ಮಂಗಳವಾರ, ಅಕ್ಟೋಬರ್ 3, 2023
ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!-ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರಾಯ್ ನಿಧನ

Twitter
Facebook
LinkedIn
WhatsApp
mandip rai

ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. 73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮುಂಬೈನವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ ಮಂದೀಪ್ ರಾಯ್ ಕನ್ನಡ ಚಿತ್ರರಂಗಕ್ಕೆ ಕಾಲಿರಿಸಿದರು.

ಕಂಪ್ಯೂಟರ್‌ ಸೈನ್ಸ್‌, ಆಟೋಮೊಬೈಲ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದ ಮಂದೀಪ್ ರಾಯ್, ನಂತರ ಐಬಿಎಂ ಹಾಗೂ ಟಿಸಿಎಸ್‌ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಈ ವೇಳೆ ಶಂಕರ್ ನಾಗ್ ಅವರ ನಿರ್ದೇಶನದ ‘ಮಿಂಚಿನ ಓಟ’ ಚಿತ್ರದಲ್ಲಿ ಮಂದೀಪ್ ಬಣ್ಣ ಹಚ್ಚಿದ್ದರು. ಒಂಚೂರು ಕನ್ನಡ ಭಾಷೆ ಬಾರದ ಮಂದೀಪ್ ರಾಯ್ ‘ಮಿಂಚಿನ ಓಟ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದರು.

ಬಳಿಕ ಮಂದೀಪ್ ರಾಯ್ ಅವರು, ದೇವರ ಆಟ, ಬಾಡದ ಹೂ, ನನ್ನವರು, ಅಂತಿಮ ಘಟ್ಟ, ಏಳು ಸುತ್ತಿನ ಕೋಟೆ, ಆಕಸ್ಮಿಕ, ಅಗ್ನಿ ಐಪಿಎಸ್, ಅಯ್ಯ, ಹಢವಾದಿ, ಸಿಕ್ಸರ್, ಆಪ್ತರಕ್ಷಕ, ಅಲೆಮಾರಿ, ಪರಾರಿ, ಅಮಾನುಷ, ಪುಷ್ಪಕ ವಿಮಾನ, ರಾಜಕುಮಾರ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ