ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!

Twitter
Facebook
LinkedIn
WhatsApp
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ