ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಗುಂಪುಗಾರಿಕೆ. ಗುಂಪುಗಾರಿಕೆಯಲ್ಲಿ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಮುಂಚೂಣಿಯಲ್ಲಿ.

Twitter
Facebook
LinkedIn
WhatsApp
ಕರಾವಳಿ ಕಾಂಗ್ರೆಸ್ ನಲ್ಲಿ ತೀವ್ರಗೊಂಡ ಗುಂಪುಗಾರಿಕೆ. ಗುಂಪುಗಾರಿಕೆಯಲ್ಲಿ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಮುಂಚೂಣಿಯಲ್ಲಿ.

ಮಂಗಳೂರು: ಕರಾವಳಿಯಲ್ಲಿ ಕಾಂಗ್ರೆಸಿನ ಗುಂಪುಗಾರಿಕೆ ತೀವ್ರಗೊಂಡಿದೆ. ಹಲವಾರು ಬಣಗಳಾಗಿ ವಿಭಜನೆಗೊಂಡಿದೆ. ಈ ನಡುವೆ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಕರಾವಳಿಯಲ್ಲಿ ತನ್ನ ಬೆಂಬಲಿಗರಿಗೆ ಪಕ್ಷದ ಹುದ್ದೆಗಳನ್ನು ಹಂಚುತ್ತಿದ್ದಾರೆ ಎಂಬ ಆರೋಪ ಬಲವಾಗಿ ಕೇಳಿ ಬರುತ್ತಿದೆ.

ವಿವಿಧ ಹುದ್ದೆಗಳಿಗೆ ಅನರ್ಹರಾಗಿದ್ದರು, ತನ್ನ ಬೆಂಬಲಿಗರಿಗೆ ಮಣೆ ಹಾಕುವ ಮೂಲಕ ಬಿಕೆ ಹರಿಪ್ರಸಾದ್ ಕರಾವಳಿ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಅನಿಸಿಕೆ. ಈ ನಡುವೆ ಡಿಕೆ ಶಿವಕುಮಾರ್ ಸಹ ಗುಂಪುಗಾರಿಕೆ ಮಾಡುವಲ್ಲಿ ಹಿಂದೆಬಿದ್ದಿಲ್ಲ ಎನ್ನುತ್ತಾರೆ ಕಾಂಗ್ರೆಸ್ ಕಾರ್ಯಕರ್ತರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗುಂಪು ಸಹ ಕರಾವಳಿ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿದೆ ಎನ್ನುತ್ತದೆ ಕಾಂಗ್ರೆಸ್ ಆಂತರಿಕ ಮೂಲಗಳು. ಕರಾವಳಿಯ ಕಾಂಗ್ರೆಸಿಗರು ಹತ್ತಕ್ಕೂ ಹೆಚ್ಚು ಗುಂಪಿನ ನಡುವೆ ವಿಭಜನೆಗೊಂಡು ಪರಸ್ಪರ ಕಾದಾಟ ನಡೆಸುತ್ತಿದ್ದಾರೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಹೈಕಮಾಂಡಿನ ಮುಂದೆ ಪಕ್ಷ ಸಂಘಟನೆಯ ಬಗ್ಗೆ ಹೇಳುತ್ತಿರುವ ಈ ನಾಯಕರುಗಳು, ಜಿಲ್ಲೆಯಲ್ಲಿ ಕಾಂಗ್ರೆಸ್ಸಿನ ಗುಂಪುಗಾರಿಕೆಯಲ್ಲಿ ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮತ್ತೆ ಅಹಿಂದ ಪುನರುಜ್ಜೀವನಕ್ಕೆ ಮುಂದಾದ ಸಿದ್ದರಾಮಯ್ಯ!

ಕರಾವಳಿ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಈ ನಾಯಕರುಗಳು ಬೆನ್ನ ಹಿಂದೆ ಹೋದವರಿಗೆ ಮಾತ್ರ ಆಗುತ್ತದೆ ಎನ್ನುತ್ತಾರೆ ಕಾರ್ಯಕರ್ತರು.
ನಿಜವಾದ ಕಾರ್ಯಕರ್ತರನ್ನು ಪಕ್ಷ ಪರಿಗಣಿಸುವುದೇ ಇಲ್ಲ. ಕಾರ್ಯಕರ್ತರ ಪಕ್ಷ ಎಂಬುದು ಕೇವಲ ಭಾಷಣಕ್ಕೆ ಸೀಮಿತ. ಈ ನಾಯಕರುಗಳು ಭಾಷಣ ಮಾಡಿ ಹೋಗುತ್ತಾರೆ. ಆದರೆ ನಿಜಜೀವನದಲ್ಲಿ ಅದನ್ನು ಅನುಷ್ಠಾನಿಸುವುದಿಲ್ಲ ಎಂದು ಕಾರ್ಯಕರ್ತರು ಅಳಲು ತೋಡಿಕೊಳ್ಳುತ್ತಾರೆ.

ಈ ಗುಂಪುಗಾರಿಕೆಯಿಂದ ಬಿಜೆಪಿ ಕರಾವಳಿಯಲ್ಲಿ ಸಂಪೂರ್ಣ ಲಾಭ ಪಡೆಯುತ್ತದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಬಿಜೆಪಿ ಕಾಂಗ್ರೆಸ್ ನ  ಗುಂಪುಗಾರಿಕೆಯಿಂದ ಬಹಳಷ್ಟು ಅನುಕೂಲ ಪಡೆಯುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಒಬ್ಬರು ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು