
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಉಡುಪಿ: ಇಲ್ಲಿನ ಉದ್ಯಾವರ ಕನಕೋಡದಲ್ಲಿ ವಿದ್ಯುತ್ ಅಘಾತಕ್ಕೆ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಲ್ಪೆ ಕೊಡವೂರು ನಿವಾಸಿ ಮೋಕ್ಷಿತ್ ಕರ್ಕೇರ (25) ಮೃತ ದುರ್ದೈವಿ.
ಬುಧವಾರ ಸಂಜೆ ಉದ್ಯಾವರ ಕನಕೋಡದಲ್ಲಿ ಆತನ ಚಿಕಪ್ಪ ಶಂಕರ ಎಂಬವರ ಮನೆಯಲ್ಲಿದ್ದಾಗ ಜೋರಾಗಿ ಬೀಸಿದ ಗಾಳಿ ಮಳೆಗೆ ವಿದ್ಯುತ್ ಕೈ ಕೊಟ್ಟಿದ್ದು, ಅದನ್ನು ಕಂಡು ಮೈನ್ ಸ್ವಿಚ್ ಬೋರ್ಡ್ ಪರಿಶೀಲನೆ ನಡೆಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಶಾಕಿನಿಂದ ಗಂಭೀರ ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಮೋಕ್ಷಿತ್ ಕರ್ಕೇರ ಮೆಕ್ಯಾನಿಕ್ ಆಗಿ, ಡೆಕೋರೆಟ್ ಮೊದಲಾದ ಕೆಲಸಗಳನ್ನು ನಡೆಸುತ್ತಿದ್ದನು. ಬಿಡುವಿನ ವೇಳೆಯಲ್ಲಿ ತಾಯಿಯೊಂದಿಗೆ ಮಲ್ಪೆಯಲ್ಲಿ ಮೀನು ಮಾರಾಟದ ವ್ಯವಹಾರದಲ್ಲೂ ಕೈ ಜೋಡಿಸುತ್ತಿದ್ದನು. ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಇಬ್ಬರು ಪುತ್ರರಲ್ಲಿ ಮೋಕ್ಷಿತ್ ಹಿರಿಯವನಾಗಿದ್ದು, ಮನೆಗೆ ಆಧಾರವಾಗಿ ಬೆಳೆಯುತ್ತಿದ್ದನು. ಮಗನ ಅಗಲುವಿಕೆಯಿಂದ ಮನೆಯವರ ಆಕ್ರಂಧನ ಮುಗಿಲು ಮುಟ್ಟಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್