ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಉದ್ದವ್‌ಗೆ ಕಪಾಳಮೋಕ್ಷ’ ಎಂದ ಕೇಂದ್ರ ಸಚಿವ ರಾಣೆ ಬಂಧನಕ್ಕೆ ಪೊಲೀಸರ ತಂಡ ರಚನೆ!

Twitter
Facebook
LinkedIn
WhatsApp
‘ಉದ್ದವ್‌ಗೆ ಕಪಾಳಮೋಕ್ಷ’ ಎಂದ ಕೇಂದ್ರ ಸಚಿವ ರಾಣೆ ಬಂಧನಕ್ಕೆ ಪೊಲೀಸರ ತಂಡ ರಚನೆ!

ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ ಮತ್ತು ವಿರೋಧ ಪಕ್ಷ ಬಿಜೆಪಿಯ ಕಾರ್ಯಕರ್ತರು ಮಂಗಳವಾರ ಮುಂಬೈನಲ್ಲಿರುವ ಕೇಂದ್ರ ಸಚಿವ ನಾರಾಯಣ್ ರಾಣೆ ಅವರ ನಿವಾಸದ ಬಳಿ ಪರಸ್ಪರ ಘರ್ಷಣೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮುಖ್ಯಮಂತ್ರಿ ಉದ್ದವ್‌ ಠಾಕ್ರೆಗೆ ಸ್ವಾತಂತ್ರ್ಯದ ವರ್ಷ ಗೊತ್ತಿಲ್ಲದಿರುವುದು ನಾಚಿಕೆಗೇಡು. ಅವರಿಗೆ ಕಪಾಳಮೋಕ್ಷ ಮಾಡಬೇಕು” ಎಂದು ಸೋಮವಾರ ರಾಯಗಡ ಜಿಲ್ಲೆಯಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಚಿವ ನಾರಾಯಣ್ ರಾಣೆ ಹೇಳಿದ್ದರು. ರಾಣೆ ಅವರನ್ನು ಕೂಡಲೇ ಬಂಧಿಸುವಂತೆ ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಮಂಗಳವಾರ ಆದೇಶಿಸಿದ್ದಾರೆ.

ಅವರ ಈ ಹೇಳಿಕೆಯ ವಿರುದ್ದ ಶಿವಸೇನಾ ಯುವ ಘಟಕದ ಕಾರ್ಯಕರ್ತರು ರಾಣೆ ನಿವಾಸದ ಬಳಿಯಿರುವ ಸಾಂತಾಕ್ರೂಜ್ (ಪಶ್ಚಿಮ) ದ ಜುಹು ತಾರಾ ರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತರು ರಾಣೆ ಅವರ ಬೆಂಬಲಕ್ಕಾಗಿ ರಾಣೆ ನಿವಾಸದ ಬಳಿ ಜಮಾಯಿಸಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಕಲ್ಲುಗಳನ್ನು ತೂರಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶಿವಸೇನೆ ಮತ್ತು ಬಿಜೆಪಿ ಬೆಂಬಲಿಗರು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂನ್‌ನಲ್ಲಿ ಘರ್ಷಣೆ ನಡೆಸಿದ್ದಾರೆ. ಅಲ್ಲದೆ, ನಾಸಿಕ್ ನಗರದ ಬಿಜೆಪಿ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ನಾಗ್ಪುರದಲ್ಲಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಾಸಿಕ್, ಪುಣೆ, ಔರಂಗಾಬಾದ್‌ನ ಪೊಲೀಸ್‌ ಠಾಣೆಗಳಲ್ಲಿ ರಾಣೆ ವಿರುದ್ದ ದೂರು ದಾಖಲಾಗಿದೆ. ನಾಸಿಕ್‌ನಲ್ಲಿ ಎಫ್‌ಐಆರ್‌ ದಾಖಲಾದ ಬಳಿಕ ರಾಣೆ ಅವರನ್ನು ಬಂಧಿಸುವಂತೆ ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಆದೇಶಿಸಿದ್ದಾರೆ. ಅವರ ಆದೇಶದ ನಂತರ, ನಗರ ಪೊಲೀಸರ ತಂಡವು ಕೊಂಕಣ ಪ್ರದೇಶದ ಚಿಪ್ಲುನ್‌ಗೆ ತೆರಳಿದೆ. ರಾಣೆ ಅಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿದ್ದಾರೆ ಎಂದು ಹೇಳಲಾಗಿದೆ.

ಸಂಜಯ್ ರಾವತ್ ದೂರಿನ ಆಧಾರದ ಮೇಲೆ, ನಾಸಿಕ್‌ನಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ), 505 (2) (ಕಿಡಿಗೇಡಿತನ), 153-ಬಿ (1) (ಸಿ) (ಅಸಾಮರಸ್ಯ ಅಥವಾ ದ್ವೇಷದ ಭಾವನೆಯನ್ನು ಉಂಟುಮಾಡುವ ಸಾಧ್ಯತೆಗಳು) ಅಡಿಯಲ್ಲಿ ರಾಣೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ನಾಸಿಕ್ ಡಿಸಿಪಿ (ಅಪರಾಧ) ಸಂಜಯ್ ಬಾರ್ಕುಂಡ್ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ವಾಘ್ ನೇತೃತ್ವದಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ತಂಡವು ರಾಣೆ ಅವರನ್ನು ಬಂಧಿಸಲು ರತ್ನಗಿರಿಯ ಚಿಪ್ಲುನ್‌ಗೆ ಧಾವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಕರಣದಲ್ಲಿ ಕೇಂದ್ರ ಸಚಿವರನ್ನು ಬಂಧಿಸಲಾಗುವುದು ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ನ್ಯಾಯಾಲಯದ ಆದೇಶಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾಣೆ ಅವರು ಕೇಂದ್ರ ಸಚಿವರು ಹಾಗೂ ರಾಜ್ಯಸಭಾ ಸದಸ್ಯರಾಗಿರುವುದರಿಂದ ಬಂಧನದ ನಂತರ, ಉಪರಾಷ್ಟ್ರಪತಿ (ವೆಂಕಯ್ಯ ನಾಯ್ಡು) ಅವರಿಗೆ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು