ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ತಾನದಿಂದ ಯುಎಸ್ ಸೇನೆ ವಾಪಸ್.

Twitter
Facebook
LinkedIn
WhatsApp
ಅಫ್ಘಾನಿಸ್ತಾನದಿಂದ ಯುಎಸ್ ಸೇನೆ ವಾಪಸ್.

ಅಫ್ಘಾನಿಸ್ತಾನದಲ್ಲಿ 20 ವರ್ಷಗಳ ಸುದೀರ್ಘ ಯುದ್ಧ ಕೊನೆಗಾಣಿಸುವುದಕ್ಕೆ ಸ್ವತಃ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ದಿನಾಂಕ ನಿಗದಿಗೊಳಿಸಿದ್ದರು. ಅಫ್ಘಾನ್ ನಲ್ಲಿರುವ ತಮ್ಮ ಅಮೆರಿಕಾದ ಪ್ರಜೆಗಳು ಮತ್ತು ಸೇನೆಯನ್ನು ಆಗಸ್ಟ್ 31ರೊಳಗೆ ವಾಪಸ್ ಕರೆಸಿಕೊಳ್ಳುವುದಾಗಿ ಹೇಳಿದ್ದರು. “ಅಫ್ಘಾನಿಸ್ತಾನದಲ್ಲಿ ಸೇನಾ ಕಾರ್ಯಾಚರಣೆ ಮತ್ತು ಅಮೆರಿಕಾ ಪ್ರಜೆಗಳ ಸ್ಥಳಾಂತರ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂಬುದನ್ನು ನಾನು ಘೋಷಿಸುತ್ತಿದ್ದೇನೆ,” ಎಂದು ಯುಎಸ್ ಜನರಲ್ ಕೆನ್ನತ್ ಮೆಕೆಂಜಿ ವಾಶಿಂಗ್ಟನ್ ಟೈಮ್ಸ್’ಗೆ ಸ್ಪಷ್ಟಪಡಿಸಿದ್ದಾರೆ.

“ಮಂಗಳವಾರ ಆರಂಭಕ್ಕೂ ಮೊದಲು ಅಂದರೆ ಸೋಮವಾರ 1929 GMT ವೇಳೆಗೆ ಕಾಬೂಲ್‌ನಿಂದ ಕೊನೆಯ C-17 ವಿಮಾನ ಅಮೆರಿಕಾಗೆ ಹಾರಿತು. ಈ ರಾತ್ರಿ ಸೇನಾ ಹಿಂತೆಗೆದುಕೊಳ್ಳುವಿಕೆ ಮತ್ತು ಸ್ಥಳಾಂತರಿಸುವಿಕೆಯು ಮಿಲಿಟರಿ ಘಟಕದ ಅಂತ್ಯವನ್ನು ಸೂಚಿಸುತ್ತದೆ. ಇದರ ಜೊತೆಗೆ 2001ರ ಸೆಪ್ಟೆಂಬರ್ 11ರ ನಂತರ ಅಫ್ಘಾನಿಸ್ತಾನದಲ್ಲಿ ಪ್ರಾರಂಭವಾದ ಸುಮಾರು 20 ವರ್ಷಗಳ ಕಾರ್ಯಾಚರಣೆಯ ಅಂತ್ಯವನ್ನೂ ಸಹ ಸೂಚಿಸುತ್ತದೆ,” ಎಂದರು.

ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ತಾಲಿಬಾನ್ ಸಂಘಟನೆ:

ಅಫ್ಘಾನಿಸ್ತಾನದಿಂದ ಯುಎಸ್ ಸೇನೆ ಹಿಂತಿರುಗುವಿಕೆಯು ಸಂಪೂರ್ಣ ಸ್ವಾತಂತ್ರ್ಯದ ಸಂಕೇತವಾಗಿದೆ ಎಂದು ತಾಲಿಬಾನ್ ಸಂಘಟನೆ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ. “ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಹೆಮ್ಮೆಯಾಗುತ್ತದೆ,” ಎಂದು ತಾಲಿಬಾನ್ ಸಂಘಟನೆಯ ಹಿರಿಯ ಅಧಿಕಾರಿ ಅನಾಸ್ ಹಕ್ಕಾನಿ ಬಣ್ಣಿಸಿದ್ದಾರೆ. ಅಫ್ಘಾನಿಸ್ತಾನದ ಚೆಕ್ ಪಾಯಿಂಟ್ ಗಳಲ್ಲಿ ತಾಲಿಬಾನ್ ಉಗ್ರರು ಗುಂಡು ಸಿಡಿಸುವ ಮೂಲಕ ಸಂಭ್ರಮಿಸಿದರು. ಇದರ ಮಧ್ಯೆ ಯುಎಸ್ ಸೇನೆ ಹಿಂತೆಗೆದುಕೊಳ್ಳುವಿಕೆ ಕುರಿತು ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

1.23 ಲಕ್ಷ ಪ್ರಜೆಗಳನ್ನು ಸ್ಥಳಾಂತರಿಸಿದ ಅಮೆರಿಕಾ:
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿರುವ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುಎಸ್ ಸೇನೆ ನಿರಂತರ ಕಾರ್ಯಾಚರಣೆ ನಡೆಸಿತು. 1,23,000 ಅಮೆರಿಕಾ ಮತ್ತು ಅಫ್ಘಾನ್ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿತು. ಆದರೆ ಸ್ಥಳಾಂತರವನ್ನು ಬಯಸಿದ ಎಲ್ಲರಿಗೂ ಈ ಅವಕಾಶ ಸಿಗಲಿಲ್ಲ, ಕೆಲವರ ಸ್ಥಳಾಂತರಕ್ಕೆ ರಾಜತಾಂತ್ರಿಕ ಸಮಸ್ಯೆ ಎದುರಾಯಿತು ಎಂದು ಯುಎಸ್ ಜನರಲ್ ಕೆನ್ನತ್ ಮೆಕೆಂಜಿ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಂಘಟನೆಯನ್ನು ಮುಕ್ತವಾಗಿ ಬಿಡಲು ವಿಶ್ವಸಂಸ್ಥೆ ಭದ್ರತಾ ಸಮಿತಿ ಸಭೆಯಲ್ಲಿ ಸೋಮವಾರ ನಿರ್ಣಯವನ್ನು ಅಂಗೀಕರಿಸಲಾಯಿತು. ವಿಶ್ವಸಂಸ್ಥೆ ಸೇರಿದಂತೆ ಇತರೆ ಜಾಗತಿಕ ಸಂಸ್ಥೆಗಳನ್ನು ಗೌರವಿಸಬೇಕು ಎಂದು ಹೇಳಿದ ಭದ್ರತಾ ಸಮಿತಿಯು, ಈ ಬಗ್ಗೆ ಕಾಬೂಲ್‌ನಲ್ಲಿ ಯಾವುದೇ ರೀತಿ “ಸುರಕ್ಷಿತ ವಲಯ” ವನ್ನು ರಚಿಸಲಿಲ್ಲ. ಆದರೆ ಈಗ ಕಾಬೂಲ್ ವಿಮಾನ ನಿಲ್ದಾಣವನ್ನು ಯಾರ ಹತೋಟಿಯಲ್ಲಿರುತ್ತದೆ ಎಂಬ ಬಗ್ಗೆ ಚರ್ಚಿಸಲಾಗುತ್ತಿದೆ. ತಾಲಿಬಾನ್ ಭದ್ರತೆಯನ್ನು ನಿಯಂತ್ರಿಸುವಾಗ ಸೇನೆಯನ್ನು ನಿರ್ವಹಿಸುವಂತೆ ಟರ್ಕಿಗೆ ಕೇಳಿದ್ದು, ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಇನ್ನೂ ಪ್ರಸ್ತಾಪವನ್ನು ಒಪ್ಪಿಕೊಂಡಿಲ್ಲ.

ತಾಲಿಬಾನ್ ಮತ್ತು ಯುಎಸ್ ಸೇನೆ ಸಂಘರ್ಷದ ಹಿನ್ನೆಲೆ:
ಎರಡು ದಶಕಗಳ ಕಾಲ ಯುನೈಟೆಡ್ ಸ್ಟೇಟ್ಸ್ ಸೇನೆ ಭದ್ರತೆ ನಡುವೆ ಸುಭದ್ರವಾಗಿದ್ದ ಅಫ್ಘಾನಿಸ್ತಾನವನ್ನು ತಾಲಿಬಾನ್ ಕೇವಲ 10 ದಿನಗಳಲ್ಲೇ ಸಂಪೂರ್ಣ ಕೈವಶ ಮಾಡಿಕೊಂಡಿತು. ಅದಾಗಿ 10 ದಿನದಲ್ಲಿ ಇಡೀ ದೇಶದ ಸಂಪೂರ್ಣ ಚಿತ್ರಣವೇ ಬದಲಾಯಿತು. ಆಗಸ್ಟ್ 15ರಂದು ರಾಜಧಾನಿ ಕಾಬೂಲ್‌ಗೆ ಲಗ್ಗೆ ಇಡುವ ಮೂಲಕ ಇಡೀ ದೇಶವನ್ನು ಹಿಡಿತಕ್ಕೆ ತೆಗೆದುಕೊಂಡ ತಾಲಿಬಾನಿಗಳು ತಮ್ಮ ಕ್ರೌರ್ಯ ಪ್ರದರ್ಶಿಸಲು ಶುರು ಮಾಡಿದರು. ತಾಲಿಬಾನ್ ಉಗ್ರರ ಮುಷ್ಠಿಯಲ್ಲಿ ಸಿಲುಕಿದ ಪ್ರಜೆಗಳು ಪ್ರತಿನಿತ್ಯ ಭಯದ ನೆರಳಿನಲ್ಲೇ ಬದುಕುತ್ತಿದ್ದು, ದೇಶ ತೊರೆಯಲು ಹವಣಿಸುತ್ತಿದ್ದಾರೆ.

ಇದಕ್ಕೂ ಮೊದಲು 1996 ರಿಂದ 2001ರವರೆಗೂ ಅಫ್ಘಾನಿಸ್ತಾನದಲ್ಲಿ ಇದೇ ತಾಲಿಬಾನ್ ಉಗ್ರ ಸಂಘಟನೆಯ ಹಿಡಿತದಲ್ಲಿತ್ತು. 2001ರ ಸಪ್ಟೆಂಬರ್ 11ರಂದು ಯುನೈಟೆಡ್ ಸ್ಟೇಟ್ಸ್ ಮೇಲೆ ಅಲ್ ಖೈದಾ ಉಗ್ರರು ದಾಳಿ ನಡೆಸಿದ್ದರು. ಅಲ್ ಖೈದಾ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ ಕಾರಣಕ್ಕಾಗಿ ತಾಲಿಬಾನ್ ಮೇಲೂ ಯುಎಸ್ ಸೇನಾಪಡೆ ಕಾರ್ಯಾಚರಣೆಗೆ ಇಳಿಯಿತು. ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಫ್ಘಾನ್ ಮೇಲೆ ದಾಳಿ ನಡೆಸಿದ ಯುಎಸ್ ಸೇನೆಯು ಅಫ್ಘಾನಿಸ್ತಾನವನ್ನು 2001ರಲ್ಲಿ ತಾಲಿಬಾನ್ ಹಿಡಿತದಿಂದ ಬಿಡುಗಡೆಗೊಳಿಸಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು