ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕ, ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

Twitter
Facebook
LinkedIn
WhatsApp
ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕ,  ಮಾಜಿ ಸಿಎಂ  ಕಲ್ಯಾಣ್ ಸಿಂಗ್ ನಿಧನ.

ನವದೆಹಲಿ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಕಲ್ಯಾಣ್ ಸಿಂಗ್ (89) ಲಖನೌನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್ (ಎಸ್​ಜಿಪಿಜಿಐ) ಆಸ್ಪತ್ರೆಗೆ ಜುಲೈ 4ರಂದೇ ಇವರನ್ನು ಸೇರಿಸಲಾಗಿತ್ತು.

ಎಸ್​ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಅವರು ಇಂದು ಇಹಲೋಕ ತ್ಯಜಿಸಿದರು.

1991, ಜೂನ್ ತಿಂಗಳಿಂದ 1992 ಡಿಸೆಂಬರ್​ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮೊದಲ ಅಧಿಕಾರಾವಧಿಯಲ್ಲಿ ಅಯೋಧ್ಯಾದ ಬಾಬ್ರೀ ಮಸೀದಿಯನ್ನು ಕರ ಸೇವಕರು ನಾಶಪಡಿಸಿದ ಘಟನೆಯೂ ನಡೆದಿತ್ತು. ಬಾಬ್ರೀ ಮಸೀದಿ ಧ್ವಂಸಗೊಂಡ ದಿನವೇ ಕಲ್ಯಾಣ್ ಸಿಂಗ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದಲೇ ಕಲ್ಯಾಣ್ ಸಿಂಗ್​ರನ್ನು ಇಂದಿಗೂ ಹಲವರು ನೆನಪಿಸಿಕೊಳ್ಳುತ್ತಾರೆ.

ಕಲ್ಯಾಣ್ ಸಿಂಗ್ ನಿಧನಕ್ಕೇ ಪಿಎಂ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು