ಶುಕ್ರವಾರ, ಜೂನ್ 9, 2023
ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಬ್ಬಿಣದ ರಾಡ್‌‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆ; ಆರೋಪಿ ಬಂಧನ

Twitter
Facebook
LinkedIn
WhatsApp
mysore murder 1

ಮೈಸೂರು: ಕಬ್ಬಿಣದ ರಾಡ್‌‌ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಮೇ.24 ನಡೆದಿತ್ತು. ಬಳಿಕ ಆರೋಪಿ ಎಸ್ಕೇಪ್​ ಆಗಿದ್ದ. ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ(32) ಕೊಲೆಯಾದ ರ್ದುದೈವಿ. ಸಿದ್ದಲಿಂಗಪುರದಲ್ಲಿ ಆರೋಪಿ ಹಾಸನ ಮೂಲದ ಮೋಹನ್ ಹಾಗೂ ಮಮತಾ ಇಬ್ಬರು ಒಟ್ಟಾಗಿ ಬೇಕರಿ ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಇನ್ನು ಮೇ.24 ಸಂಜೆ ಇಬ್ಬರ ನಡುವೆ ಏಕಾಏಕಿ ಮಾತಿಗೆ ಮಾತು‌ ಬೆಳೆದು ಮಮತಾಳನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ಮೇಟಗಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಾಗಿ ಹುಡುಕಾಟ ನಡೆಸಿದ್ದರು.

ಇನ್ನು ಕೊಲೆಯಾದ ಮಹಿಳೆ ಮಮತಾ ಗಂಡನಿಂದ‌ ದೂರ ಇದ್ದಳು. ಈ ಹಿನ್ನಲೆ ಆಕೆಯ ಜೊತೆ ಸಂಬಂಧ ಬೆಳೆಸಿದ್ದ ಮೋಹನ. ಜೊತೆಗೆ ಇಬ್ಬರು ಸೇರಿ ಸಿದ್ದಲಿಂಗಪುರದಲ್ಲಿ ಬೇಕರಿಯನ್ನ ಶುರು ಮಾಡಿಕೊಂಡು ನಡೆಸುತ್ತಿದ್ದರು. ಆದೇನಾಯ್ತು ಗೊತ್ತಿಲ್ಲ, ಮೇ.24 ರ ಸಂಜೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಬಳಿಕ ಮಾತಿಗೆ ಮಾತು ಬೆಳೆದು ಕೋಪದಿಂದ ಮೋಹನ್​ ಕಬ್ಬಿಣದ ರಾಡ್​ನಿಂದ ಬಲವಾಗಿ ತಲೆಗೆ ಹೊಡೆದೆ ಬಿಟ್ಟಿದ್ದಾನೆ. ನೆಲಕ್ಕೆ ಬಿದ್ದ ಯುವತಿ ಸ್ಥಳದಲ್ಲೆ ಮೃತಪಟ್ಟಿದ್ದು, ಆರೋಪಿ ಮೋಹನ್​ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ದೂರು ದಾಖಲಿಸಿಕೊಂಡು, ಇದೀಗ ಆರೋಪಿಯನ್ನ ಬಂಧಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ

ಬೀದರ್​: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್​​ನಿಂದ ಬೀದರ್​​ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್​​ನಲ್ಲಿ ಸಾಗಾಟ ಮಾಡಲಾಗುತ್ತಿದ್ದ 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ‌ಡಿಸಿ ಮೊಹಮ್ಮದ್ ಇಸ್ಮಾಯಿಲ್ ಇನಾಮದಾರ್​ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಬೀದರ್ ತಾಲೂಕಿನ ಬಂಗೂರು‌ ಚೆಕ್​​​ಪೋಸ್ಟ್​​​ನಲ್ಲಿ ಗಾಂಜಾ‌ ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ