ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್​ ಹಿಡಿದು ವಾಷಿಂಗ್ಟನ್ ಸುಂದರ್; ವಿಡಿಯೋ ವೈರಲ್!

Twitter
Facebook
LinkedIn
WhatsApp
ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್​ ಹಿಡಿದು ವಾಷಿಂಗ್ಟನ್ ಸುಂದರ್; ವಿಡಿಯೋ ವೈರಲ್!

ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಸ್ಪಿನ್ ಬೌಲರ್ ವಾಷಿಂಗ್ಟನ್ ಸುಂದರ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ.

ಅನುಭವಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ. ಇನ್ನು ವಾಷಿಂಗ್ಟನ್ ಸುಂದರ್ ಒಂದೇ ಓವರ್‌ನಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ ನ್ಯೂಜಿಲ್ಯಾಂಡ್ ಗೆ ಆಘಾತ ನೀಡಿದರು. ಅವರು ತಮ್ಮ ಬೌಲಿಂಗ್ ನಲ್ಲಿ ಕಾಟ್ ಅಂಡ್ ಕ್ಯಾಚ್ ಹಿಡಿಯುವ ಮೂಲಕ ಅಚ್ಚರಿ ಮೂಡಿಸಿದರು.

ಏಕದಿನ ಸರಣಿ ಗೆದ್ದಿರುವ ಇದೀಗ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಆಡುತ್ತಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ತಂಡ ಅದ್ಭುತ ಬ್ಯಾಟಿಂಗ್ ಆರಂಭ ಪಡೆಯಿತು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಅಲನ್ ಫಿನ್ 23 ಎಸೆತಗಳಲ್ಲಿ 35 ರನ್ ಗಳಿಸಿದರು. 

ಸುಂದರ್ ಎಸೆದ 5ನೇ ಓವರ್‌ನ ಮೊದಲ ಎಸೆತದಲ್ಲಿ ಫಿನ್ ಅಲೆನ್ ಸಿಕ್ಸರ್ ಬಾರಿಸಿದರು. ನಂತರದ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಮುಂದಿನ ಮೂರು ಎಸೆತಗಳಲ್ಲಿ ಯಾವುದೇ ರನ್ ಗಳಿಸಲಿಲ್ಲ. ಓವರ್‌ನ ಕೊನೆಯ ಎಸೆತದಲ್ಲಿ ಮಾರ್ಕ್ ಚಾಪ್‌ಮನ್ ಚೆಂಡನ್ನು ಬಾರಿಸಿದರು. ಈ ವೇಳೆ ಸುಂದರ್ ಅವರ ಬಲಕ್ಕೆ ಕೆಲವು ಮೀಟರ್‌ಗಳಷ್ಟು ಜಿಗಿದು ಅತ್ಯುತ್ತಮ ಕ್ಯಾಚ್ ಪಡೆದು ಭಾರತಕ್ಕೆ ಎರಡನೇ ಯಶಸ್ಸನ್ನು ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ