ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಘಾನಿಸ್ತಾನದಲ್ಲಿ ಸೇನೆಯ ವಾಪಸಾತಿ ನಿರ್ಧಾರವನ್ನು ಸಮರ್ಥಿಸಿದ ಅಮೆರಿಕದ ಅಧ್ಯಕ್ಷರು ಜೋ ಬೈಡನ್.

Twitter
Facebook
LinkedIn
WhatsApp
ಅಪಘಾನಿಸ್ತಾನದಲ್ಲಿ ಸೇನೆಯ ವಾಪಸಾತಿ ನಿರ್ಧಾರವನ್ನು ಸಮರ್ಥಿಸಿದ ಅಮೆರಿಕದ ಅಧ್ಯಕ್ಷರು ಜೋ ಬೈಡನ್.

ವಾಷಿಂಗ್ಟನ್‌: ಅಫ್ಘಾನಿಸ್ತಾನದಲ್ಲಿ ಅಮೆರಿಕದ ಸಿಬ್ಬಂದಿ ಮೇಲೆ ದಾಳಿ ನಡೆದರೆ, ಅವರ ಕಾರ್ಯಾಚರಣೆಗೆ ಅಡ್ಡಿ ಮಾಡಿದರೆ ಅತ್ಯಂತ ಪ್ರಬಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಾಲಿಬಾನಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಅಫ್ಘಾನಿಸ್ತಾನದಿಂದ ನಮ್ಮ ಸೇನೆಯನ್ನು ಶೀಘ್ರವೇ ಕರೆಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಗಮನ ಕೇಂದ್ರೀಕರಿಸಲಾಗಿದೆ. ಆದಷ್ಟು ಬೇಗ ನಮ್ಮ ಜನರನ್ನು ಸುರಕ್ಷಿತವಾಗಿ ಇಲ್ಲಿಗೆ ಕರೆತರಲಾಗುತ್ತದೆ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನದಿಂದ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ತಮ್ಮ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿರುವ ಬೈಡನ್, ತಾಲಿಬಾನಿಗಳಿಗೆ ಅಧಿಕಾರ ಬಿಟ್ಟುಕೊಟ್ಟಿರುವ ಅಫ್ಘನ್ ನಾಯಕತ್ವವನ್ನು ದೂಷಿಸಿದ್ದಾರೆ.

“ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಕುರಿತು ತಾಲಿಬಾನಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ. ಹೀಗಿದ್ದರೂ ನಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿದರೆ ಅಥವಾ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಅಮೆರಿಕ ತೀಕ್ಷ್ಣ ರೀತಿ ಪ್ರತಿಕ್ರಿಯೆ ನೀಡಲಿದೆ” ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಈ ಹಿಂದೆ ರೂಪಿಸಿದ ಯೋಜನೆಯಂತೆ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸಲು ಬದ್ಧವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
20 ವರ್ಷಗಳ ನಂತರ ಅಫ್ಘಾನ್‌ನಿಂದ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದಂತೆ ತಾಲಿಬಾನಿಗಳು ಆಕ್ರಮಣ ಮಾಡಿ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡಿದ್ದಾರೆ. ದೇಶದಿಂದ ಸಾವಿರಾರು ಮಂದಿ ಓಡಿಹೋಗಲು ಕಾಬೂಲ್ ವಿಮಾನದತ್ತ ನುಗ್ಗುತ್ತಿದ್ದಾರೆ.
ದೊಡ್ಡಣ್ಣ’ ಅಲ್ಲ ‘ದಡ್ಡಣ್ಣ’! ಅಮೆರಿಕದ ತಲೆಯಲ್ಲಿ ಬುದ್ಧಿನೇ ಇಲ್ವಾ?

ತಾಲಿಬಾನಿಗಳ ವಶಕ್ಕೆ ಅಪಘಾನಿಸ್ತಾನ!

ಅಫ್ಘಾನಿಸ್ತಾನದಲ್ಲಿ ಕಳೆದ ಕೆಲವು ತಿಂಗಳಿಂದ, ಅಂದರೆ ಅಮೆರಿಕ ಮಿಲಿಟರಿ ಹೊರ ಹೋಗಲು ತೀರ್ಮಾನಿಸಿದ ಬಳಿಕ, ತಾಲಿಬಾನ್ ಉಗ್ರರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತಾಲಿಬಾನ್‌ನ ಸಶಸ್ತ್ರದಳ ಅನೇಕ ಪ್ರದೇಶಗಳಿಗೆ ನುಗ್ಗಿ ಹಿಂಸೆ ನಡೆಸುತ್ತಿದೆ. ಅಫ್ಘಾನಿಸ್ತಾನದ ಸೈನಿಕರು ಹಾಗೂ ಪೊಲೀಸರನ್ನ ಕಂಡರೆ ಸಾಕು ಅಲ್ಲೇ ಗುಂಡಿಕ್ಕಿ ಸಾಯಿಸುತ್ತಿದ್ದಾರೆ.

ಈಗಾಗಲೇ ಅಫ್ಘಾನಿಸ್ತಾನದ ಗಡಿ, ಬಹುತೇಕ ರಾಜ್ಯಗಳ ರಾಜಧಾನಿಗಳು ತಾಲಿಬಾನ್‌ನ ವಶಕ್ಕೆ ಸಿಕ್ಕಿದ್ದಾಗಿದೆ. ಅಫ್ಘಾನ್ ರಾಜಧಾನಿ ಕಾಬೂಲ್ ಮೇಲೆ ಉಗ್ರರ ಕೆಂಗಣ್ಣು ನೆಟ್ಟಿದೆ. ಲಕ್ಷಾಂತರ ಜನರು ಜೀವ ಉಳಿಸಿಕೊಳ್ಳಲು ಓಡಿ ಹೋಗುತ್ತಿದ್ದಾರೆ.
ಈ ಪರಿಸ್ಥಿತಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರ್ಧಾರವೇ ಕಾರಣ ಎಂದು ಅಮೆರಿಕ ಸೇರಿದಂತೆ ಹಲವು ದೇಶದ ಅಫ್ಘಾನ್ ನಾಗರಿಕರು ದೂರುತ್ತಿದ್ದಾರೆ.

ಅಮೆರಿಕರನ್ನುದ್ದೇಶಿಸಿ ಮಾತನಾಡಿರುವ ಬೈಡನ್, ‘ಈ ಮಿಷನ್ ಪೂರ್ಣಗೊಳ್ಳುತ್ತಿದ್ದಂತೆ ನಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಮುಕ್ತಾಯವಾಗಲಿದೆ. 20 ವರ್ಷಗಳ ಬಳಿಕ ಈ ಅಧ್ಯಾಯವನ್ನು ಅಂತ್ಯಗೊಳಿಸುತ್ತಿದ್ದೇವೆ. ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಿದರೂ ಸುಭದ್ರ ಅಫ್ಘಾನಿಸ್ತಾನವನ್ನು ರಚಿಸುವುದು ಸಾಧ್ಯವಿಲ್ಲ ಎಂಬುದಕ್ಕೆ ಈಗ ಕಾಣುತ್ತಿರುವ ದೃಶ್ಯಗಳೇ ಸಾಕ್ಷಿ” ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಪರಿಸ್ಥಿತಿ ಕಂಡು ಸಂಕಟವಾಗುತ್ತಿದೆ. ಆದರೆ ನಮ್ಮ ಸೇನಾ ಪಡೆಯನ್ನು ಹಿಂಪಡೆಯುವ ನಿರ್ಧಾರದ ಕುರಿತು ಪಶ್ಚಾತ್ತಾಪವಿಲ್ಲ ಎಂದಿದ್ದಾರೆ ಬೈಡನ್.
“ಅಫ್ಘಾನಿಸ್ತಾನದ ಪರಿಸ್ಥಿತಿ ಮೇಲೆ ನಿಗಾ ವಹಿಸಿರುವ ನಾಲ್ಕನೇ ಅಧ್ಯಕ್ಷ ನಾನು. ಇದೇ ಹೊಣೆಯನ್ನು ಮುಂದಿನ ಅಧ್ಯಕ್ಷರಿಗೂ ಮುಂದುವರಿಸಲು ಸಾಧ್ಯವಿಲ್ಲ. ಜೀವವನ್ನೇ ಪಣಕ್ಕಿಟ್ಟು ಮತ್ತೊಂದು ದೇಶದ ನಾಗರಿಕ ಯುದ್ಧದಲ್ಲಿ ನಿರಂತರವಾಗಿ ಹೋರಾಡುವಂತೆ ನಮ್ಮ ಪಡೆಗಳಿಗೆ ಸೂಚಿಸಲು ಸಾಧ್ಯವಿಲ್ಲ. ಇದು ಅಮೆರಿಕದ ಜನತೆಗೆ ಬೇಕಿಲ್ಲ” ಎಂದು ಹೇಳಿದ್ದಾರೆ.

“ನಾನು ಅಧಿಕಾರಕ್ಕೆ ಏರಿದ ಸಂದರ್ಭದಲ್ಲಿ ನನ್ನ ಎದುರಿಗೆ ಎರಡು ಆಯ್ಕೆಗಳಿದ್ದವು. ಒಂದು, ನಮ್ಮ ಒಪ್ಪಂದವನ್ನು ಮುಂದುವರಿಸಬೇಕಿತ್ತು ಎಂದವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು