ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಹಿಂದುತ್ವದ ಪ್ರಯೋಗ ಶಾಲೆಯಾಗುತ್ತಿದೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
siddaramaiah dh 1180732 1673612485 1182720 1674174389

ಉಡುಪಿ (ಜ.23): ಕರಾವಳಿಯನ್ನು ಬಿಜೆಪಿ ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಿದೆ. ಇಲ್ಲಿನ ಯುವಕರು ಬಿಜೆಪಿಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಬಲಿಪಶುಗಳಾತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಇಲ್ಲಿನ ಕ್ರಿಶ್ಚಿಯನ್‌ ಹೈಸ್ಕೂಲ್‌ ಮೈದಾನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಭಯೋತ್ಪಾದನೆ ಆರಂಭವಾದದ್ದೇ ಗೋಡ್ಸೆಯಿಂದ, ಹಿಂದುತ್ವ ಎಂಬ ಶಬ್ದವನ್ನು ಹುಟ್ಟಹಾಕಿದ್ದೇ ಸಾವರ್ಕರ್‌. ಬಿಜೆಪಿಯವರ ಹಿಂದುತ್ವ ಎಂದರೆ ಅದು ಗೋಡ್ಸೆ, ಸಾವರ್ಕರ್‌ ಅವರ ಹಿಂದುತ್ವವೇ ಆಗಿದೆ. ಇದನ್ನು ಕರಾವಳಿಯ ಯುವಕರು ಅರ್ಥ ಮಾಡಿಕೊಂಡು ಅದರಿಂದ ದೂರವಿರಬೇಕು ಎಂದವರು ಕರೆ ನೀಡಿದರು.

ನಾವು ಹಿಂದುಗಳು, ಹಿಂದುತ್ವವಾದಿಗಳಲ್ಲ: ಒಂದ ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವುದು ಹಿಂದುತ್ವವಾದಿಗಳ ಅಜೆಂಡಾ ಆಗಿದೆ. ಅವರು ಸಂವಿಧಾನದ ಮೇಲೆ ಗೌರವ ಇಲ್ಲದವರು, ದೇಶ ವಿರೋಧಿಗಳು ಎಂದು ವಾಕ್‌ಪ್ರಹಾರ ಮಾಡಿದ ಸಿದ್ದರಾಮಯ್ಯ, ನಾನು, ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌, ಸುರ್ಜೆವಾಲ ಎಲ್ಲರೂ ಅಪ್ಪಟ ಹಿಂದುಗಳು, ಹಿಂದುವಾದಿಗಳು, ಆದರೆ ಹಿಂದುತ್ವವಾದಿ, ಮನುವಾದಿಗಳಲ್ಲ ಎಂದರು. ವಿಧಾನಸೌಧದ ಗೋಡೆಗಳಿಗೆ ಕಿವಿಕೊಟ್ಟರೇ ಅವು ಲಂಚ ಲಂಚ ಎನ್ನುತ್ತವೆ ಎಂದು ಲೇವಡಿ ಮಾಡಿದ ಸಿದ್ದರಾಮಯ್ಯ, ಸ್ಯಾಂಟ್ರೋ ರವಿಯನ್ನು ಪೊಲೀಸರು ತಮ್ಮ ಕಸ್ಟಡಿಗೆ ಕೇಳಲೇ ಇಲ್ಲ, ನೇರವಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೆ ತನ್ನ ಗುಟ್ಟೆಲ್ಲಿ ಹೊರಗೆ ಬರುತ್ತದೋ ಎಂದು ಗೃಹಸಚಿವ ಉರಗ ಜ್ಞಾನೇಂದ್ರರಿಗೆ ಹೆದರಿಕೆ ಎಂದು ಆರೋಪಿಸಿದರು.

ಕಳಪೆ ಫಲಿತಾಂಶಕ್ಕೆ ಬಿಜೆಪಿಯೇ ಕಾರಣ: ಪ್ರತಿಬಾರಿ ಎಸ್ಸೆಸ್ಸೆಲ್ಸಿ – ಪಿಯು ಫಲಿತಾಂಶದಲ್ಲಿ ದ.ಕ., ಉಡುಪಿ ಮೊದಲ ಸ್ಥಾನದಲ್ಲಿರುತ್ತಿದ್ದವು, ಆದರೆ ಕಳೆದ ಬಾರಿ ನಾವೆಲ್ಲರೂ ತಲೆತಗ್ಗಿಸುವಂತೆ ಬಿಜೆಪಿ ಸರ್ಕಾರ ಮಾಡಿದೆ. ಮೊದಲ ಸ್ಥಾನದಲ್ಲಿರುತ್ತಿದ್ದ ದಕ, ಉಡುಪಿ ಜಿಲ್ಲೆಗಳು 17, 18ನೇ ಸ್ಥಾನಕ್ಕೆ ಹೋಗಿವೆ. ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನಕ್ಕೆ ಬಂದಿದೆ. ಬಿಜೆಪಿ ದ.ಕ.- ಉಡುಪಿಯ ಮಕ್ಕಳನ್ನು ದಾರಿ ತಪ್ಪಿಸುತ್ತಿದೆ ಎಂದು ಬಿ.ಕೆ. ಹರಿಪ್ರಸಾದ್‌ ಆರೋಪಿಸಿದರು.

ಸಾಧ್ವಿ ಪ್ರಜ್ಞಾಸಿಂಗ್‌ ಭಯೋತ್ಪಾದಕಿ: ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಒಬ್ಬ ಭಯೋತ್ಪಾದಕಿ. ಆಕೆ ಇತ್ತೀಚೆಗೆ ಶಿವಮೊಗ್ಗಕ್ಕೆ ಭೇಟಿ ಕೊಟ್ಟು ಹಿಂದೂಗಳು ತಮ್ಮ ಮನೆಗಳಲ್ಲಿ ಪೆನ್ನು ಪುಸ್ತಕಗಳನ್ನು ಇಟ್ಟುಕೊಳ್ಳಬೇಕು ಎನ್ನದೆ, ತಲ್ವಾರು ಚಾಕು ಚೂರಿ ಆಯುಧಗಳನ್ನು ಹರಿತ ಮಾಡಿಟ್ಟಕೊಳ್ಳಿ ಎಂದು ಹೇಳಿ ಮಕ್ಕಳ ದಾರಿ ತಪ್ಪಿಸಿದ್ದಾಳೆ. ನಾನು ಆಕೆಯನ್ನು ಭಯೋತ್ಪಾದಕಿ ಎಂದು ಕರೆಯುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಿವಾದಾತ್ಮಕ ಹೇಳಿಕೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ