ಬುಧವಾರ, ಫೆಬ್ರವರಿ 8, 2023
ಇಂದಿನಿಂದ ಕರ್ನಾಟಕ vs ಸೌರಾಷ್ಟ್ರ ಸೆಮೀಸ್ ಫೈಟ್-ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಹಲ್ಲೆ-ಮದುವೆಗೂ ಮುಂಚೆ ಕಂಡೀಷನ್ಸ್ ಅಪ್ಲೈ- ಬೆಂಗಳೂರಿನ ವಧು, ವರರ ನಯಾ ಟ್ರೆಂಡ್-ಟರ್ಕಿ ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 8 ಸಾವಿರ; ಗಾಯಾಳುಗಳ ಸಂಖ್ಯೆ 35 ಸಾವಿರ, ರಕ್ಷಣಾ ಕಾರ್ಯಕ್ಕೆ ಅಡಚಣೆ-ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು-ಕಾರ್ಕಳ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ-ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು-ಬೈಕ್‌ನಲ್ಲಿ ರಾಂಚಿ ಸ್ಟೇಡಿಯಂನಿಂದ ಬಿಂದಾಸ್‌ ಆಗಿ ಹೊರಟ ಎಂ ಎಸ್ ಧೋನಿ..! ವಿಡಿಯೋ ವೈರಲ್-ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.-ಡಿಕ್ಕಿಹೊಡೆದ ಗಡಿಬಿಡಿಗೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

Twitter
Facebook
LinkedIn
WhatsApp
ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

ರೋಮ್: ಇಟಲಿಯ (Italy) ಇಶಿಯಾ ದ್ವೀಪದಲ್ಲಿರುವ (Ischia Island) ಜನನಿಬಿಡ ಬಂದರು ನಗರದಲ್ಲಿ ಭಾನುವಾರ ಭೂಕುಸಿತ (Landslide) ಉಂಟಾಗಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಶಿಯಾ ದ್ವೀಪದ ಉತ್ತರ ಭಾಗದಲ್ಲಿರುವ ಕ್ಯಾಂಪನಿಯಾದ ಮೆಟ್ರೋಪಾಲಿಟನ್ ಸಿಟಿ ಆಫ್ ನೇಪಲ್ಸ್‌ನಲ್ಲಿರುವ ಕಮ್ಯೂನ್ ಕ್ಯಾಸಮಿಸಿಯೋಲಾದಲ್ಲಿ ಭೂಕುಸಿತ ಉಂಟಾಗಿದ್ದು, ಹಲವರು ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಶಂಕಿಸಲಾಗಿದೆ. ಈಗಾಗಲೇ 3 ವಾರದ ಮಗು, ಒಂದು ಜೋಡಿ ಒಡಹುಟ್ಟಿದ ಮಕ್ಕಳು ಸೇರಿದಂತೆ 7 ಜನರ ಶವಗಳನ್ನು ಹೊರತೆಗೆಯಲಾಗಿದೆ. 

ಭಾರೀ ಭೂಕುಸಿತದಿಂದಾಗಿ ಅನೇಕ ಕಟ್ಟಡಗಳು ಕುಸಿದಿದ್ದು, ಹಲವು ವಾಹನಗಳು ಸಮುದ್ರ ಪಾಲಾಗಿದೆ ಎಂದು ವರದಿಗಳು ತಿಳಿಸಿವೆ. ಇಟಲಿಯ ಅಗ್ನಿಶಾಮಕದಳ ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಇಶಿಯಾ ದ್ವೀಪದಲ್ಲಿ 6 ಗಂಟೆಗೆ 126 ಮಿ.ಮೀ (ಸುಮಾರು 5 ಇಂಚು) ಮಳೆ ಸುರಿದಿದೆ. ಇದು ಕಳೆದ 20 ವರ್ಷಗಳಲ್ಲೇ ಸುರಿದ ಅತ್ಯಂತ ಹೆಚ್ಚಿನ ಪ್ರಮಾಣದ್ದಾಗಿದೆ. ಈ ಹಿನ್ನೆಲೆ ಭಾರೀ ಭೂಕುಸಿತ ಉಂಟಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ