ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಪಿಎಸ್ ಅಧಿಕಾರಿಯ ಕಾರು ಡ್ಯಾಮೇಜ್ ಪ್ರಕರಣ; ನಟಿ ಡಿಂಪಲ್ ಹಯಾತಿ ವಿರುದ್ಧ ಕೇಸ್ ದಾಖಲು

Twitter
Facebook
LinkedIn
WhatsApp
304871783 653541039465110 3612072673464520016 n 4

ಐಪಿಎಸ್ ಅಧಿಕಾರಿ ರಾಹುಲ್ ಹೆಗ್ಡೆ (Rahul Hegde) ಹಾಗೂ ಟಾಲಿವುಡ್ ನಟಿ ಡಿಂಪಲ್ ಹಯಾತಿ (Dimple Hayathi) ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿತ್ತಾಟ ಈಗ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪೊಲೀಸ್ ಅಧಿಕಾರಿಯ ಕಾರನ್ನು ಡ್ಯಾಮೇಜ್ ಮಾಡಿದ ಆರೋಪದ ಮೇಲೆ ನಟಿ ಡಿಂಪಲ್ ಹಯಾತಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಇದು ನಟಿಯ ಕೋಪಕ್ಕೆ ಕಾರಣ ಆಗಿದೆ. ನಟಿ ಕಿರಿಕ್ ಮಾಡಿಕೊಂಡಿರುವುದರಿಂದ ಒಂದಷ್ಟು ಆಫರ್​ಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

104860087 887140815100139 5657068679705512274 n

ಡಿಂಪಲ್ ಹಯಾತಿ ಹಾಗೂ ಅವರ ಗೆಳೆಯ ವಿಕ್ಟರ್ ಹೈದರಾಬಾದ್​ನ ಅಪಾರ್ಟ್​ಮೆಂಟ್ ಒಂದರಲ್ಲಿ ವಾಸವಾಗಿದ್ದಾರೆ. ಇದೇ ಅಪಾರ್ಟ್​ಮೆಂಟ್​ನಲ್ಲಿ ಹೈದರಾಬಾದ್​ನ ಟ್ರಾಫಿಕ್ ಪೊಲೀಸ್ ಡೆಪ್ಯೂಟಿ ಕಮೀಷನರ್, ಐಪಿಎಸ್ ಅಧಿಕಾರಿ ರಾಹುಲ್ ಹೆಗ್ಡೆ ಸಹ ವಾಸವಿದ್ದಾರೆ. ಇವರ ಮಧ್ಯೆ ಕೆಲ ಸಮಯದಿಂದ ಪಾರ್ಕಿಂಗ್ ವಿಚಾರದಲ್ಲಿ ಕಿತ್ತಾಟ ನಡೆದಿದೆ. ನಟಿ ಈ ವಿಚಾರದಲ್ಲಿ ರಿವೇಂಜ್ ತೆಗೆದುಕೊಂಡಿದ್ದಾರೆ.

ಮೇ 14ರಂದು ಡಿಂಪಲ್ ಹಯಾತಿ ಅವರು ರಾಹುಲ್ ಕಾರಿಗೆ ಡ್ಯಾಮೇಜ್ ಮಾಡಿದ್ದಾರೆ. ಇದು ಉದ್ದೇಶಪೂರ್ವಕವಾಗಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಸಾಕ್ಷ್ಯ ಒದಗಿಸಿವೆ. ಇದನ್ನು ಆಧರಿಸಿ ನಟಿಯ ವಿರುದ್ಧ ರಾಹುಲ್ ಅವರ ಕಾರು ಡ್ರೈವರ್ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಡಿಂಪಲ್ ಹಯಾತಿಗೆ ಸಮನ್ಸ್ ನೀಡಲಾಗಿದೆ. ಸೋಮವಾರ (ಮೇ 29) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

125505855 997927317354821 7529079620572879504 n 1

ನಟಿ ಡಿಂಪಲ್ ಹಯಾತಿಯಿಂದ ರಾಹುಲ್ ಅವರಿಗೆ ಸಾಕಷ್ಟು ತೊಂದರೆ ಆಗಿದೆಯಂತೆ. ಎಲ್ಲಾದರೂ ತುರ್ತಾಗಿ ತೆರಳುವಾಗ ನಟಿ ಹೋಗುವ ದಾರಿಯನ್ನು ಬ್ಲಾಕ್ ಮಾಡಿ ರಾಹುಲ್​​ಗೆ ತೊಂದರೆ ಕೊಡುತ್ತಿದ್ದರಂತೆ. ಇಷ್ಟು ದಿನ ಅವರು ಇದನ್ನು ಸಹಿಸಿಕೊಂಡಿದ್ದರು. ಈಗ ಕಾರಿಗೆ ಹಾನಿ ಆಗಿರುವುದರಿಂದ ಅವರು ದೂರು ದಾಖಲು ಮಾಡಿದ್ದಾರೆ.  ಸದ್ಯ ಈ ಪ್ರಕರಣ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಡಿಂಪಲ್ ಹಯಾತಿ ಅವರಿಗೆ ಈಗಿನ್ನೂ 24 ವರ್ಷ. 2017ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಗಲ್ಫ್​’ ಅವರ ನಟನೆಯ ಮೊದಲ ಸಿನಿಮಾ. ಇತ್ತೀಚೆಗೆ ಅವರ ನಟನೆಯ ‘ರಾಮಬನಂ’ ಸಿನಿಮಾ ರಿಲೀಸ್ ಆಯಿತು.

299583033 476292650982747 8117623344757959015 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ