ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಈ ಮೂರು ಕ್ಷೇತ್ರಗಳಲ್ಲಿ ಯಾವುದರಲ್ಲಾದ್ರೂ ಪುತ್ರನಿಗೆ ಎಂಎಲ್‌ಎ ಟಿಕೆಟ್‌ ಕೊಡಲಿ: ಜಿಟಿಡಿ

Twitter
Facebook
LinkedIn
WhatsApp
ಕಾಂಗ್ರೆಸ್ ಈ ಮೂರು ಕ್ಷೇತ್ರಗಳಲ್ಲಿ ಯಾವುದರಲ್ಲಾದ್ರೂ ಪುತ್ರನಿಗೆ ಎಂಎಲ್‌ಎ ಟಿಕೆಟ್‌ ಕೊಡಲಿ: ಜಿಟಿಡಿ

ಮೈಸೂರು: ಮುಂದಿನ ಜಿಪಂ ಚುನಾವಣೆ ಒಳಗಡೆ ಹುಣಸೂರು, ಕೆ.ಆರ್‌.ನಗರ, ಚಾಮರಾಜ ಕ್ಷೇತ್ರಗಳಲ್ಲಿ ಯಾವುದಾದರೂ ಒಂದರಲ್ಲಿ ನನ್ನ ಪುತ್ರ ಹರೀಶ್‌ಗೌಡನಿಗೆ ಎಂಎಲ್‌ಎ ಟಿಕೆಟ್‌ ಕೊಡುತ್ತೇವೆಂದು ಭರವಸೆ ನೀಡಿದರೆ ಕಾಂಗ್ರೆಸ್‌ ಸೇರುತ್ತೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮಾತನಾಡಿದ ಅವರು, ಯಾಕಪ್ಪ ತಟಸ್ಥವಾಗಿದ್ದೀಯಾ. ನಮ್ಮ ಜೊತೆ ಬಾ, ಎಲ್ಲರೂ ಒಟ್ಟಾಗಿ ಹೋಗೋಣ ಅಧಿಕಾರವನ್ನೂ ಹಂಚಿಕೊಳ್ಳೋಣ ಎಂದು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದಾರೆ. ನಾನು ಕಾಂಗ್ರೆಸ್‌ ಸೇರಬೇಕಾದರೆ, ಪುತ್ರ ಹರೀಶ್‌ ಗೌಡ ಅವರಿಗೆ ಎಂಎಲ್‌ಎ ಟಿಕೆಟ್‌ ಕೊಡಬೇಕು ಎಂದು ಕೇಳಿದ್ದೇನೆ. ಅದಕ್ಕೆ ಅವರು, ಪಕ್ಷದ ಹಿರಿಯರೊಂದಿಗೆ ಹಾಗೂ ಸಮಿತಿಯಲ್ಲಿ ಚರ್ಚಿಸಿ ನಿಮ್ಮ ಪರವಾಗಿ ಮಾತನಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಇದೆಲ್ಲ ಅಂತಿಮ ಆದ್ಮೇಲೆ ನಾನು ಕಾಂಗ್ರೆಸ್‌ ಸೇರುವ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಚುನಾವಣೆ ಒಳಗಡೆ ಅವರು ಒಪ್ಪಿಗೆ ಸೂಚಿಸಿದರೆ ನಾವು ಕಾಂಗ್ರೆಸ್‌ ಸೇರುತ್ತೇವೆ. ಇಲ್ಲವೇ ಹೀಗೆಯೇ ಮುಂದುವರಿಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಅಧಿಕಾರಕ್ಕೆ ಆಸೆ ಪಟ್ಟು ಹೋಗಿದ್ದರೆ ಬಿಜೆಪಿಯಲ್ಲಿ ನನಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುತ್ತಿತ್ತು. ಯಡಿಯೂರಪ್ಪ ಅವರು, ʻಐದು ಕ್ಷೇತ್ರಗಳಲ್ಲಿ ಯಾವುದನ್ನಾದರೂ ಆಯ್ಕೆ ಮಾಡಿಕೊಂಡು, ನಿನಗೆ ಇಚ್ಛಿಸಿದವರಿಗೆ ʻಬಿʼಫಾರಂ ಕೊಡುʼ ಎಂದು ನನಗೆ ಹೇಳಿದ್ದರು. ಆದರೆ, ನಾನು ಯಾವತ್ತೂ ಅಧಿಕಾರ ಬಯಸಿದವನಲ್ಲ. ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಕಾಂಗ್ರೆಸ್‌ನವರೊಂದಿಗೆ ನನ್ನ ಆಕಾಂಕ್ಷೆ ವ್ಯಕ್ತಪಡಿಸಿದ್ದೇನೆ. ಮುಂದೇನಾಗುತ್ತದೆ ಕಾದು ನೋಡೋಣ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು