ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇದೇ ಮೊದಲ ಬಾರಿಗೆ ಭಾರತೀಯ ಸಿಖ್‌ ಮಹಿಳೆಗೆ ಅಮೆರಿಕದಲ್ಲಿ ಜಡ್ಜ್‌ ಹುದ್ದೆ

Twitter
Facebook
LinkedIn
WhatsApp
whatsapp image 2022 03 20 at 14040 pm16478028851649185798 8

ವಾಷಿಂಗ್ಟನ್: ಇತ್ತೀಚಿನ ದಿನಗಳಲ್ಲಿ ಭಾರತೀಯರ (Indians) ಅಮೋಘ ಸಾಧನೆಗಳಿಗೆ ಪಾರವೇ ಇಲ್ಲದಂತಾಗಿದೆ. ವಿದೇಶಗಳಲ್ಲಿ ಭಾರತದ (India) ಕೀರ್ತಿ ಪತಾಕೆ ಹಾರಿಸುತ್ತಾ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಬೀಡಿ ಕಟ್ಟುವ ಕೆಲಸ ಹಾಗೂ ಮನೆಗೆಲಸ ಮಾಡಿಕೊಂಡಿದ್ದ ಸುರೇಂದ್ರನ್ ಕೆ. ಪಾಟೀಲ್ (Surendran K Pattel) ಅಮೆರಿಕದ ಟೆಕ್ಸಾಸ್‌ನಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಭಾರತೀಯ ಮೂಲದ ಸಿಖ್ ಮಹಿಳೆ ಮನ್‌ಪ್ರೀತ್ ಮೋನಿಕಾ ಸಿಂಗ್ (Manpreet Monica Singh) ಯುಎಸ್‌ನ (US) ಹ್ಯಾರಿಸ್‌ಕೌಂಟಿ ಸಿವಿಲ್ ಕೋರ್ಟ್ (Harris County Civil Court) ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೌದು. 1970ರಲ್ಲಿ ಮೋನಿಕಾ ಸಿಂಗ್ ಅವರ ಪೋಷಕರು ಯುಎಸ್‌ಗೆ (US) ವಲಸೆ ಬಂದು, ಹೂಸ್ಟನ್‌ನಲ್ಲಿ ನೆಲೆಸಿದ್ದರು. ಹಾಗಾಗಿ ಮೋನಿಕಾ ಸಿಂಗ್ ಹುಟ್ಟಿನಿಂದ ಯುಎಸ್‌ನಲ್ಲೇ ಬೆಳೆದರು. ಈಗ ಅವರಿಗೆ ಪತಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಕಳೆದ 20 ವರ್ಷಗಳಿಂದ ವಿಚಾರಣಾ ವಕೀಲರಾಗಿದ್ದ ಮೋನಿಕಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಲವು ನಾಗರಿಕ ಹಕ್ಕುಗಳ ಸಂಘಟನೆಗಳಲ್ಲೂ ತೊಡಗಿಸಿಕೊಂಡಿದ್ದರು. ಇದೀಗ ಅವರು ಹ್ಯಾರಿಸ್ ಕೌಂಟಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಕ್ಷಿಣ ಏಷ್ಯಾದ ನ್ಯಾಯಾಧೀಶರಾದ ಭಾರತೀಯ-ಅಮೆರಿಕನ್ ನ್ಯಾಯಾಧೀಶ ರವಿ ಸ್ಯಾಂಡಿಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಬಳಿಕ ಮಾತನಾಡಿದ ಮೋನಿಕಾ ಸಿಂಗ್, ಇದು ನನಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ನಾನು ಹೂಸ್ಟನ್ ಟೌನ್‌ನಿಂದ ಪ್ರತಿನಿಧಿಸಿದ್ದೆ. ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ. 

ಯುಎಸ್ ನಲ್ಲಿ ಅಂದಾಜು 5 ಲಕ್ಷ ಸಿಖ್ಖರಿದ್ದಾರೆ. ಅದರಲ್ಲಿ 20 ಸಾವಿರ ಮಂದಿ ಹೂಸ್ಟನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ