ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
Twitter
Facebook
LinkedIn
WhatsApp
ವಸಂತ ಬಂಗೇರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸಂತಾಪ ಸಂದೇಶ ಪ್ರಕಟಿಸಿದ್ದು, ಬಂಗೇರ ಅವರನ್ನು ನೇರ, ನಿಷ್ಠುರ ನಡೆ-ನುಡಿಯ ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ ಎಂದು ಬಣ್ಣಿಸಿದ್ದಾರೆ.
ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) May 8, 2024
ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ.
ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು… pic.twitter.com/ZQl5oCtURk
ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗಿ, ಐದು ಬಾರಿ ಬೆಳ್ತಂಗಡಿಯಿಂದ ಶಾಸಕರಾಗಿ ಆಯೆಯಾಗಿದ್ದ ಶ್ರೀ ಕೆ.ವಸಂತ ಬಂಗೇರ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅನೇಕ ವರ್ಷಗಳ ಹಿಂದೆ ವಿಧಾನಸಭೆಯಲ್ಲಿ ನಾನು ಮತ್ತು ಶ್ರೀ ವಸಂತ ಬಂಗೇರ ಮಾತ್ರ ಪಕ್ಷದಿಂದ ಶಾಸಕರಾಗಿ ಗೆದ್ದ ಸಂದರ್ಭದ ಆ ಹೋರಾಟದ ದಿನಗಳನ್ನು ನಾನೆಂದಿಗೂ ಮರೆಯಲಾರೆ.… pic.twitter.com/NfkosXawDD
— B.S.Yediyurappa (Modi Ka Parivar) (@BSYBJP) May 8, 2024
1952ರ ಮೊದಲ ಚುನಾವಣೆಯಿಂದ 1978ರವರೆಗೆ ಬೆಳ್ತಂಗಡಿ ಕಾಂಗ್ರೆಸ್ನ ಪ್ರಬಲ ಕೋಟೆಯಾಗಿಯೇ ಉಳಿದುಕೊಂಡಿತ್ತು. ಕಾಂಗ್ರೆಸ್ ಸತತ ಏಳು ಬಾರಿ ಗೆದ್ದು, 1983ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ವಸಂತ ಬಂಗೇರ ಈ ಭದ್ರಕೋಟೆಯನ್ನು ಮುರಿದರು. ಕಾಂಗ್ರೆಸ್ನ ಹಾಲಿ ಶಾಸಕ ಕೆ ಗಂಗಾಧರ ಗೌಡ, ಈ ಮೂಲಕ ಬೆಳ್ತಂಗಡಿ ರಾಜಕೀಯಕ್ಕೆ ಬಿಜೆಪಿ ಪ್ರವೇಶ ಪಡೆಯಲು ದಾರಿ ಮಾಡಿಕೊಟ್ಟರು.
1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತ ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ನಿಂತು ಗೆಲುವು ಕಂಡರು. 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು.
ಜೆಡಿಎಸ್ ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು
ಸಾರ್ವಜನಿಕ ಜೀವನದಲ್ಲಿ ಇದ್ದಷ್ಟು ದಿನ ನೇರ-ನಿಷ್ಠುರವಾಗಿಯೇ ಬದುಕಿದವರು ವಸಂತ ಬಂಗೇರ. ಎಷ್ಟೇ ಹಿರಿಯರೇ ಇರಲಿ ಸತ್ಯವನ್ನು ಮುಖಕ್ಕೆ ಹೊಡೆತಂದೆ ಮಾತನಾಡುತ್ತಿದ್ದ ಬಂಗೇರ ಯಾರ ಮುಲಾಜಿಗೂ ಅಂಜಿದವರಲ್ಲ. ಐದು ಬಾರಿ ಶಾಸಕರಾಗಿದ್ದರೂ ಎಂದೂ ಮಂತ್ರಿ ಗಿರಿಗೆ ಲಾಬಿ ಮಾಡಿದವರಲ್ಲ. ಕೊಟ್ಟರೆ ಕೊಡಲಿ ಎಂದಷ್ಟೇ ಸುಮ್ಮನಿದ್ದವರು. ಅಂಥ ಮೇರು, ಹಿರಿಯ ನಾಯಕ ವಸಂತ ಬಂಗೇರ ಬುಧವಾರ ಇಹಲೋಕ ತ್ಯಜಿಸಿದ್ದಾರೆ.
ಅವರು ಪತ್ನಿ, ಮಕ್ಕಳು, ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ ಸೇರಿದಂತೆ ಸಹೋದರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.