ಬುಧವಾರ, ಏಪ್ರಿಲ್ 17, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ

Twitter
Facebook
LinkedIn
WhatsApp
05 2

ಬಳ್ಳಾರಿ: ನಗರದಲ್ಲಿ ನಡೆದ ಕಾಂಗ್ರೆಸ್ (Congress) ಪಕ್ಷದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು (Police) ಬಂಧಿಸಿದ್ದಾರೆ (Arreste).

ಜನವರಿ 3 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ (Hotel) ಕಾಂಗ್ರೆಸ್ ಪಕ್ಷದ ಸಭೆ ನಡೆಸಲಾಗಿತ್ತು. ಈ ವೇಳೆ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಶಿಲ್ಪಾ ನಡುವೆ ಮಾರಾಮಾರಿ ನಡೆದಿತ್ತು. ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ, ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಜಗಳ ಕೂಡ ನಡೆದಿತ್ತು. ಆ ಬಳಿಕ ಶಿಲ್ಪಾ ಅವರು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ದೂರು ಸಲ್ಲಿಸಿ, ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಪಟ್ಟಣ ಪೊಲೀಸರು ಯೋಗಲಕ್ಷ್ಮಿ ಮತ್ತು ಇನ್ನೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿಂದೆಯೂ ಕೂಡಾ ಈ ಇಬ್ಬರ ನಡುವೆ ಹಲವಾರು ಬಾರಿ ಜಗಳ ನಡೆದಿತ್ತು. ಇದೀಗ ಈ ಹಿಂದಿನ ದ್ವೇಷಕ್ಕೆ ಮತ್ತೊಮ್ಮೆ ಜಗಳವಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ