ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನು ಮುಂದೆ ಸಮಾಜ ಘಾತುಕ ಶಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿವಂತಿಲ್ಲ.

Twitter
Facebook
LinkedIn
WhatsApp
ಇನ್ನು ಮುಂದೆ ಸಮಾಜ ಘಾತುಕ ಶಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿವಂತಿಲ್ಲ.

ಬೆಂಗಳೂರು:ಕೆಲವು ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ ಮತ್ತು ಸಮಾಜ ಘಾತಕ ಶಕ್ತಿಗಳ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಘಟನೆಯನ್ನು ಉಲ್ಲೇಖಿಸಿ, ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್‌ ಅವರು ಶುಕ್ರವಾರ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಸುತ್ತೋಲೆಯಂತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸ್ವಾಗತ, ಬೀಳ್ಕೊಡುಗೆ ಸಂದರ್ಭದಲ್ಲಿ ಶಿಸ್ತು ಮತ್ತು ಶಿಷ್ಟಾಚಾರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

ಯಾವುದೆ ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ, ಸಮಾಜ ಘಾತಕ ಶಕ್ತಿಗಳ ಹಾಗೂ ರೌಡಿ ಶೀಟರ್‌ಗಳೊಂದಿಗೆ ಯಾವುದೆ ಸಂಬಂಧ ಹೊಂದುವಂತಿಲ್ಲ ಎಂಬುವುದನ್ನು ನೆನಪಿಸಿರುವ ಸುತ್ತೋಲೆ, “ಪೊಲೀಸ್ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿರುವುದರಿಂದ ಅಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವದಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದೆ.

“ಅಪರಾಧ ಹಿನ್ನಲೆಯ ಹಾಗೂ ಸಮಾಜ ಘಾತಕ ಶಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಬಾರದು. ಯಾವುದೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಕಾರ್ಯಕ್ರಮ ಹಮ್ಮಿಕೊಂಡಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಯ ಪೂರ್ವಾಪರ ಪರಿಶೀಲನೆ ಮಾಡಿ ಅದರಲ್ಲಿ ಭಾಗವಹಸುವುದು ಸರಿಯೆ ಎಂದು ನಿರ್ಧರಿಸಬೇಕು” ಎಂದು ಅದು ಹೇಳಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯಾಗುವುದಿಲ್ಲ ಎಂದು ತಿಳಿದ ನಂತರ, ಅಪರಾಧ ತಡೆ, ಸಂಚಾರ ನಿಯಂತ್ರಣ ಮುಂತಾದ ಉದ್ದೇಶ ಸಾಧಿಸಲಷ್ಟೇ ಭಾಗಿಯಾಗಬೇಕು ಎಂದು ಸುತ್ತೋಲೆ ಹೇಳಿದ್ದು, “ಮುಂಬಡ್ತಿ, ಬೀಳ್ಕೊಡುಗೆ ಕಾರ್ಯಕ್ರಮಗಳಿಂದ ಸಾಧ್ಯವಾದಷ್ಟು ದೂರವಿರುವುದು ಮತ್ತು ಅದನ್ನು ತಡೆಯುವುದೇ ಸೂಕ್ತ” ಎಂದು ಹೇಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು