ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಲಿಂಪಿಕ್ಸ್‌ನಲ್ಲಿ ಭಾರತೀಯ ಮಹಿಳಾ, ಪುರುಷ ಹಾಕಿ ತಂಡ ಸೆಮಿಫೈನಲ್‌ಗೆ: ಪ್ರಧಾನಿ ಮೋದಿ ಅಭಿನಂದನೆ

Twitter
Facebook
LinkedIn
WhatsApp
ಒಲಿಂಪಿಕ್ಸ್‌ನಲ್ಲಿ ಭಾರತೀಯ ಮಹಿಳಾ, ಪುರುಷ ಹಾಕಿ ತಂಡ ಸೆಮಿಫೈನಲ್‌ಗೆ: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ತಲುಪಿದ ಭಾರತೀಯ ಮಹಿಳಾ ಮತ್ತು ಪುರುಷರ ಹಾಕಿ ತಂಡಗಳ ಐತಿಹಾಸಿಕ ಪ್ರಯತ್ನ‌ಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಸೇರಿದಂತೆ, ಇನ್ನಿತರ ಕ್ರೀಡಾಪಟುಗಳ ಪರಿಶ್ರಮ ಗಮನಿಸಿರುವ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 40 ವರ್ಷಗಳ ಬಳಿಕ ಭಾರತೀಯ ಹಾಕಿ ತಂಡ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸುತ್ತಿದೆ.
ಈ ಸಂಬಂಧ ಪ್ರಧಾನಿ ಮೋದಿ ಟ್ವೀಟ್ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರು ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ‌ದ ಸಂದರ್ಭದಲ್ಲಿ ಹಲವಾರು ಸಂತೋಷದ ಕ್ಷಣಗಳನ್ನು ಭಾರತೀಯರು ಅನುಭವಿಸುವಂತಾಗಿದೆ. ದಾಖಲೆ ಪ್ರಮಾಣದಲ್ಲಿ ವ್ಯಾಕ್ಸಿನೇಷನ್, ದೃಢವಾದ ಜಿಎಸ್‌ಟಿ ಸೇರಿದಂತೆ ಹಲವು ಮಹತ್ವದ ಘಟನೆಗಳು ಆಗಸ್ಟ್‌ನಲ್ಲಿ ನಡೆದಿವೆ. ಜೊತೆಗೆ ಒಲಿಂಪಿಕ್ಸ್‌ನಲ್ಲಿ ಪಿ‌. ವಿ. ಸಿಂಧು ಪದಕ ಗೆದ್ದಿದ್ದು ಮಾತ್ರವಲ್ಲ, ಪುರುಷರು ಮತ್ತು ಮಹಿಳೆಯರ ಹಾಕಿ ತಂಡಗಳ ಐತಿಹಾಸಿಕ ಪ್ರಯತ್ನ ನೋಡಿದ್ದೇವೆ. 130 ಕೋಟಿ ಭಾರತೀಯರು ಅಮೃತ ಮಹೋತ್ಸವ‌ದ ಸಂಭ್ರಮದಲ್ಲಿದ್ದು, ಈ ಸಂದರ್ಭದಲ್ಲಿ ದೇಶ ಮತ್ತಷ್ಟು ಸಾಧನೆ ಮೆರೆಯುವ ಬಗ್ಗೆ ನಾನು ಆಶಾವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಭಾರತೀಯ ಮಹಿಳಾ ಹಾಕಿ ತಂಡ ಸೋಮವಾರ ಆಸ್ಟ್ರೇಲಿಯಾ ವಿರುದ್ಧ 1 – 0 ಅಂತರದಲ್ಲಿ ಜಯಗಳಿಸಿ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿ ಐತಿಹಾಸಿಕ ದಾಖಲೆ ಮಾಡಿದೆ.
ಈ ಸಂಬಂಧ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸಹ ಭಾರತೀಯ ಮಹಿಳಾ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ. ಅಲ್ಲದೆ ರಾಜ್ಯಸಭೆಯಲ್ಲಿಂದು  ಪಿ. ವಿ. ಸಿಂಧು ಕಂಚು ಪದಕ ಪಡೆದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಇಂದು ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಎಂ. ವೆಂಕಯ್ಯನಾಯ್ಡು ವಿಷಯ ಪ್ರಸ್ತಾಪಿಸಿ, ಸತತ ಎರಡು ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಎರಡು ಪದಕ ಪಡೆದ ಪ್ರಥಮ ಮಹಿಳಾ ಕ್ರೀಡಾಪಟು ಎಂಬ ದಾಖಲೆಯನ್ನು ಸಿಂಧು ಬರೆದಿದ್ದಾರೆ ಎಂದು ತಿಳಿಸಿದಾಗ, ಸದಸ್ಯರು ಮೇಜು ತಟ್ಟಿ ಅಭಿನಂದನೆ ಸಲ್ಲಿಸಿದರು.
ಇದು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ನಿರೀಕ್ಷಿಸಲಾಗುವ ಸತತ ಯಶಸ್ಸಿನ ಸಂಕೇತವಾಗಿದೆ. ಕ್ರೀಡಾಪಟುಗಳ ಕುಟುಂಬದಲ್ಲೇ ಜನಿಸಿದ ಸಿಂಧು ಅವರು, ತಮ್ಮ 12ನೇ ವಯಸ್ಸಿನಲ್ಲೇ ಬ್ಯಾಡ್ಮಿಂಟನ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡರು. ತರಬೇತಿಗಾಗಿ ತಮ್ಮ ತಂದೆಯೊಂದಿಗೆ 120 ಕಿಲೋ ಮೀಟರ್ ಹೋಗುತ್ತಿದ್ದರು ಎಂದ ಸಭಾಪತಿಯವರು, ಅವರು ಕ್ರೀಡಾ ಸಾಧನೆಗಾಗಿ ಮಾಡುತ್ತಿದ್ದ ಕಠಿಣ ಪರಿಶ್ರಮವನ್ನು ತಾವು ಕಣ್ಣಾರೆ ಕಂಡಿರುವುದಾಗಿಯೂ ತಿಳಿಸಿ, ಸಿಂಧು ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು