ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ , ಶಿವಮೊಗ್ಗ ಜಿಲ್ಲೆ ಸೇರಿದಂತೆ ಮತ್ತೆ ಆರು ಜಿಲ್ಲೆಗಳು ಅನ್‌ಲಾಕ್ – ರಾಜ್ಯ ಸರಕಾರ ಆದೇಶ.

Twitter
Facebook
LinkedIn
WhatsApp
ಉಡುಪಿ , ಶಿವಮೊಗ್ಗ ಜಿಲ್ಲೆ ಸೇರಿದಂತೆ ಮತ್ತೆ ಆರು ಜಿಲ್ಲೆಗಳು ಅನ್‌ಲಾಕ್ – ರಾಜ್ಯ ಸರಕಾರ ಆದೇಶ.

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.

ಈ ಹಿಂದೆ ರಾಜ್ಯ ಸರಕಾರ ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಜೂ.21ರಿಂದ ಶೇ.50ರಷ್ಟು ಸಾರಿಗೆ ಸಹಿತ ಸಂಪೂರ್ಣ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿತ್ತು. ಆದರೆ ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ಆ ಪಟ್ಟಿಯಿಂದ ಕೈಬಿಡಲಾಗಿತ್ತು.
ಈ ಬಗ್ಗೆ ಉಡುಪಿ ಜಿಲ್ಲೆಯನ್ನೂ ಅನ್‌ಲಾಕ್ ಮಾಡುವಂತೆ ಶಾಸಕರು ಹಾಗೂ ಸಂಸದರು ಸೇರಿದಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದ ಕಾರಣ ಇದೀಗ ಈ ಹೊಸ ಆದೇಶ ಹೊರಡಿಸಿ ಆ ಪಟ್ಟಿಗೆ ಉಡುಪಿಯನ್ನು ಸೇರಿಸಿದೆ. ಅದರಂತೆ ಬೆಳಗ್ಗೆ ಆರು ಗಂಟೆಯಿಂಜದ ಸಂಜೆ 5ಗಂಟೆಯವರೆಗೆ ಎಲ್ಲ ಅಂಗಡಿ ಮುಂಗ್ಗಟ್ಟುಗಳನ್ನು ತೆರೆಯಲು ಅನುವು ಮಾಡಿಕೊಡಲಾಗಿದೆ.

ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.

ಉತ್ತರಕನ್ನಡ, ಬೆಳಗಾವಿ, ಮಂಡ್ಯ,ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಬೆಳಿಗ್ಗೆ 5ರಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ – ಮುಂಗಟ್ಟುಗಳನ್ನು ತೆರೆಯಲು ಶನಿವಾರ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದರು. ಇದೀಗ ಮತ್ತೆ ಆರು ಜಿಲ್ಲೆಗೆ ಈ ನಿಯಮವನ್ನು ವಿಸ್ತರಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಬಸ್‌, ಮೆಟ್ರೋ ಸಂಚಾರ, ಹೋಟೆಲ್‌, ಕ್ಲಬ್‌ಗಳು, ಹೊರಾಂಗಣ ಚಿತ್ರೀಕರಣ, ಹೊರಾಂಗಣ ಕ್ರೀಡೆಗಳು (ವೀಕ್ಷಕರಿಗೆ ಅವಕಾಶ ಇಲ್ಲ), ಲಾಡ್ಜ್ ಗಳು, ರೆಸಾರ್ಟ್‌ಗಳು, ಜಿಮ್‌ಗಳು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು