ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಹತೆ ಮತ್ತು ಅದೃಷ್ಟದಿಂದ ಬೊಮ್ಮಾಯಿ ಸಿಎಂ ಆಗಿದ್ದಾರೆ: ಸಿಟಿ ರವಿ

Twitter
Facebook
LinkedIn
WhatsApp
ಅರ್ಹತೆ ಮತ್ತು ಅದೃಷ್ಟದಿಂದ ಬೊಮ್ಮಾಯಿ ಸಿಎಂ ಆಗಿದ್ದಾರೆ: ಸಿಟಿ ರವಿ

ಚಿಕ್ಕಮಗಳೂರು: “ಸಿಎಂ ಹುದ್ದೆ ಅಲಂಕರಿಸುವುದಕ್ಕೆ ಯೋಗ ಇರಬೇಕಲ್ಲವೇ?. ಈಗ ಬಸವರಾಜ ಬೊಮ್ಮಾಯಿ ಅವರಿಗೆ ಯೋಗ ಕೂಡಿ ಬಂದಿದೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ತಿಳಿಸಿದ್ದಾರೆ.

ಮಲ್ಲೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸಿಎಂ ಸ್ಥಾನದ ರೇಶ್‌ ವಿಷಯದಲ್ಲಿ ಮಾಧ್ಯಮಗಳಲ್ಲಿ ನನ್ನ ಹೆಸರು ಕೇಳಿ ಬರುತ್ತಿತ್ತು. ಅಲ್ಲದೇ, ಹಲವು ಪ್ರಭಾವಿ ನಾಯಕರ ಹೆಸರೂ ಕೇಳಿ ಬರುತ್ತಿತ್ತು. ಸಿಎಂ ಹುದ್ದೆ ಅಲಂಕರಿಸುವುದಕ್ಕೂ ಯೋಗ ಇರಬೇಕು ಅಲ್ಲವೇ?. ಬೊಮ್ಮಾಯಿ ಅವರಿಗೆ ಈಗ ಯೋಗ ಕೂಡಿಬಂದಿದೆ” ಎಂದಿದ್ದಾರೆ.
“ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತಮ ರೀತಿಯಾಗಿ ಕೆಲಸ ಮಾಡುತ್ತಾರೆ ಎನ್ನುವ ನಿರೀಕ್ಷೆ ಇದೆ. ನಾವು ಅವರಿಗೆ ಎಲ್ಲಾ ರೀತಿಯಾದ ಸಹಕಾರ ನೀಡುತ್ತೇವೆ. ರಾಜ್ಯದ ಹಿತಕ್ಕೆ ಅವರು ಮಾಡುವ ಕಾರ್ಯಕ್ಕೆ ನಮ್ಮ ಬೆಂಬಲವಿದೆ” ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಉತ್ತಮ ಸಚಿವ ಸಂಪುಟ ರಚಿಸಿ ಅವರ ನೇತೃತ್ವದಲ್ಲೇ ಮತ್ತೆ ಚುನಾವಣೆ ಗೆದ್ದು ಬರಬೇಕು. ಆ ರೀತಿಯಾಗಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ ಎನ್ನುವ ಭರವಸೆ ಇದೆ. ರಾಜ್ಯದ ಹಿತದ ಆದ್ಯತೆ ಮುಂದಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಿ” ಎಂದಿದ್ದಾರೆ.
ಮೇಕೆದಾಟು ಯೋಜನೆಯ ವಿರುದ್ದವಾಗಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರ ಉಪವಾಸ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಶೇ.30ರಷ್ಟು ತಮಿಳುನಾಡಿವರೇ ಬೆಂಗಳೂರಿನಲ್ಲಿದ್ದಾರೆ. ಎರಡು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಮೇಕೆದಾಟು ಯೋಜನೆ ಮಾಡಬೇಕು. ಈ ಬಗ್ಗೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ರಾಜಕಾರಣ ಮಾಡದೇ ಸೂಕ್ತವಾದ ತೀರ್ಮಾನ ಕೈಗೊಳ್ಳಲಿ” ಎಂದು ತಿಳಿಸಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು