- ರಾಷ್ಟ್ರೀಯ
- 8:01 ಫೂರ್ವಾಹ್ನ
- ಜನವರಿ 31, 2023
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ; ನಿರ್ಮಲಾ ಸೀತಾರಾಮನ್‌ರಿಂದ ಆರ್ಥಿಕ ಸಮೀಕ್ಷೆ ಮಂಡನೆ

ದೆಹಲಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ನಾಳೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇಂದು ರಾಷ್ಟ್ರಪತಿ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಇಂದು ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ ಕೊರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಜನಪರ ಕಾರ್ಯಸೂಚಿ ನಡುವೆ ಸಮತೋಲನವನ್ನು ಕಂಡುಕೊಳ್ಳಬೇಕಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯ, ಉತ್ಪಾದನೆ, ಕೃಷಿ ಮತ್ತು ಇತರ ಪ್ರಮುಖ ಕ್ಷೇತ್ರಗಳಿಗೆ ಸುಧಾರಿತ ಹಣವನ್ನು ಕೇಂದ್ರೀಕರಿಸುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಈ ಹಿನ್ನಲೆ ಸಂಬಳ ಪಡೆಯುವ ನೌಕರರು ಮತ್ತು ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳನ್ನು ಸೀತಾರಾಮನ್ ಘೋಷಿಸುವ ನಿರೀಕ್ಷೆಯಿದೆ. ಇದರ ಜೊತೆಗೆ ಜನರ ನಿರೀಕ್ಷೆಗಳು ಸರ್ಕಾರದಿಂದ ಹೆಚ್ಚಿದೆ.