ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಬ್ಬರ ಸ್ವಾರ್ಥಕ್ಕಾಗಿ ಧರಂಸಿಂಗ್ ಸರ್ಕಾರ ಉರುಳಿತು: ವಾಟಾಳ್ ನಾಗರಾಜ್

Twitter
Facebook
LinkedIn
WhatsApp
ಇಬ್ಬರ ಸ್ವಾರ್ಥಕ್ಕಾಗಿ ಧರಂಸಿಂಗ್ ಸರ್ಕಾರ ಉರುಳಿತು: ವಾಟಾಳ್ ನಾಗರಾಜ್

ಇಬ್ಬರು ನಾಯಕರ ಸ್ವಾರ್ಥಕ್ಕಾಗಿ ಧರಂಸಿಂಗ್ ನೇತೃತ್ವದ ಸರ್ಕಾರವನ್ನು ಉರುಳಿತು. ಆ ಮೂಲಕ ಆ ಇಬ್ಬರು ನಾಯಕರು ರಾಜ್ಯ ರಾಜಕಾರಣಕ್ಕೆ ಬರಬಾರದ ರೋಗ ತಂದಿಟ್ಟರು ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಪತ್ರಕರ್ತ ಆರ್.ಟಿ. ವಿಠ್ಠಲಮೂರ್ತಿ ಅವರು ಕರ್ನಾಟಕದ ರಾಜಕೀಯ ಕುರಿತು ಬರೆದ ‘ರಾಜ ಚರಿತೆ’ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು,‌ ಒಂದು ವೇಳೆ ಧರಂಸಿಂಗ್ ಅವರು ಪ್ರಬಲ ಸಮುದಾಯಕ್ಕೆ ಸೇರಿದವರಾಗಿದ್ದರೆ, ಅವರ ಸರ್ಕಾರವನ್ನು ಉರುಳಿಸಲು ಸಾಧ್ಯವಿತ್ತೇ? ಸಿಂಗ್‌ ಅವರು ದುರ್ಬಲ ಸಮುದಾಯಕ್ಕೆ ಸೇರಿದ್ದವರಾದ್ದರಿಂದ ಅವರ ಸರ್ಕಾರವನ್ನು ಈ ಇಬ್ಬರು ನಾಯಕರು ಪಿತೂರಿ ನಡೆಸಿ ಸರ್ಕಾರವನ್ನು ನಿರಾಯಾಸವಾಗಿ ಉರುಳಿಸಿದರು ಎಂದು ಆರೋಪಿಸಿದ್ದಾರೆ.

ಕೆಂಗಲ್‌ ಹನುಮಂತಯ್ಯ ಅವರದ್ದು ಹಲವು ಮಹಾನುಭಾವರಿದ್ದ ಸತ್ಯಹರಿಶ್ಚಂದ್ರನ ಸಂಪುಟ. ಇನ್ನು ಮುಂದೆ ಕನಸಿನಲ್ಲೂ ಅಂತಹ ಸಂಪುಟವನ್ನು ನೋಡಲು ಸಾಧ್ಯವಿಲ್ಲ. ಕೆಂಗಲ್‌ ಅವರ ಸಂಪುಟದಲ್ಲಿದ್ದ ಸಿದ್ಧಲಿಂಗಯ್ಯ ಅವರು ತಮ್ಮ ಕುಟುಂಬದವರೊಬ್ಬರ ವಿರುದ್ಧ ಆರೋಪ ಬಂದಾಗ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೆ, ಈಗಿನ ಆಡಳಿತಗಾರರ ಬಾಯಿ ದೊಡ್ಡದು. ಹಡಗನ್ನೇ ಸುಲಭವಾಗಿ ನುಂಗಿ ಜೀರ್ಣಿಸಿಕೊಳ್ಳುತ್ತಾರೆಎಂದು ಅವರು ಟೀಕಿಸಿದ್ದಾರೆ.

ಇಬ್ಬರ ಸ್ವಾರ್ಥಕ್ಕಾಗಿ ಧರಂಸಿಂಗ್ ಸರ್ಕಾರ ಉರುಳಿತು: ವಾಟಾಳ್ ನಾಗರಾಜ್

ಈಗಿನ ರಾಜಕಾರಣ ತಲುಪಿರುವ ಸ್ಥಿತಿ ನೋಡಿದರೆ ಗಾಬರಿಯಾಗುತ್ತದೆ. ಒಂದು ಕಾಲದಲ್ಲಿ ಅಡುಗೆ ಅನಿಲಕ್ಕೆ ಎರಡು ರೂಪಾಯಿ ಹೆಚ್ಚಳವಾದರೆ ರಾಜಕೀಯ ಪಕ್ಷಗಳು ಬೀದಿಗಿಳಿಯುತ್ತಿದ್ದವು. ಆದರೆ ಈಗ ಇಪ್ಪತ್ತೈದು ರೂಪಾಯಿ ಜಾಸ್ತಿಯಾದರೆ ಜನರೂ ಮಾತನಾಡುವುದಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು