ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ಲೈಟ್‌ನಲ್ಲಿ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಕಾನ್ಸ್‌ಟೇಬಲ್‌

Twitter
Facebook
LinkedIn
WhatsApp
ckm 11 13 750x433 1

ಹಾವೇರಿ: ಸಾಮಾನ್ಯವಾಗಿ ಸ್ನೇಹಿತರೊಂದಿಗೆ ಬರ್ತ್‌ಡೇ ಆಚರಣೆ ಮಾಡುವುದು ಕಾಮನ್. ಆದರೆ ಪೊಲೀಸ್‌ ಕಾನ್ಸ್‌ಟೇಬಲ್‌ವೊಬ್ಬರು (Police Constable) ತಮ್ಮ ತಾಯಿಯ (Mother) 63ನೇ ಜನ್ಮದಿನವನ್ನು ವಿಮಾನದಲ್ಲಿ (Flight) ಆಚರಿಸಿ ಅಪರೂಪದ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ.

ಬ್ಯಾಡಗಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹನುಮಂತಪ್ಪ ಸುಂಕದ ತಮ್ಮ ತಾಯಿ ಪಾರ್ವತವ್ವರ 63ನೇ ಹುಟ್ಟುಹಬ್ಬವನ್ನು (Birth Day) ಅದ್ಧೂರಿಯಾಗಿ ಆಚರಿಸಿದ್ದಾರೆ. ತಾಯಿಯ ಬರ್ತ್‌ಡೇ ಪ್ರಯುಕ್ತ ಇದೇ ಮೊದಲ ಬಾರಿ ತಂದೆ, ತಾಯಿ ಮತ್ತು ಮಗಳೊಂದಿಗೆ ಕಾನ್ಸ್‌ಟೇಬಲ್ ಹನುಮಂತಪ್ಪ, ವಿಮಾನದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಿಸಿದ್ದಾರೆ.

ಸದಾ ಕೃಷಿ ಕೆಲಸದಲ್ಲೇ ನಿರತರಾಗಿರುತ್ತಿದ್ದ ತಾಯಿ, ತಂದೆಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ 2 ಕೆ.ಜಿ ಕೇಕ್‌ ಅನ್ನು ಖರೀದಿಸಿ, ತನ್ನ ತಾಯಿ ಪಾರ್ವತವ್ವ, ತಂದೆ ಲಕ್ಷ್ಮಣ ಮತ್ತು ಮಗಳು ಚಂದನಾಳೊಂದಿಗೆ ವಿಮಾನವನ್ನು ಏರಿದ್ದಾರೆ. ಆ ಬಳಿಕ ಕಾನ್ಸ್‌ಟೇಬಲ್ ಹನುಮಂತಪ್ಪ ವಿಮಾನದಲ್ಲೇ ಕೇಕ್ ಕತ್ತರಿಸಿ ತನ್ನ ತಾಯಿಯ ಹುಟ್ಟುಹಬ್ಬ ಆಚರಿಸುವ ಮೂಲಕ ಸಂಭ್ರಮ ಆಚರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ