ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿಯ ಬಿಆರ್ ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರ್ಕಾರದ ಸುರ್ಪದಿಗೆ?

Twitter
Facebook
LinkedIn
WhatsApp
ಉಡುಪಿಯ ಬಿಆರ್ ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರ್ಕಾರದ ಸುರ್ಪದಿಗೆ?

ಉಡುಪಿ: ಕರ್ನಾಟಕ ಸರ್ಕಾರ ಉಡುಪಿಯ ಬಿ. ಆರ್‌. ಎಸ್ ಆಸ್ಪತ್ರೆಯನ್ನು ತನ್ನ ಸುರ್ಪದಿಗೆ ತೆಗೆದುಕೊಳ್ಳಲಿದೆ. ಕಳೆದ 6 ತಿಂಗಳಿನಿಂದ ವೈದ್ಯರು ಮತ್ತು ಸಿಬ್ಬಂದಿ ಆಸ್ಪತ್ರೆ ನಿರ್ವಹಣೆ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದರು. ವೇತನ ಸಹ ಸರಿಯಾಗಿ ಆಗುತ್ತಿರಲಿಲ್ಲ. ಬೆಂಗಳೂರಿನಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಆಸ್ಪತ್ರೆಯನ್ನು ಸುರ್ಪದಿಗೆ ತೆಗೆದುಕೊಳ್ಳುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಸಚಿವರು ಮಾತನಾಡಿ, “ಆಸ್ಪತ್ರೆಯನ್ನು ಸರ್ಕಾರವೇ ಮುನ್ನಡೆಸುತ್ತದೆ. ಕೆಲವು ಪತ್ರ ವ್ಯವಹಾರಗಳು ನಡೆದ ಮೇಲೆ ಎಲ್ಲಾ ಖರ್ಚು, ವೆಚ್ಚವನ್ನು ಸರ್ಕಾರವೇ ಭರಿಸಲಿದೆ” ಎಂದು ಹೇಳಿದ್ದಾರೆ. ಇದರಿಂದಾಗಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಉಚಿತ ಆಸ್ಪತ್ರೆಯಲ್ಲಿ ಹಲವು ತಿಂಗಳಿನಿಂದ ಉಂಟಾಗಿದ್ದ ಗೊಂದಲಕ್ಕೆ ತೆರೆ ಬೀಳಲಿದೆ. ಆಸ್ಪತ್ರೆ ನಿರ್ವಹಣೆಯೂ ಸರಿಯಾಗಿ ನಡೆಯಲಿದೆ ಎಂಬ ನಿರೀಕ್ಷೆ ಇದೆ.

ಉಚಿತ ಆಸ್ಪತ್ರೆಯಲ್ಲಿ ಕೆಲವು ತಿಂಗಳುಗಳಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪವಿದೆ. ವೈದ್ಯರಿಗೆ ಮತ್ತು ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂಬ ದೂರು ಸಹ ಇದೆ. ವೈದ್ಯರು, ಸಿಬ್ಬಂದಿಗಳು ಈ ಕುರಿತು ಹಲವಾರು ಬಾರಿ ಆಕ್ರೋಶ ಹೊರಹಾಕಿದ್ದರು. ವೇತನ ನೀಡದಿದ್ದರೆ ಪ್ರತಿಭಟನೆಯನ್ನು ಮಾಡುವುದಾಗಿಯೂ ಎಚ್ಚರಿಕೆಯನ್ನು ಕೊಟ್ಟಿದ್ದರು. ಇದರಿಂದಾಗಿ ರೋಗಿಗಳಿಗೆ ಸಂಕಷ್ಟ ಎದುರಾಗಿತ್ತು.
ಆಸ್ಪತ್ರೆ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಸರ್ಕಾರವನ್ನು ಆಗ್ರಹಿಸಿದ್ದರು. ಸಚಿವ ಡಾ. ಕೆ. ಸುಧಾಕರ್ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಶಾಸಕರ ಜೊತೆ ಈ ಕುರಿತು ಮಾಹಿತಿ ಪಡೆದಿದ್ದರು.

ದುಬೈನಲ್ಲಿ ಉದ್ಯಮಿಯಾಗಿದ್ದ ಉಡುಪಿ ಮೂಲದ ಬಿ. ಆರ್. ಶೆಟ್ಟಿ ತಂದೆ-ತಾಯಿಯ ಹೆಸರಿನಲ್ಲಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಿದ್ದರು. ಉಚಿತವಾಗಿ ಚಿಕಿತ್ಸೆಯನ್ನು ನೀಡುತ್ತಿದ್ದರು. ಉದ್ಯಮದಲ್ಲಿ ನಷ್ಟ ಉಂಟಾದ ಬಳಿಕ ಬಿ. ಆರ್. ಶೆಟ್ಟಿ ಆಸ್ಪತ್ರೆಯನ್ನು ಸರ್ಕಾರವೇ ಮುನ್ನಡೆಸಬೇಕು ಎಂದು ಮನವಿಯನ್ನು ಮಾಡಿದ್ದರು. ಈಗ ಕೆಲವು ಪತ್ರ ವ್ಯವಹಾರಗಳು ಪೂರ್ಣಗೊಂಡ ಬಳಿಕ ಆಸ್ಪತ್ರೆಯನ್ನು ಸರ್ಕಾರದ ಸುರ್ಪದಿಗೆ ತೆಗೆದುಕೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು