ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿ ಅಪಘಾತ: ಸೈಕಲ್​ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಹರಿದ ಕಾರು

Twitter
Facebook
LinkedIn
WhatsApp
accident road 1

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಉತ್ತರಪ್ರದೇಶದ ಹರ್ದೋಯಿ ಜಿಲ್ಲೆ ಕೊತ್ವಾಲಿ ನಗರದಲ್ಲಿ ಸೈಕಲ್​ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಕಾರು ಹರಿದಿದೆ. ಕಾರು ಚಾಲಕ ಅಪ್ರಾಪ್ತೆ ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಕೆಲದೂರದವರೆಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಈ ಪರಿಣಾಮ ಚಕ್ರದಡಿ ಸಿಲುಕಿದ ಅಪ್ರಾಪ್ತೆಯನ್ನ ಕಾರು ಕೆಲದೂರ ಎಳೆದೊಯ್ದಿದೆ. ಅಪ್ರಾಪ್ತ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

 

ಜ.6ರ ಶುಕ್ರವಾರ ಸಂಜೆ ಕೊಚಿಂಗ್ ಕ್ಲಾಸ್​ಗೆ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಕಾರು ಹಾರಿದಿದೆ. ಈ ವೇಳೆ ವಿದ್ಯಾರ್ಥಿ ಕಾರಿನಡಿ ಸಿಲುಕಿಕೊಂಡಿದ್ದು ಕಾರು ಚಾಲಕ ಸೈಕಲ್​​ಗೆ ಡಿಕ್ಕಿ ಹೊಡೆದು ಸುಮಾರು ದೂರ ವಿದ್ಯಾರ್ಥಿಯನ್ನು ಎಳೆದೊಯ್ದಿದ್ದಾನೆ.

 ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಕಾರು ಚಾಲಕನಿಗೆ ಬೈದು ಕಾರಿನ ಹಿಂದೆ ಓಡಿದ್ದಾರೆ. ಕಾರು ನಿಂತ ಬಳಿಕ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಾರು ಚಾಲಕನನ್ನು ಥಳಿಸಿದ್ದಾರೆ. ಆಗ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ