ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ಥಾನದಿಂದ ಏರ್‌ಲಿಫ್ಟ್ ಮಾಡಿದ ಕೇಂದ್ರ ಸರ್ಕಾರ. ಉಳ್ಳಾಲದ ಮೆಲ್ವಿನ್ ಊರಿಗೆ.

Twitter
Facebook
LinkedIn
WhatsApp
ಅಫ್ಘಾನಿಸ್ಥಾನದಿಂದ ಏರ್‌ಲಿಫ್ಟ್ ಮಾಡಿದ ಕೇಂದ್ರ ಸರ್ಕಾರ. ಉಳ್ಳಾಲದ ಮೆಲ್ವಿನ್ ಊರಿಗೆ.

ಮಂಗಳೂರ: ಕಾಬೂಲ್‌ನಿಂದ ಭಾರತೀಯ ವಾಯುಸೇನೆ ಏರ್‌ಲಿಫ್ಟ್‌ ಮಾಡಿದವರಲ್ಲಿ ಉಳ್ಳಾಲ ಉಳಿಯ ನಿವಾಸಿ ಮೆಲ್ವಿನ್‌ ಕೂಡ ಒಬ್ಬರಾಗಿದ್ದು, ಅವರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ.

ಉಳ್ಳಾಲ ಉಳಿಯ ನಿವಾಸಿ ಮೆಲ್ವಿನ್‌ ಕಾಬೂಲ್‌ನ ನ್ಯಾಟೋ ಪಡೆಯ ಮಿಲಿಟರಿ ಬೇಸ್‌ ಕ್ಯಾಂಪ್‌ನ ಆಸ್ಪತ್ರೆಯಲ್ಲಿ ಎಲೆಕ್ಟ್ರಿಕಲ್‌ ಮೈಂಟೆನೆನ್ಸ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಭಾರತೀಯ ವಾಯಸೇನೆಯ ಸಿ 17 ವಿಮಾನವು ಉಳ್ಳಾಲದ ನಿವಾಸಿ ಮೆಲ್ವಿನ್ ಸೇರಿದಂತೆ ಒಟ್ಟು 160 ಮಂದಿಯನ್ನು ಮಂಗಳವಾರ ಬೆಳಗ್ಗೆ 5 ಗಂಟೆಗೆ ಕಾಬೂಲ್‌ನಿಂದ ಗುಜರಾತ್‌ನ ಜಾಮ್‌ನಗರದಲ್ಲಿರುವ ವಾಯುಸೇನೆ ನೆಲೆಗೆ ಕರೆತಂದಿದೆ. ಅಲ್ಲಿಂದ ಮೆಲ್ವಿನ್ ಅವರು ದಿಲ್ಲಿ ಬಳಿಕ ಬೆಂಗಳೂರು ಮಾರ್ಗವಾಗಿ ಇಂದು ಉಳ್ಳಾಲದ ಸ್ವಗೃಹಕ್ಕೆ ಆಗಮಿಸಿದ್ದಾರೆ. ಆದರೆ ಅವರ ಸಹೋದರ ಮಾತ್ರ ಅಫ್ಘಾನ್‌ನಲ್ಲೇ ಉಳಿದುಕೊಂಡಿದ್ದು ಭಾರತಕ್ಕೆ ಮರಳಲು ವಿಮಾನದ ನಿರೀಕ್ಷೆಯಲ್ಲಿದ್ದಾರೆ.
ಅಪಘಾನಿಸ್ಥಾನದ ಕಾಬೂಲ್‌ ತಾಲಿಬಾನ್‌ ವಶವಾಗುತ್ತಿದ್ದಂತೆ ಮಿಲಿಟರಿ ಬೇಸ್‌ ಕ್ಯಾಂಪ್‌ನಲ್ಲಿದ್ದ ವಿದೇಶಿಯರನ್ನು ಸ್ಥಳಾಂತರ ಮಾಡುವ ಕಾರ್ಯ ಆರಂಭಗೊಂಡಿತ್ತು. ಏಕಾಏಕಿ ಸ್ಥಳೀಯ ಅಫ್ಘಾನ್‌ ನಿವಾಸಿಗಳು ದೇಶದಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಕಾಬೂಲ್‌ನಲ್ಲಿ ಇಳಿಯಬೇಕಾಗಿದ್ದ ವಿಮಾನಗಳು ಜನಸಂದಣಿಯಿಂದ ಇಳಿಯಲು ಸಾದ್ಯವಾಗದೆ ವಾಪಸ್‌ ಹೋಗುವ ಸ್ಥಿತಿ ನಿರ್ಮಾಣವಾಯಿತು. ಈ ನಡುವೆ ಭಾರತೀಯ ರಾಯಬಾರಿ ಕಚೇರಿಯಲ್ಲಿದ್ದ ಸಿಬಂದಿಗಳನ್ನು, ಸೆಕ್ಯುರಿಟಿ ತಂಡವನ್ನು ಕರೆತರಲು ಬಂದಿದ್ದ ವಾಯಸೇನೆಯ ಸಿ 17 ವಿಮಾನದಲ್ಲಿ ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ 7 ಜನರ ಸಹಿತ ಒಟ್ಟು 160 ಮಂದಿಯನ್ನು ಮಂಗಳವಾರ ಬೆಳಗ್ಗೆ 5 ಗಂಟೆಗೆ ಕಾಬೂಲ್‌ನಿಂದ ಗುಜರಾತ್‌ನ ಜಾಮ್‌ನಗರದಲ್ಲಿರುವ ವಾಯುಸೇನೆ ನೆಲೆಗೆ ಕರೆತಂದಿದ್ದು ಅಲ್ಲಿಂದ ದಿಲ್ಲಿ ಬಳಿಕ ಬೆಂಗಳೂರು ಮಾರ್ಗವಾಗಿ ಇಂದು ಉಳ್ಳಾಲದ ಸ್ವಗೃಹಕ್ಕೆ ಆಗಮಿಸಿದೆ ಎಂದು ಮೆಲ್ವಿನ್‌ ತಿಳಿಸಿದ್ದಾರೆ.

ನನ್ನ ಸಹೋದರ ಡೆಮ್ಸಿ ಎಸಿ ಮೆಕ್ಯಾನಿಕ್‌ ಆಗಿದ್ದು ಕಾಬೂಲ್‌ನ ಮಿಲಿಟರಿ ಬೇಸ್‌ ಕ್ಯಾಂಪ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರೂ ಕಳೆದ ಎರಡು ದಿನಗಳಿಂದ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ. ಇಂಟರ್‌ನೆಟ್‌ ಅಲಭ್ಯದ ಕಾರಣ ಕೇವಲ ಸಂದೇಶ ಮಾತ್ರ ಮನೆಗೆ ಕಳುಹಿಸುತ್ತಿದ್ದು, ಸುರಕ್ಷಿತರಾಗಿರುವ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕಾಬೂಲ್‌ನಲ್ಲಿರುವ ಮಿಲಿಟರಿ ಬೇಸ್‌ ಆಗಸ್ಟ್‌ 31ರ ವರೆಗೆ ಸುರಕ್ಷಿತವಾಗಿದ್ದು, ಅಲ್ಲಿಯವರೆಗೆ ತಾಲಿಬಾನ್‌ಗಳು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ. ಬೇಸ್‌ ಖಾಲಿ ಮಾಡಲು ಆಗಸ್ಟ್‌ 31 ಗಡು ಆಗಿರುವ ಕಾರಣ ವಿದೇಶಿಯರು ತಮ್ಮ ತಮ್ಮ ದೇಶದಿಂದ ರಕ್ಷಣೆಗೆ ಆಗಮಿಸುವ ವಿಮಾನಗಳ ನಿರೀಕ್ಷೆಯಲ್ಲಿದ್ದಾರೆ. ಇನ್ನೆರಡು ದಿನಗಳಲ್ಲಿ ಕ್ಯಾಂಪ್‌ನಲ್ಲಿ ಆಹಾರದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಮಿಲಿಟರಿ ಬೇಸ್‌ ಕ್ಯಾಂಪ್‌ನಲ್ಲಿ ಕೆಲಸ ಮಾಡುವ ಅಫ್ಘಾನಿಸ್ಥಾನದ ಸ್ಥಳೀಯರು ತಾಲಿಬಾನ್‌ಗೆ ಟಾರ್ಗೆಟ್‌ ಮಾಡುವ ಮೊದಲೇ ಕ್ಯಾಂಪ್‌ನಿಂದ ತಪ್ಪಿಸಿಕೊಂಡು ಹೊರಗೆ ಹೋಗಲು ಯತ್ನಿಸುತ್ತಿದ್ದಾರೆ ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು