ಭಾನುವಾರ, ಮೇ 26, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ

Twitter
Facebook
LinkedIn
WhatsApp
crime 2 2
 

ಚಿಕ್ಕಬಳ್ಳಾಪುರ: ಸದ್ಯದಲ್ಲೇ ಕನ್ನಡ ಸೇರಿ ಎಲ್ಲಾ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್, ಇಂಜಿನಿಯರ್ ಶಿಕ್ಷಣ ಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದರು.

ಚಿಕ್ಕಬಳ್ಳಾಪುರದ (Chikkaballapur) ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ ಖಾಸಗಿ ಮೆಡಿಕಲ್ ಕಾಲೇಜು (Medical College) ಲೋಕಾರ್ಪಣೆ ಮಾಡಿದ ಅವರು, ಬಡವರನ್ನು ವೋಟ್ ಬ್ಯಾಂಕ್ ಎಂದು ಪರಿಗಣಸಿದ್ದ ದೇಶದ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರ ಬದಲಾಯಿಸಿದೆ. ಬಡವರ ಮಕ್ಕಳು ಕನ್ನಡದಲ್ಲಿ ವೈದ್ಯಕೀಯ ಓದುವಂತಹ ಸೌಲಭ್ಯಗಳನ್ನು ನಾವು ಕಲ್ಪಿಸಿದ್ದೇವೆ. ಕನ್ನಡ ಮಾತ್ರವಲ್ಲದೆ, ಅನೇಕ ಪ್ರಾಂತೀಯ ಭಾಷೆಗಳಲ್ಲಿ ಮಕ್ಕಳು ಇಂದು ವೈದ್ಯಕೀಯ ವಿಜ್ಞಾನ ಓದುವಂತೆ ನಾವು ಹೊಸ ವ್ಯವಸ್ಥೆಯನ್ನು ಸದ್ಯದಲ್ಲೇ ಎಲ್ಲಾ ಕಡೆಗೂ ತರಲಿದ್ದೇವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾಗಿದೆ. ಇಂತಹ ಜನ್ಮಭೂಮಿಗೆ ಬಂದಿದ್ದು ನನ್ನ ಪುಣ್ಯ. ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು. ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ ಎಂದರು.

ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ. ಬಡವರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ. ಬಿಜೆಪಿಯವರ ತೊಂದರೆಯನ್ನು ಬಿಜೆಪಿ ಅರಿತು ಅದಕ್ಕೆ ಪರಿಹಾರವನ್ನು ಕಂಡುಹಿಡಿದಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದ ಅವರು ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. 

ಆರೋಗ್ಯದ ಜೊತೆಗೆ ಮಹಿಳೆಯರ ಕಲ್ಯಾಣ ನಮ್ಮ ಸರ್ಕಾರದ ಗುರಿ. ಗ್ರಾಮಗಳಲ್ಲಿ ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಶಕ್ತಿಕರಣವಾಗುತ್ತಿದೆ ಎಂದು ಹೇಳಿದರು. ಅಲ್ಲದೆ, ಸಾಯಿಬಾಬಾ ಜೊತೆ ನನಗೆ ನಿಕಟ ಸಂಬಂಧ ಇತ್ತು ಎಂದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ