ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕದ್ದಾಲಿಕೆ ಮೂಲಕ ಬಿಜೆಪಿ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿದೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
ಕದ್ದಾಲಿಕೆ ಮೂಲಕ ಬಿಜೆಪಿ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿದೆ: ಸಿದ್ದರಾಮಯ್ಯ

ಬೆಂಗಳೂರು: ಪೆಗಾಸಸ್ ಸಾಫ್ಟ್ ವೇರ್ ಬಳಸಿ ಪ್ರತಿಪಕ್ಷಗಳ ನಾಯಕರ ಆಪ್ತರ ಫೋನ್ ಕದ್ದಾಲಿಕೆ ನಡೆದಿದೆ ಎನ್ನುವ ಸುದ್ದಿ ಹೊರಬೀಳುತ್ತಿದ್ದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದು ಬಿಜೆಪಿಯವರ ಡರ್ಟಿ ಗೇಮ್ ಎಂದು ಕರೆದು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿ ” ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾಗಿಯಾಗಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ. ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ
ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ. ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ.
ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು ಎಂದು ಕಿಡಿಕಾರಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು