ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನಾರೋಗ್ಯ ಕಾರಣ ಮುಂದಿಟ್ಟು ರಾಜೀನಾಮೆ ನೀಡಲಿದ್ದಾರೆ ಯಡಿಯೂರಪ್ಪ?

Twitter
Facebook
LinkedIn
WhatsApp
ಎಚ್ಚರಿಕೆ ತಪ್ಪಿದರೆ ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ – ಸಿಎಂ ಯಡಿಯೂರಪ್ಪ ಎಚ್ಚರಿಕೆ.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಸದ್ದು ಜೋರಾಗಿದೆ. ಇದೀಗ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು, ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಬಿಎಸ್‌ವೈ ಅವರು ಅನಾರೋಗ್ಯ ಕಾರಣ ಮುಂದಿಟ್ಟು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯಲ್ಲಿರುವ ಬಿಎಸ್‌ವೈ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ, ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಅವರ ರಾಜೀನಾಮೆಯನ್ನು ಸ್ವೀಕರಿಸಬೇಕೆ ಎಂದು ಪಕ್ಷದ ಹೈಕಮಾಂಡ್‌ ನಿರ್ಧರಿಸಬೇಕಿದೆ. ಒಂದು ವೇಳೆ ಪಕ್ಷವು ಅವರನ್ನು ಬದಲಾಯಿಸಲು ತೀರ್ಮಾನಿಸಿದರೆ, ಜುಲೈ 26 ರೊಳಗೆ ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.
ಆದರೆ ಇದುವರೆಗೂ ಮುಂದಿನ ಮುಖ್ಯಮಂತ್ರಿ ಯಾರು ಎಂಬುವುದನ್ನು ಇನ್ನೂ ಬಿಜೆಪಿ ವರಿಷ್ಟರು ತೀರ್ಮಾನಿಸಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್‌ವೈ, ಈ ಊಹಾಪೋಹಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಯವರ ಭೇಟಿಯ ನಂತರ ಮುಖ್ಯಮಂತ್ರಿ ಕಚೇರಿಯಿಂದ ಬಂದ ಹೇಳಿಕೆಯು, “ಪ್ರಧಾನಿ ಮತ್ತು ಮುಖ್ಯಮಂತ್ರಿ ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ಯೋಜನೆ ಮತ್ತು ಮೇಕೆದಾಟು ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ” ಎಂದು ಹೇಳಿದೆ.
ಯಡಿಯೂರಪ್ಪ ಅವರು ಶನಿವಾರ ತಮ್ಮ ಮಗ ವಿಜಯೇಂದ್ರ ಅವರೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು.
ರಾಜ್ಯದ ಹಲವಾರು ನಾಯಕರು ಮುಖ್ಯಮಂತ್ರಿಯ ವಿರುದ್ದ ಬಹಿರಂಗವಾಗಿಯೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ನಾಯಕತ್ವದ ವಿರುದ್ದ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಲ್, ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ ಮತ್ತು ವಿಧಾನ ಪರಿಷತ್ ಸದಸ್ಯ ಎಚ್. ​​ವಿಶ್ವನಾಥ್ ಅವರು ನಿರಂತರ ದಾಳಿ ನಡೆಸುತ್ತಲೆ ಇದ್ದಾರೆ. ಸಿಎಂ ಪುತ್ರ ವಿಜಯೇಂದ್ರ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬುವುದು ಪ್ರಮುಖ ಆರೋಪವಾಗಿದೆ.
ಇತ್ತೀಚೆಗಷ್ಟೇ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ಆಡಳಿತ ಪಕ್ಷದ ಶಾಸಕರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ ಅವರು ಮುಖ್ಯಮಂತ್ರಿಗೆ ಪಕ್ಷದಲ್ಲಿ ಬೆಂಬಲವಿದ್ದು, ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದ್ದರು. ಇದರ ನಂತರ ಕೂಡಾ ಯಡಿಯೂರಪ್ಪ ಅವರ ವಿರೋಧಿ ಬಣದ ಕಚ್ಚಾಟಗಳು ನಿಂತಿರಲಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು