ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ? - ಸಿದ್ದುಗೆ ಎಚ್‌ಡಿಕೆ ಪ್ರಶ್ನೆ

Twitter
Facebook
LinkedIn
WhatsApp
ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ? – ಸಿದ್ದುಗೆ ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಜಾತಿ ಗಣತಿ ವಿಚಾರದ ಬಗ್ಗೆ ಕರ್ನಾಟಕ ರಾಜಕೀಯದಲ್ಲಿ ಬಹಳ ಚರ್ಚೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದು, ಜಾತಿ ಗಣತಿ ವಿಚಾರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, “ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ? ಅದೊಂದು ಸಮೀಕ್ಷಾ ವರದಿ. ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ” ಎಂದು ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಎಲೆಕ್ಷನ್ ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?” ಎಂದು ಪ್ರಶ್ನಿಸಿದ್ದಾರೆ
“ರಾಜಕಾರಣದಲ್ಲಿ ಕ್ಷಣಕ್ಕೊಂದು ಬಣ್ಣ ಬದಲಿಸಿಕೊಂಡು ಓಡಾಡುವವರ ಬಗ್ಗೆ ನನಗೆ ಗೊತ್ತಿದೆ. ಇವರು ರಾಜಕೀಯ ಊಸರವಳ್ಳಿಗಳು, ಜನರ ಪಾಲಿನ ಮಗ್ಗುಲ ಮುಳ್ಳುಗಳು! ಮುಳ್ಳನ್ನು ಹೇಗೆ ತೆಗೆಯಬೇಕು ಎಂಬುದು ಜನರಿಗೆ ಗೊತ್ತಿದೆ, ಆ ಕಾಲವೂ ಹತ್ತಿರದಲ್ಲೇ ಇದೆ” ಎಂದಿದ್ದಾರೆ.

“ಇವರು ಅಧಿಕಾರದಲ್ಲಿದ್ದಾಗಲೇ ಕಾಂತರಾಜು ಆಯೋಗದ ವರದಿಯು ಬಂದಿತ್ತು ಆಗಲೇ ಅಂಗೀಕರಿಸಿ ಬಿಡುಗಡೆ ಮಾಡಬಹುದಿತ್ತಲ್ಲ? ಹಾಗೆ ಮಾಡಲಿಲ್ಲ, ಯಾಕೆ? ಅವಕಾಶ ಇದ್ದಾಗ ಮಾಡದೇ ಈಗ ಆಷಾಢಭೂತಿತನ ಏಕೆ? ಜನರಿಗೆ ಅರ್ಥವಾಗದೆಂಬ ಅತಿಬುದ್ಧಿವಂತಿಕೆಯೇ? ಅತಿ ಬುದ್ಧಿವಂತರೆಲ್ಲ ಆಮೇಲೆ ಏನಾದರು ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ಗೊತ್ತಿದೆ” ಎಂದರು.
“ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದು ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಸಹಿಯೇ ಇಲ್ಲದ ವರದಿ ಅಧಿಕೃತ ಹೇಗಾಗುತ್ತದೆ? ಐದು ವರ್ಷ ಆಡಳಿತ ನಡೆಸಿದವರಿಗೆ, ಸಂವಿಧಾನದ ಬಗ್ಗೆ ಹಾದಿಬೀದಿಯಲ್ಲಿ ನಿಂತು ಪಾಠ ಮಾಡುವವರಿಗೆ ಈ ಮಟ್ಟಿಗೆ ಜ್ಞಾನ ಇಲ್ಲವೇ? ಎಲ್ಲದರಲ್ಲೂ ಸಿದ್ಧಹಸ್ತರಾದರೆ ಉಪಯೋಗವೇನು? ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಈ ವರದಿನ್ನೇಕೆ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು ಎಂಬುದಕ್ಕೆ ಉತ್ತರ ನೀಡಲಿ” ಎಂದು ಆಗ್ರಹಿಸಿದ್ದಾರೆ.

ಇನ್ನು “ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು