
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಮುಂಬೈ:ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಭೇಟಿಯಾಗಿದ್ದಾರೆ. ಇದು ಈ ತಿಂಗಳಲ್ಲಿ ಅವರ ನಡುವೆ ನಡೆಯುತ್ತಿರುವ ಎರಡನೆ ಸಭೆಯಾಗಿದೆ. ಮುಂದಿನ 2024 ರ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ರಚನೆಯಾಗಲಿದೆ ಎನ್ನಲಾಗಿರುವ ತೃತೀಯ ರಂಗದ ಊಹಾಪೋಹಗಳಿಗೆ ಈ ಭೇಟಿಯು ಮತ್ತಷ್ಟು ಪುಷ್ಠಿ ನೀಡಿದೆ.
ಸಭೆಯ ಬೆನ್ನಿಗೆ ಶರಾದ್ ಪವಾರ್ ನಾಳೆ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ನಾಳಿನ ಸಭೆಯು 2024 ರ ಲೋಕ ಸಭಾ ಚುನಾವಣೆ ಮಾತ್ರವಲ್ಲದೆ, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಜಂಟಿ ಹೋರಾಟ ನಡೆಸುವ ಬಗ್ಗೆ ಕೂಡಾ ಗಮನ ಹರಿಸಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇಂದು ಪ್ರಶಾಂತ್ ಕಿಶೋರ್ ಮತ್ತು ಶರದ್ ಪವಾರ್ ನಡುವಿನ ನಿವಾಸದಲ್ಲಿ ಆಂತರಿಕ ಚರ್ಚೆಗಳು ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದವು ಎಂದು ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲದೆ ಎನ್‌ಸಿಪಿಯ ಸಾಮಾನ್ಯ ಸಭೆಯು ಕೂಡಾ ನಾಳೆಯೆ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್, ಜೂನ್ 11 ರಂದು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ಸೇರುವ ಮಾತುಕತೆಗೆ ಉತ್ತೇಜನ ನೀಡಿತ್ತು.
ಮಾಜಿ ಹಣಕಾಸು ಸಚಿವ ಪ್ರಸ್ತುತ ಟಿಎಂಸಿ ಮುಖಂಡರಾಗಿರುವ ಯಶ್ವಂತ್ ಸಿನ್ಹಾ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ಮನೋಜ್ ಝಾ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಕೂಡ ಮಂಗಳವಾರ ಶರದ್ ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
2014 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯ ಪರವಾಗಿ ಕೆಲಸ ಮಾಡಿದ್ದ ಪ್ರಶಾಂತ್ ಕಿಶೋರ್ ನಂತರ ಅವರೊಂದಿಗೆ ಮುನಿಸಿಕೊಂಡಿದ್ದರು. ಅದರ ನಂತರ ಅವರು ಹಲವಾರು ಬಿಜೆಪಿ ಮೈತ್ರಿ ಕೂಟದ ವಿರುದ್ದವಾಗಿ ಚುನಾವಣೆಗಳಲ್ಲಿ ಕೆಲಸ ಮಾಡಿದ್ದರು.
ಪ್ರಶಾಂತ್ ಕಿಶೋರ್ ಅವರು ಟಿಎಂಸಿಗೆ ಮಾತ್ರವಲ್ಲದೆ, ತಮಿಳುನಾಡಿನ ಡಿಎಂಕೆಗೆ ಕೂಡಾ ಅವರು ಚುನಾವಣಾ ಕಾರ್ಯತಂತ್ರವನ್ನು ಮಾಡಿದ್ದರು.
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್