ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಿತ್ ಶಾ ರೌಡಿಸಂ ಮುಖ ಜನರ ಮುಂದಿಟ್ಟರೆ ಸಿ.ಪಿ.ಯೋಗೇಶ್ವರ್ ಹೆಸರು ಇತಿಹಾಸದ ಪುಟ ಸೇರುತ್ತೆ: ಉಗ್ರಪ್ಪ

Twitter
Facebook
LinkedIn
WhatsApp
363939 1673805836

ಬೆಂಗಳೂರು, ಜ.15: ಅನುಭವಿ ರಾಜಕಾರಣಿಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ರೌಡಿಸಂ ಮುಖಗಳನ್ನು ಜನರ ಮುಂದೆ ಇಡಬೇಕೆಂದು ಕೇಳಿಕೊಳ್ಳುವೆ ಎಂದು ಕಾಂಗ್ರೆಸ್ ನಾಯಕ ಉಗ್ರಪ್ಪ ಹೇಳಿದ್ದಾರೆ.

ರವಿವಾರ ಮಾಧ್ಯಮಗಳೊಂದಿಗೆ ಸಿ.ಪಿ.ಯೋಗೇಶ್ವರ್ ಆಡಿಯೋ ವಿಚಾರದ ಕುರಿತು ಮಾತನಾಡಿದ ಅವರು, ಬಿಜೆಪಿಯ ಬಂಡವಾಳವನ್ನು ಯೋಗೇಶ್ವರ್ ಬಯಲಿಗೆಳೆದರೆ ಇತಿಹಾಸದ ಪುಟಗಳಲ್ಲಿ ಸೇರುತ್ತಾರೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಆತಂಕವಾದ ಬದಲಾವಣೆಯಾಗುತ್ತಿದೆ. ರಾಜಕಾರಣಿಗಳು ದೇಶದ ಜನರಿಗೆ ಆದರ್ಶವಾಗಿರಬೇಕು. ಆದರೆ ಬಿಜೆಪಿಯ ರಾಜಕಾರಣಿಗಳು ದಿನಗಳೆದಂತೆ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ತಿಳಿಸಿದರು.

ಯೋಗೇಶ್ವರ್ ಅವರ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಆಡಿಯೋದಲ್ಲಿ ಬಿಜೆಪಿ ಒಂದು ರೌಡಿ ಮೋರ್ಚಾ ಎಂದು ಎಲ್ಲರಿಗೂ ಸಾಬೀತಾಗುತ್ತದೆ. ದೇಶದ ರಕ್ಷಣೆ ಮಾಡಬೇಕಾದ ಗೃಹ ಸಚಿವರು ರೌಡಿ ಮೋರ್ಚಾವನ್ನು ಕಟ್ಟುತ್ತಿದ್ದಾರೆ. ಬಿಜೆಪಿಯವರು ಸೋಲನ್ನು ಅಡ್ಮಿಟ್ ಮಾಡಿಕೊಂಡಿದ್ದು, ಸ್ವತಃ ಅಮಿತ್ ಶಾ ನಾವು ಈ ಭಾರಿ ಅಧಿಕಾರಕ್ಕೆ ಬರದ ಕಾರಣ ಚುನಾವಣೆ ಮೊದಲೇ ಆಪರೇಷನ್ ಕಮಲವನ್ನು ಮಾಡಬೇಕು ಎಂದಿದ್ದಾರೆ. ಅವರ ಹೇಳಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ದೇಶದ ಬಗ್ಗೆ ಏನು ಸಂದೇಶ ಹೋಗುತ್ತದೆ ಎಂದು ಅವರ ಗಮನದಲ್ಲಿಲ್ಲ ಎಂದು ಉಗ್ರಪ್ಪ ಕಿಡಿಕಾರಿದರು.

ಯತ್ನಾಳ್ ನಾಲಿಗೆಯನ್ನು ಕತ್ತರಿಸುತ್ತೇವೆ’ ಎನ್ನುವ ನಿರಾಣಿ ಮಾತುಗಳಿಗೆ ಸ್ವಯಂ ಪ್ರೇರಿತ (ಸುಮೋಟೋ) ಕೇಸ್ ದಾಖಲಿಸಬಹುದು ಎಂದ ಅವರು, ಯತ್ನಾಳ್ ಕಾರು ಚಾಲಕನ ಕೊಲೆ ನಡೆದಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಸರಕಾರ ಯಾವುದೇ ತನಿಖೆಯನ್ನು ನಡೆಸದೆ, ಪ್ರಕರಣವನ್ನೂ ದಾಖಲಿಸದೆ ಮುಚ್ಚಿ ಹಾಕಿದೆ. ಕೂಡಲೇ ಈ ಪ್ರಕರಣದ ಬಗ್ಗೆ ಸರಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಉಗ್ರಪ್ಪ ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ