ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!

Twitter
Facebook
LinkedIn
WhatsApp
ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!

India vs Australia Final: ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ. 

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final 2023)​ ರೋಚಕತೆ ಸೃಷ್ಟಿಸಿದೆ. ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು.

ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು. ಆದರೆ, ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ (Team India) ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು. ಮಾರ್ನಸ್ ಲಾಬುಶೇನ್ (26) ಹಾಗೂ ಡೇವಿಡ್ ವಾರ್ನರ್ (43) 69 ರನ್​ಗಳ ಜೊತೆಯಾಟ ಆಡಿದರಷ್ಟೆ. 

ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ರೋಹಿತ್ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು. ಹೆಡ್ ಅವರು ಈ ಪ್ರತಿಷ್ಠಿತ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡರು.

ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿತ್ತು. ಹೆಡ್ (146) ಹಾಗೂ ಸ್ಟೀವ್ ಸ್ಮಿತ್ (95) ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್​, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್​ ಪಡೆದುಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ