ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ; ಕಾಂಗ್ರೆಸ್​ನಿಂದ ದೂರು ದಾಖಲು

Twitter
Facebook
LinkedIn
WhatsApp
download 1

ಬೆಂಗಳೂರು: ‘ಸಿದ್ದು ನಿಜ ಕನಸುಗಳು’ ಎಂಬ ಶೀರ್ಷಿಕೆಯಡಿ ಬಿಜೆಪಿ ಇಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು ಇದನ್ನು ತಡೆಯುವಂತೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ದೂರು ನೀಡಿದೆ.

ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ಅದನ್ನು ಕೂಡಲೇ ರದ್ದು ಮಾಡಬೇಕು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಕ್ರಮವನ್ನು ರದ್ದು ಮಾಡಲು ಆಯೋಜಕರಿಗೆ ಸೂಚನೆ ನೀಡಿ ಎಂದು ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಗೆ ಕೆಪಿಸಿಸಿ ವಕ್ತಾರ ಹಾಗೂ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ದೂರು ಸಲ್ಲಿಸಿದ್ದಾರೆ.

ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜ ಕನಸು ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಅಶ್ವತ್ಥ್ ನಾರಾಯಣ “ಸಿದ್ದು ನಿಜ ಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನ ಎಂದು ಶ್ಲಾಘಿಸಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ