ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಪಾಕಿಸ್ತಾನದ ಪರ ಎಂಬುದು ಸ್ಪಷ್ಟ-ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ.

Twitter
Facebook
LinkedIn
WhatsApp
ಕಾಂಗ್ರೆಸ್ ಪಾಕಿಸ್ತಾನದ ಪರ ಎಂಬುದು ಸ್ಪಷ್ಟ-ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ.

ಬೆಂಗಳೂರು: ಕಾಂಗ್ರೆಸ್ ಪದೇಪದೇ ಪಾಕಿಸ್ತಾನದ ಪಾರಾಗಿದ್ದೇನೆ ಎಂಬ ರೀತಿಯಲ್ಲಿ ವರ್ತಿಸುತ್ತಿದೆ, ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದು, ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.


ದಿಗ್ವಿಜಯ್ ಸಿಂಗ್ ಕಾಶ್ಮೀರಕ್ಕೆ 370 ಸ್ಥಾನಮಾನ ನೀಡುವ ಕುರಿತಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಮತ್ತು ಅದರ ಮುಖಂಡರು ಚೀನಾ ಹಾಗೂ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿರುವುದು ಇದರಿಂದ ಸ್ಪಷ್ಟಗೊಳ್ಳುತ್ತದೆ. ಆದರೆ ಕಾಂಗ್ರೆಸ್‍ನ ಈ ದುರುದ್ದೇಶ ಫಲ ಕೊಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ಪ್ರಧಾನಿ ನರೇಂದ್ರ ಮೋದಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ಇದು ಟೂಲ್‍ಕಿಟ್‍ನ ಮುಂದುವರಿದ ಭಾಗವಷ್ಟೇ ಎಂದರು.
ದಿಗ್ವಿಜಯ್ ಸಿಂಗ್ “ಕ್ಲಬ್‍ಹೌಸ್ ಆ್ಯಪ್” ಮೂಲಕ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ಸಿನ ಹೆಸರನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಐಎನ್‍ಸಿ) ಹೆಸರಿನ ಬದಲಾಗಿ “ಆ್ಯಂಟಿ ನ್ಯಾಷನಲ್ ಕ್ಲಬ್‍ಹೌಸ್” (ಎಎನ್‍ಸಿ) ಎಂದು ಬದಲಿಸಿಕೊಳ್ಳಲಿ ಎಂದು ಅವರು ಆಗ್ರಹಿಸಿದ್ದಾರೆ.


2014ರಲ್ಲಿ ಅಯ್ಯರ್ ಅವರು ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ. ಇದೇ ಮಣಿಶಂಕರ್ ಅಯ್ಯರ್ ಅವರು ಈ ಹಿಂದೆ ಜಮ್ಮು ಕಾಶ್ಮೀರವನ್ನು ಅಫಘಾನಿಸ್ತಾನಕ್ಕೆ ಹೋಲಿಸಿದ್ದರು ಎಂಬುದೂ ಗಮನಾರ್ಹ ಎಂದಿದ್ದಾರೆ.
ರಾಹುಲ್ ಗಾಂಧಿ ಅವರೂ 370ನೇ ವಿಧಿ ರದ್ದತಿ ಬಹುದೊಡ್ಡ ಪ್ರಮಾದ ಎಂದು ಟ್ವೀಟ್ ಮಾಡಿದ್ದರು. 2019ರ ಆಗಸ್ಟ್‌ನಲ್ಲಿ ಈ ಟ್ವೀಟ್ ಮಾಡಲಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಜನರ ಹತ್ಯೆ ಆಗಿದೆ, ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂದಿದ್ದರು. ಇದಾದ ಎರಡು ದಿನಗಳ ಬಳಿಕ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದರು, ಜಮ್ಮು ಕಾಶ್ಮೀರದ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನೂ ಅವರು ಉಲ್ಲೇಖಿಸಿದ್ದರು. ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಗುಪ್ತ ಒಪ್ಪಂದಕ್ಕೆ ಸಾಕ್ಷಿ ಅಲ್ಲವೇ ಎಂದು ಶ್ರೀ ನಳಿನ್‍ಕುಮಾರ್ ಅವರು ಪ್ರಶ್ನಿಸಿದ್ದು, ಈ ಕುರಿತಂತೆ ಕಾಂಗ್ರೆಸ್ ಮುಖಂಡರು ಸ್ಪಷ್ಟನೆ ಕೊಡಲಿ ಎಂದು ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೋವಿಡ್ ಹೆಚ್ಚಳದ ಕುರಿತು 2020ರ ಫೆಬ್ರವರಿ 13ರಂದು ಟ್ವೀಟ್‍ನಲ್ಲಿ ಜಮ್ಮು -ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎಂದು ಭೂಪಟದಲ್ಲಿ ತೋರಿಸಿದ್ದರು. ಇದು ಕಾಂಗ್ರೆಸಿಗರ ದೇಶವಿರೋಧಿ ಚಿಂತನೆಯ ಭಾಗವಲ್ಲವೇ ಎಂದು ಅವರು ಕೇಳಿದ್ದಾರೆ.
ಪುಲ್ವಾಮಾ ದಾಳಿಯನ್ನು ನರೇಂದ್ರ ಮೋದಿ- ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಕಾಂಗ್ರೆಸ್ ನೇತಾರ- ನಮ್ಮ ರಾಜ್ಯದವರೇ ಆದ ಬಿ.ಕೆ.ಹರಿಪ್ರಸಾದ್ ಅವರು ಹೇಳಿದ್ದರು. ಇದು ದೇಶದ ಆತ್ಮಸ್ಥೈರ್ಯವನ್ನು ಕುಂದಿಸುವ ಕಾರ್ಯ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು