತಿ ಕ್ವಿಂಟಾಲ್‍ಗೆ 50 ಸಾವಿರ ರೂ. ಅಧಿಕ ಬೆಲೆಗೆ ಮರಾಟವಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಪುಲ್‌ ಖುಷ್‌ ಆಗಿದ್ದಾರೆ.

ಈಶಾನ್ಯ ಗಡಿರಾಜ್ಯಗಳಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಕೇಂದ್ರ ಸರ್ಕಾರ ಗಡಿಗಳನ್ನು ಬಂದ್‌ ಮಾಡಿದೆ. ಹಾಗಾಗಿ ಇಂಡೋನೇಷಿಯಾ, ಮಲೇಷಿಯಾ ದೇಶಗಳಿಂದ ಬರುತ್ತಿದ್ದ ಕಳಪೆ ಅಡಿಕೆ ನಿಂತಿದೆ. ಈ ಬೆಳೆಯ ಮೇಲೆ ಕೆಲ ಗುಟ್ಕಾ ಕಂಪನಿಗಳು ಅವಲಂಬಿತವಾಗಿವೆ. ಈಗ ಗಡಿಗಳು ಬ್ಲಾಕ್ ಆಗಿರುವುದರಿಂದ ರೈತರಿಂದಲೇ ನೇರ ಖರೀದಿ ಮಾಡುತ್ತಿವೆ. ಇದು ಬೆಲೆ ಏರಿಕೆಗೆ ಕಾರಣವಾಗಿದೆ.
ಈಗಾಗಲೇ ಹೊಸ ಅಡಿಕೆ ಮಾರುಕಟ್ಟೆ ಪ್ರವೇಶ ಮಾಡಬೇಕಿತ್ತು. ಮಳೆ ಕಾರಣದಿಂದ ಕೊಯ್ಲು, ಸಂಸ್ಕರಣೆ ಸೇರಿದಂತೆ ಎಲ್ಲಾ ಕೆಲಸಗಳು ನಿಧಾನವಾಗಿದ್ದು ಹೆಚ್ಚು ಸಂಗ್ರಹವಾಗುತ್ತಿಲ್ಲ. ಮೂರು ವರ್ಷದಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕೊಳೆರೋಗ ಬಾಧಿಸುತ್ತಿದೆ. ಇದು ಸಹ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ
ಇತ್ತೀಚೆಗೆ ರೈತರು ಅಡಿಕೆ ದಾಸ್ತಾನು ಮಾಡುವ ಸೌಲಭ್ಯ ಹೊಂದಿದ್ದು, ತಮಗೆ ಅನುಕೂಲಕರ ಸಮಯಕ್ಕೆ ತಂದು ಮಾರುಕಟ್ಟೆಯಲ್ಲಿ ಮಾರುತ್ತಿದ್ದಾರೆ. ದಿಢೀರ್ ಬೆಲೆ ಏರಿಕೆ ಲಾಭ ಪಡೆಯುವ ಉದ್ದೇಶದಿಂದ ಅಕ್ರಮ-ಸಕ್ರಮ ವ್ಯವಹಾರಸ್ಥರಲ್ಲಿ ಪೈಪೋಟಿ ಏರ್ಪಟ್ಟಿರುವುದರಿಂದ ಬೆಲೆ ಏರಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಎಂಬುದು ವ್ಯವಹಾರಸ್ಥರ ಅಭಿಪ್ರಾಯವಾಗಿದೆ.

ಫೆಬ್ರವರಿ 2020ರಲ್ಲಿ 39 ಸಾವಿರ ಆಸುಪಾಸಿನಲ್ಲಿದ್ದ ಅಡಿಕೆ ಕೆಲವೇ ತಿಂಗಳಲ್ಲಿ 42, 43 ಸಾವಿರಕ್ಕೆ ಸ್ಥಿರಗೊಂಡಿತು. 2021ರ ಆಗಸ್ಟ್ ವರೆಗೂ 38 ರಿಂದ 43 ಸಾವಿರವರೆಗೆ ಬೆಲೆ ಕಾಯ್ದುಕೊಂಡಿದೆ. ಆ. 10ರ ರಾಶಿಯ ಗರಿಷ್ಠ ಬೆಲೆ 44,099, 16ರಂದು 44,299 ರೂ, 19ರಂದು 44,099 ರೂ, 24ರಂದು 46,599 ರೂ, 25ರಂದು 47,500 ರೂ.ಗೆ ವಹಿವಾಟು ನಡೆದಿದೆ. ರೈತರಿಂದ ನೇರವಾಗಿ ಖರೀದಿಸುವ ವ್ಯವಹಾರಸ್ಥರು 49 ಸಾವಿರಕ್ಕೆ ಖರೀದಿ ಮಾಡಿ ದಾಖಲೆ ಬರೆದಿದ್ದಾರೆ.

ಬೆಲೆ ಏರಿಕೆಯು ಒಂದೆಡೆ ಖುಷಿಯ ವಿಚಾರವಾಗಿದ್ದರೆ, ಇನ್ನೊಂದೆಡೆ ವ್ಯಾಪಾರಸ್ಥರಲ್ಲಿ ಆತಂಕ ಹುಟ್ಟಿಸುತ್ತಿದೆ. 43 ಸಾವಿರಕ್ಕೆ ಖರೀದಿ ಮಾಡಿದ ಅಡಿಕೆ 48 ಸಾವಿರಕ್ಕೆ ಬಿಕರಿಯಾದರೆ ಲಾಭವಾಗುತ್ತದೆ. ಅದೇ 49 ಸಾವಿರಕ್ಕೆ ಖರೀದಿ ಮಾಡಿದ ಅಡಿಕೆ 43 ಸಾವಿರಕ್ಕೆ ಬಿಕರಿಯಾದರೆ ದೊಡ್ಡ ನಷ್ಟವಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು