ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಲಿಕೆಗೆ ಅಡ್ಡಿಯಾದ ಬಡತನ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
ಕಲಿಕೆಗೆ ಅಡ್ಡಿಯಾದ ಬಡತನ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಮುಂದೆ ಓದಿಸುವುದು ಕಷ್ಟ, ಹಣದ ಸಮಸ್ಯೆ ಇದೆ ಎಂದು ತಾಯಿ ಹೇಳಿದ್ದರಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ವಡೇರಹಳ್ಳಿಯಲ್ಲಿ ನಡೆದಿದೆ. ಉಜ್ಜಪ್ಪ ವಡೇರಹಳ್ಳಿಯಲ್ಲಿ ಗ್ರಾಮದ ನಾಗರಾಜಪ್ಪ ಮತ್ತು ಚಂದ್ರಮ್ಮನ ಅವರ ಪುತ್ರಿ ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಈಕೆ ದಾವಣಗೆರೆಯ ಸೀತಮ್ಮ ಪಿಯು ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಓದುತ್ತಿದ್ದಳು. ಕೆಲ ದಿನಗಳ ಹಿಂದೆ ಪಿಯುಸಿ ಪಾಸ್ ಆಗಿದ್ದು, ಮುಂದೆ ಪದವಿ ವ್ಯಾಸಂಗ ಮಾಡಬೇಕು ಎನ್ನುವ ಆಸೆಯನ್ನು ಹೊಂದಿದ್ದಳು. ಆದರೆ ರಕ್ಷಿತಾ ತಂದೆ ನಾಗರಾಜಪ್ಪ ಮೂರು ವರ್ಷದ ಹಿಂದೆ ಧರ್ಮಸ್ಥಳಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ವಿದ್ಯುತ್ ಶಾಕ್’ನಿಂದ ಮೃತಪಟ್ಟಿದ್ದರು. ಇದಾದ ಬಳಿಕ ತಾಯಿ ಚಂದ್ರಮ್ಮ ಕೂಲಿ ಮಾಡಿ ಮಗಳನ್ನು ಓದಿಸುತ್ತಿದ್ದರು.
ಲಾಕ್‍ಡೌನ್ ಕಾರಣ ಚಂದ್ರಮ್ಮಗೆ ಕೂಲಿ ಕೆಲಸ ಸಿಗದಂತಾಗಿದ್ದು, ಆರ್ಥಿಕ ಸಮಸ್ಯೆ ಸೃಷ್ಟಿಯಾಯಿತು. ಮನೆಯಲ್ಲಿ ಬಡತನ ಇದೆ, ಮುಂದಿನ ವಿದ್ಯಾಭ್ಯಾಸಕ್ಕೆ ಕಳುಹಿಸುವ ಶಕ್ತಿ ಇಲ್ಲ, ಮನೆಯಲ್ಲೇ ಇರುವಂತೆ ಮಗಳಿಗೆ ಹೇಳಿದ್ದಾರೆ. ಇದು ರಕ್ಷಿತಾಗೆ ಸಾಕಷ್ಟು ನೋವು ತಂದಿದ್ದು, ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಉಜ್ಜಪ್ಪ ವಡೇರಹಳ್ಳಿ ಗ್ರಾಮದಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಳು. ನಂತರ ದಾವಣಗೆರೆಯ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರ ನಿಲಯದಲ್ಲಿದ್ದು, ಸೀತಮ್ಮ ಕಾಲೇಜಿನ ಕಲಾ ವಿಭಾಗದಲ್ಲಿ ಪಿಯುಸಿ ಓದಿ ಶೇ.60ರಷ್ಟು ಅಂಕಗಳನ್ನು ಪಡೆದಿದ್ದಳು. ಮುಂದೆ ಬಿಎ ಅಥವಾ ಬಿಕಾಂ ಮಾಡಬೇಕೆಂಬ ಆಸೆ ಇತ್ತು. ಆದರೆ ತಾಯಿ ಚಂದ್ರಮ್ಮಗೆ ಮುಂದೆ ಓದಿಸುವಷ್ಟು ಶಕ್ತಿ ಇರಲಿಲ್ಲ. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡ ರಕ್ಷಿತಾ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು