ಉತ್ತರದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸಂಭವ : ಕರ್ನಾಟಕದಲ್ಲಿಯೂ ಮಳೆ ಸಾಧ್ಯತೆ
ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಆದರೆ ಜನವರಿ 24 ಮತ್ತು 26 ರ ನಡುವೆ ದೆಹಲಿಯು ಲಘು ಮಳೆ ಮತ್ತು ಮೋಡ ಕವಿದ ಆಕಾಶ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದ ಅಂತ್ಯದ ವೇಳೆಗೆ ಶೀತ ಗಾಳಿಯ ಪರಿಸ್ಥಿತಿ ಸುಧಾರಿಸುವುದರಿಂದ ಕನಿಷ್ಠ ತಾಪಮಾನ ಹೆಚ್ಚಾಗಲಿದೆ ಎಂದು ಹೇಳಿದೆ..
ಜಮ್ಮು ಕಾಶ್ಮೀರ,ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಜನವರಿ 24 ರಿಂದ 26 ರವರೆಗೆ ಲಘು ಮಳೆ ಮತ್ತು ಮೋಡ ಕವಿದ ವಾತಾವರಣವಿದೆ. ಈಗ ತಾಪಮಾನದಲ್ಲಿ ಕುಸಿತವಿದೆ, ಮುಂದಿನ 5 ರವರೆಗೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸೋಮಾ ಸೇನ್ ರಾಯ್ ತಿಳಿಸಿದ್ದಾರೆ.
ಕರ್ನಾಟಕದಲ್ಲೂ ಮಳೆಯ ನಿರೀಕ್ಷೆಯಿದ್ದು, ಜ. 24 ರಿಂದ 27ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮಾಹಿತಿಯಿಂದ ತಿಳಿದುಬಂದಿದೆ. ಕರಾವಳಿಯಲ್ಲಿ ಮೋಡ ಕವಿದ ವಾತಾವರಣವು ಇರುವ ಸಾಧ್ಯತೆ ಇದ್ದು, ಕೆಲವೆಡೆ ಹಗುರ ಮಳೆ ನಿರೀಕ್ಷಿಸಲಾಗಿದೆ.