ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಳೆದ 24 ಗಂಟೆಗಳಲ್ಲಿ 43,509 ಮಂದಿಗೆ ಕೊರೋನಾ ಸೋಂಕು, 634 ಸಾವು.

Twitter
Facebook
LinkedIn
WhatsApp
ಕಳೆದ 24 ಗಂಟೆಗಳಲ್ಲಿ 43,509 ಮಂದಿಗೆ ಕೊರೋನಾ ಸೋಂಕು, 634 ಸಾವು.

ನವದೆಹಲಿ: ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ವೈರಸ್ ಪ್ರಕರಣಗಳು ಮತ್ತು 634 ಸಾವುಗಳು ದಾಖಲಾಗಿವೆ. ಕೇರಳದಲ್ಲಿ ಸತತ ಎರಡನೇ ದಿನ 22,000 ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗುವ ಮೂಲಕ ಸಕ್ರಿಯ ಪ್ರಕರಣಗಳು ಮತ್ತೆ ಏರಿಕೆಯಾಗಿದ್ದು 4 ಲಕ್ಷಕ್ಕಿಂತ ಹೆಚ್ಚಾಗಿದೆ. ಕೇರಳ ಒಂದರಲ್ಲೇ 1.5 ಲಕ್ಷ ಸಕ್ರಿಯ ಪ್ರಕರಣಗಳಿವೆ.
ಸರ್ಕಾರವು ಬಿಡುಗಡೆ ಮಾಡಿರುವ ರಾಜ್ಯಮಟ್ಟದ ಸಿರೊಸರ್ವೆ ಅಂಕಿಅಂಶಗಳು ಕೇರಳದ ಜನಸಂಖ್ಯೆಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟ ಶೇಕಡಾ 44 ರಷ್ಟು ಜನರು ಮಾತ್ರ ಈವರೆಗೆ ವೈರಸ್ ಸೋಂಕಿಗೆ ಒಳಗಾಗಿದ್ದಾರೆ, ಆದರೆ, ರಾಷ್ಟ್ರೀಯ ಸರಾಸರಿ ಶೇಕಡಾ 67 ಕ್ಕಿಂತ ಹೆಚ್ಚಾಗಿದೆ.
ಅಂದರೆ, ಇನ್ನೂ ಅನೇಕ ರಾಜ್ಯಗಳಿಗೆ ಹೋಲಿಸಿದರೆ ಕೇರಳ ರಾಜ್ಯದ ಜನಸಂಖ್ಯೆಯ ಹೆಚ್ಚಿನ ಭಾಗವು ಕೊರೊನಾ ಸೋಂಕಿಗೆ ಒಳಗಾಗುತ್ತದೆ. ಹೀಗಾಗಿಯೇ ಕೇರಳವು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿದೆ ಎಂದು ಸಿರೋಸರ್ವೆ ತಿಳಿಸಿದೆ. ಕಳೆದ ಎರಡು ದಿನಗಳಿಂದ ಕೇರಳವು 22,000 ಕ್ಕೂ ಹೆಚ್ಚು ಸೋಂಕಿತರನ್ನು ವರದಿ ಮಾಡಿದೆ, ಇದು ರಾಷ್ಟ್ರೀಯ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚಾಗಿದೆ.
ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ರಾಜ್ಯವಾದ ಮಹಾರಾಷ್ಟ್ರವು ಕಡಿಮೆ ಸೋಂಕು ಹರಡುವಿಕೆ ಹೊಂದಿದೆ. ಮಹಾರಾಷ್ಟ್ರದ ಜನಸಂಖ್ಯೆಯ ಶೇಕಡಾ 58 ರಷ್ಟು ಜನರು ಈವರೆಗೆ ಸೋಂಕಿಗೆ ಒಳಗಾಗಿದ್ದಾರೆ ಎಂದು ಸಿರೋಸರ್ವೆ ಡೇಟಾ ತಿಳಿಸುತ್ತದೆ.
ಸಿರೋಸರ್ವೆಯ ವರದಿ ಪ್ರಕಾರ ಕೊರೊನಾ ಸೋಂಕು ಹರಡುವಿಕೆಯು ಮಧ್ಯಪ್ರದೇಶದಲ್ಲಿ ಅತಿ ಹೆಚ್ಚಾಗಿತ್ತು ಎಂದು ತಿಳಿಸಿದೆ. ಮಧ್ಯಪ್ರದೇಶದಲ್ಲಿ ಸುಮಾರು 79 ಪ್ರತಿಶತದಷ್ಟು ಜನರು ಈಗಾಗಲೇ ಸೋಂಕಿಗೆ ಒಳಗಾಗಿದ್ದಾರೆ. ರಾಜಸ್ಥಾನದಲ್ಲಿ ಶೇ 76.2, ಬಿಹಾರದಲ್ಲಿ ಶೇ 76 ಮತ್ತು ಉತ್ತರ ಪ್ರದೇಶದಲ್ಲಿ ಶೇ 71 ರಷ್ಟು ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಸು ಸರ್ವೆ ತಿಳಿಸಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು