ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್‌ನಲ್ಲಿ 1.12 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ!!

Twitter
Facebook
LinkedIn
WhatsApp
ಆಗಸ್ಟ್‌ನಲ್ಲಿ 1.12 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ!!

ನವದೆಹಲಿ : ಕೊರೊನಾ ಆರ್ಥಿಕ ಸಂಕಷ್ಟದ ನಡುವಲ್ಲೇ ಭಾರತ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹದಲ್ಲಿ ಹೊಸ ದಾಖಲೆಯನ್ನು ಬರೆದಿದ್ದು, ಅಗಸ್ಟ್‌ ತಿಂಗಳಲ್ಲಿ 1.12 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹ ಮಾಡಿದೆ. ವರ್ಷದ ಹಿಂದೆ ಇದೇ ತಿಂಗಳಲ್ಲಿ ಸಂಗ್ರಹಿಸಿದ್ದಕ್ಕಿಂತ ಜಿಎಸ್‌ಟಿಗಿಂತ ಈ ಬಾರಿ 30% ಹೆಚ್ಚಿನ ಮೊತ್ತ ಸರಕಾರದ ಬೊಕ್ಕಸ ತುಂಬಿದೆ.

ಸಂಗ್ರಹವಾದ 1.12 ಲಕ್ಷ ಕೋಟಿ ರೂಪಾಯಿಗಳಲ್ಲಿ ಕೇಂದ್ರ ಜಿಎಸ್‌ಟಿ 20,522 ಕೋಟಿ ರೂ.ಗಳಿದ್ದರೆ, ರಾಜ್ಯಗಳ ಪಾಲಿಗೆ 26,605 ಕೋಟಿ ರೂ.ಗಳು ಹಾಗೂ ಸಮಗ್ರ ಜಿಎಸ್‌ಟಿ 56,247 ಕೋಟಿ ರೂಪಾಯಿಗಳಾಗಿವೆ. ಇದರಲ್ಲಿ ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 26,884 ಕೋಟಿ ರೂಪಾಯಿಗಳೂ ಸೇರಿವೆ. ಸೆಸ್ ರೂಪದಲ್ಲಿ 8,646 ಕೋಟಿ ರೂ.ಗಳು ಸಂಗ್ರಹವಾಗಿವೆ ಎಂದು ವಿತ್ತ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಜುಲೈ 2021ರಲ್ಲಿ ಜಿಎಸ್‌ಟಿಯ ಕಲೆಕ್ಷನ್ 1.16 ಲಕ್ಷ ಕೋಟಿ ರೂ. ಇತ್ತು. 2020ರ ಆಗಸ್ಟ್‌ನಲ್ಲಿ 86,449 ಕೋಟಿ ರೂ. ಗಳಷ್ಟಿದ್ದ ಜಿಎಸ್‌ಟಿ ಸಂಗ್ರಹ 2019ರ ಇದೇ ತಿಂಗಳಲ್ಲಿ 98,202 ಕೋಟಿ ರೂ. ಗಳಷ್ಟಿತ್ತು. ಸತತ ಒಂಬತ್ತು ತಿಂಗಳು ಲಕ್ಷ ಕೋಟಿಗೂ ಅಧಿಕ ಸಂಗ್ರಹ ಕಂಡ ಜಿಎಸ್‌ಟಿ ಕಲೆಕ್ಷನ್ ಜೂನ್ ತಿಂಗಳಲ್ಲಿ ಕೋವಿಡ್ ಎರಡನೇ ಅಲೆಯ ಕಾರಣ ಕುಸಿತ ಕಂಡಿತ್ತು.

ಆರ್ಥಿಕ ಪ್ರಗತಿಯೊಂದಿಗೆ, ತೆರಿಗೆ ವಂಚನೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ, ಅದರಲ್ಲೂ ನಕಲಿ ಬಿಲ್ ಸೃಷ್ಟಿಕರ್ತರ ಮೇಲೆ ತೀವ್ರವಾದ ಕ್ರಮಗಳಿಂದಾಗಿ ಜಿಎಸ್‌ಟಿ ಸಂಗ್ರಹದಲ್ಲಿ ವೃದ್ಧಿಯಾಗಿದೆ. ಬರುವ ತಿಂಗಳುಗಳಲ್ಲೂ ಸಹ ಜಿಎಸ್‌ಟಿ ಕಲೆಕ್ಷನ್ ಜೋರಾಗಿರುವ ನಿರೀಕ್ಷೆಯಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು