ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎನ್‌ಐಎ ದಾಳಿ – ಭಟ್ಕಳದಲ್ಲಿ ಶಂಕಿತ ಉಗ್ರ ಸೆರೆ!

Twitter
Facebook
LinkedIn
WhatsApp
ಭಟ್ಕಳದಲ್ಲಿ NIA ದಾಳಿ: ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

ಭಟ್ಕಳ: ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ತನಿಖಾ ದಳ ಕರಾವಳಿಯಲ್ಲಿ ಸಕ್ರಿಯವಾಗಿದ್ದು, ಹಲವೆಡೆ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆಯುತ್ತಿದೆ. ಇದರ ಮುಂದುವರಿದ ಭಾಗವಾಗಿ ಇದೀಗ ಪಾಕಿಸ್ತಾನ-ಆಫ್ಘಾನಿಸ್ತಾನದ ಐಸಿಸ್‌ ಕಮಾಂಡರ್‌ಗಳ ಜತೆ ನೇರ ಸಂಪರ್ಕ ಹೊಂದಿದ್ದ ಭಟ್ಕಳ ಮೂಲದ ಶಂಕಿತ ಉಗ್ರನನ್ನು ಬಂಧಿಸಿದೆ.
ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಜಫ್ರಿ ಜವ್ಹಾರ್‌ ದಾಮುದಿ ಅಲಿಯಾಸ್‌ ಅಬು ಹಝೀರ್‌ ಅಲ್‌ ಬದ್ರಿ ಬಂಧಿತನಾಗಿದ್ದು, ಆತನಿಂದ ಮೊಬೈಲ್‌ಗಳು, ಹಾರ್ಡ್‌ ಡಿಸ್ಕ್‌ಗಳು, ಎಸ್‌ಡಿ ಕಾರ್ಡ್‌ಗಳು ಹಾಗೂ ಡಿವಿಡಿ ಸೇರಿದಂತೆ ತಾಂತ್ರಿಕ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ನಾಲ್ಕು ವರ್ಷಗಳ ಹಿಂದೆ ಐಸಿಸ್‌ ಸಂಘಟನೆಯಲ್ಲಿ ತೊಡಗಿದ್ದ ಈತನ ಸೋದರ ಅದ್ನಾ ಹಸನ್‌ ದಾಮುದಿ ಎಂಬಾತನನ್ನು ಸಹ ಬಂಧಿಸಲಾಗಿತ್ತು ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಕಾರ್ಯಾಚರಣೆ ನಡೆಸಿ ಐಸಿಸ್‌ ಸಂಘಟನೆ ನೇಮಕಾತಿಯಲ್ಲಿ ನಿರತರಾಗಿದ್ದ ಶಂಕಿತ ಉಗ್ರರಾದ ಉಮಾರ್‌ ನಿಸಾರ್‌, ತನ್ವೀರ್‌ ಅಹ್ಮದ್‌ ಭಟ್‌ ಹಾಗೂ ರಮೀಜ್‌ ಅಹ್ಮದ್‌ ಲೋನ್‌ ಎಂಬುವರನ್ನು ಬಂಧಿಸಲಾಗಿತ್ತು. ಈ ಶಂಕಿತ ಉಗ್ರರ ವಿಚಾರಣೆ ಹಾಗೂ ಆನಂತನಾಗ್‌ ಜಿಲ್ಲೆಯ ಅಚಬಲ್‌ ಪ್ರದೇಶದಲ್ಲಿನ ಆರೋಪಿಗಳ ಮನೆಗಳ ಶೋಧ ನಡೆಸಿದಾಗ ಸಿಕ್ಕಿದ್ದ ಕೆಲ ದಾಖಲೆಗಳನ್ನು ಪರಿಶೀಲಿಸಿದಾಗ ಭಟ್ಕಳದ ಜಫ್ರಿ ಕುರಿತು ಸುಳಿವು ಲಭಿಸಿತ್ತು. ಈ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಈತನ ಮೇಲೆ ನಿಗಾ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಭೂತವಾದಿಗಳಿಂದ ಪ್ರಭಾವಿತನಾಗಿದ್ದ ಜಫ್ರಿ, ಭಾರತದಲ್ಲಿ ಐಸಿಸ್‌ ಸಂಘಟನೆಯನ್ನು ಬಲಿಷ್ಠಗೊಳಿಸಲು ಟೊಂಕಕಟ್ಟಿದ್ದ. ಅಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ‘ಅಬೂ ಹಝೀರ್‌ ಅಲ್‌ ಬದ್ರಿ’ ಹೆಸರಿನಲ್ಲಿ ಖಾತೆಗಳನ್ನು ಹಾಗೂ ಯೂಟ್ಯೂಬ್‌ ಚಾನಲ್‌ ತೆರೆದು ಜಫ್ರಿ ಜಿಹಾದಿ ಬೋಧಿಸುತ್ತಿದ್ದ. ದಕ್ಷಿಣ ಭಾರತದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಆತ ಧರ್ಮ ಬೋಧನೆ ಮಾಡಿದ್ದ.

ಸಾಮಾಜಿಕ ಜಾಣತಾಣಗಳಲ್ಲಿ ಆತನ ಧ್ವನಿ ಹೊಂದಿದ್ದ ವಿಡಿಯೋ ಹಾಗೂ ಆಡಿಯೋಗಳು ಆಪ್‌ಲೋಡ್‌ ಆಗಿದ್ದವು. ತನ್ನ ಮಾತುಗಳಿಂದ ಪ್ರಭಾವಿತರಾದ ಯುವಕರನ್ನು ಸೆಳೆದು ಐಸಿಸ್‌ ಸಂಘಟನೆಗೆ ನಿಯೋಜಿಸುತ್ತಿದ್ದ. ಆ ಯುವಕರಿಗೆ ಭಾರತದ ವಿರುದ್ಧ ನಡೆಯುವ ಜಿಹಾದಿ ಯುದ್ಧದಲ್ಲಿ ಪಾಲ್ಗೊಳ್ಳುವಂತೆ ಆರೋಪಿ ಪ್ರಚೋದಿಸುತ್ತಿದ್ದ ಎಂದು ಎನ್‌ಐಎ ಹೇಳಿದೆ. ಪಾಕಿಸ್ತಾನ ಹಾಗೂ ಆಷ್ಘಾನಿಸ್ತಾನದ ಐಸಿಸ್‌ ನಾಯಕರುಗಳ ಜತೆ ನೇರ ಸಂಪರ್ಕ ಹೊಂದಿದ್ದ ಜಫ್ರಿ, ಐಸಿಸ್‌ ಕಮಾಂಡರ್‌ಗಳ ಸೂಚನೆ ಮೇರೆಗೆ ಭಾರತದಲ್ಲಿ ಐಸಿಸ್‌ಗೆ ಯುವಕರನ್ನು ನೇಮಕಾತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು