ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ- ಪ್ರಧಾನಿಯಿಂದ ಇಂದು ಚಾಲನೆ

Twitter
Facebook
LinkedIn
WhatsApp
ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ- ಪ್ರಧಾನಿಯಿಂದ ಇಂದು ಚಾಲನೆ

ಬೆಂಗಳೂರು: ಏಷ್ಯಾದ ಅತಿದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನವೆನಿಸಿರುವ ಏರೋ ಇಂಡಿಯಾ ಶೋನ 14ನೇ ಆವೃತ್ತಿಗೆ (Aero India Show) ಇಂದು ಚಾಲನೆ ಸಿಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಬೆಳಗ್ಗೆ 9:45ಕ್ಕೆ ಏರೋ ಇಂಡಿಯಾ ಶೋ ಉದ್ಘಾಟನೆ ಮಾಡುವ ನಿರೀಕ್ಷೆ ಇದೆ. ಇಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ತಾವರ್ ಸಿಂಗ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಪಾಲ್ಗೊಳ್ಳುತ್ತಿದ್ದಾರೆ.

ಇನ್ನು, ಪ್ರಧಾನಿಗಳು ಈಗಾಗಲೇ ನಿನ್ನೆಯೇ ಬೆಂಗಳೂರಿಗೆ ಆಗಮಿಸಿದ್ದು, ರಾಜಭವನದಲ್ಲಿ ರಾತ್ರಿ ತಂಗಿದ್ದಾರೆ. ನಿಗದಿಯಾಗಿರುವ ವೇಳಾಪಟ್ಟಿ ಪ್ರಕಾರ ಬೆಳಗ್ಗೆ 8:50ಕ್ಕೆ ನರೇಂದ್ರ ಮೋದಿ ರಾಜಭವನದಿಂದ ತೆರಳಿ ಹೆಚ್​ಕ್ಯೂಟಿಸಿ ಹೆಲಿಪ್ಯಾಡ್ ತಲುಪಿ 9 ಗಂಟೆಗೆ ಯಲಹಂಕದತ್ತ ಹೊರಟು, 9:20ಕ್ಕೆ ವಾಯುನೆಲೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಏರೋ ಇಂಡಿಯಾ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಥಳ ತಲುಪಲಿದ್ದಾರೆ. 9:30 ಅಥವಾ 9:45ಕ್ಕೆ ಕಾರ್ಯಕ್ರಮ ಉದ್ಘಾಟನೆ ಮಾಡುವ ಪ್ರಧಾನಿಗಳು ಸುಮಾರು ಎರಡು ಗಂಟೆ ಕಾಲ ವೈಮಾನಿಕ ಪ್ರದರ್ಶನ ವೀಕ್ಷಿಸಿ ನಂತರ ನಿರ್ಗಮಿಸಲಿದ್ದಾರೆ. ಯಲಹಂಕ ವಾಯುನೆಲೆಯಿಂದ ಮಿಲಿಟರಿ ವಿಶೇಷ ವಿಮಾನದಲ್ಲಿ ಪ್ರಧಾನಿಗಳು ತ್ರಿಪುರಾಗೆ ಹೋಗಲಿದ್ದಾರೆ.

ಇನ್ನು, ಏರೋ ಇಂಡಿಯಾ ಶೋ ಇಂದು ಆರಂಭಗೊಂಡು 5 ದಿನಗಳವರೆಗೆ ನಡೆದು ಫೆಬ್ರುವರಿ 17ರಂದು ಮುಕ್ತಾಯಗೊಳ್ಳಲಿದೆ. ಪ್ರದರ್ಶನ ಕಾರ್ಯಕ್ರಮ ನಡೆಯುವ ಯಲಹಂಕ ಸುತ್ತಮುತ್ತಲ ರಸ್ತೆಯಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ. ಈ ಮಾರ್ಗದ ರಸ್ತೆಗಳಲ್ಲಿ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಇರುವ ಎಲಿವೇಟೆಡ್ ಫ್ಲೈ ಓವರ್​ನಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿಷೇಧಿಸಲಾಗಿದೆ. ಏರೋ ಶೋನ ಪಾಸ್ ಹೊಂದಿದವರಿಗೆ ಮಾತ್ರ ಈ ಫ್ಲೈಓವರ್​ನಲ್ಲಿ ಹೋಗಲು ಅವಕಾಶ ಇರುತ್ತವೆ. ಇತರ ಸಾರ್ವಜನಿಕರು ಕೆಳಗಿನ ಸರ್ವಿಸ್ ರಸ್ತೆ ಮೂಲಕ ಹೋಗಬಹುದು. ಏರ್​ಪೋರ್ಟ್​ಗೆ ಹೋಗಬಯಸುವವರು ಹೆಣ್ಣೂರು ಜಂಕ್ಷನ್ ಮೂಲಕ ತೆರಳುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ಐದು ದಿನಗಳ ಕಾಲ ನಡೆಯುವ ಮಹಾ ವೈಮಾನಿಕ ಪ್ರದರ್ಶನದಲ್ಲಿ ಭಾರತದ ಅತ್ಯುತ್ತಮ ಯುದ್ಧವಿಮಾನಗಳು ಆಗಸದಲ್ಲಿ ಮಿಂಚು ಹರಿಸಲಿವೆ. ಅಮೆರಿಕ ಸೇರಿದಂತೆ ವಿಶ್ವದ ಅತ್ಯಂತ ಶಕ್ತಿಶಾಲಿ ಯುದ್ಧವಿಮಾನಗಳೂ ಈ ಪ್ರದರ್ಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹಾಗೆಯೇ, ರಕ್ಷಣಾ ಕ್ಷೇತ್ರದಲ್ಲಿ ಹಲವು ಮಹತ್ವದ ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ. ಏರೋ ಇಂಡಿಯಾ ಶೋ ಯಲಹಂಕದಲ್ಲಿ ಮೊದಲು ನಡೆದದ್ದು 1996ರಲ್ಲಿ. ಪ್ರತೀ ಎರಡು ವರ್ಷಗಳಿಗೊಮ್ಮೆ ಇದನ್ನು ನಡೆಸಲಾಗುತ್ತದೆ. ಇಲ್ಲಿಯವರೆಗೆ 13 ಬಾರಿ ನಡೆದಿದೆ. ಈಗಿನದ್ದು 14ನೇ ಆವೃತ್ತಿ. ಯಲಹಂಕ ಸುತ್ತಮುತ್ತಲ ಜನರಿಗೆ ಈ ಐದು ದಿನ ಕಣ್ಣಿಗೆ ಹಬ್ಬ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist