ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಸ್ಕರ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್, ರಮಾನಾಥ ರೈ

Twitter
Facebook
LinkedIn
WhatsApp
ಆಸ್ಕರ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್, ರಮಾನಾಥ ರೈ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಮತ್ತು ಇತರ ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದು, 80 ವರ್ಷದ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು.

ವ್ಯಾಯಾಮ ಮಾಡುವಾಗ ಆಯತಪ್ಪಿ ಬಿದ್ದ ಆಸ್ಕರ್ ಫರ್ನಾಂಡಿಸ್. ಆಸ್ಪತ್ರೆಗೆ ದಾಖಲು

ಅವರು ಆಸ್ಕರ್ ಫರ್ನಾಂಡಿಸ್ ಅವರ ಹೆಂಡತಿಯನ್ನೂ ಭೇಟಿಯಾದರು ಮತ್ತು ಸ್ವಲ್ಪ ಸಮಯದವರೆಗೆ ಅವರೊಂದಿಗೆ ಮಾತನಾಡಿದರು.ಆಸ್ಕರ್ ಫರ್ನಾಂಡಿಸ್ ಅವರ ಮನೆಯಲ್ಲಿ ಯೋಗಾಭ್ಯಾಸ ಮಾಡುವಾಗ ತಲೆಗೆ ಪೆಟ್ಟಾಗಿದ್ದರಿಂದ ಅವರನ್ನು ಇಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ತೀವ್ರ ನಿಗಾ ಘಟಕದಲ್ಲಿರುವ 80 ವರ್ಷದ ಆಸ್ಕರ್ ಪರ್ನಾಂಡಿಸ್ ರವರನ್ನು ನೋಡಿಕೊಳ್ಳಲು ಆಸ್ಕರ್ ಅವರ ಪತ್ನಿ, ಮಗ ಮತ್ತು ಮಗಳು ಸಂಬಂಧಿಕರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ರಾಷ್ಟ್ರಮಟ್ಟದ ನಾಯಕರು ಆಸ್ಕರ್ ಅವರ ಕುಟುಂಬದವರನ್ನು ದೂರವಾಣಿಯಲ್ಲಿ ಕರೆ‌ಮಾಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದುಕೊಂಡರು ಮತ್ತು ಅವರಿಗೆ ಶುಭ ಹಾರೈಸಿದರು. ಜುಲೈ 20 ರ ಬುಧವಾರ ಎಂ ಬಿ ಪಾಟೀಲ್ ಮತ್ತು ಎಚ್ ಕೆ ಪಾಟೀಲ್ ಅವರಂತಹ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು