ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂತಾರದ Varaha Roopam ಹಾಡಿಗೆ ಕಾನೂನು ತೊಡಕು, ಕೋಝಿಕ್ಕೋಡ್‌ ಕೋರ್ಟ್‌ನಿಂದ ತಡೆಯಾಜ್ಞೆ!

Twitter
Facebook
LinkedIn
WhatsApp
ಕಾಂತಾರದ Varaha Roopam ಹಾಡಿಗೆ ಕಾನೂನು ತೊಡಕು, ಕೋಝಿಕ್ಕೋಡ್‌ ಕೋರ್ಟ್‌ನಿಂದ ತಡೆಯಾಜ್ಞೆ!

ಕೋಝಿಕ್ಕೋಡ್‌ (ಅ. 28): ಒಂದು ತಿಂಗಳ ಹಿಂದೆ ಬಿಡಗಡೆಯಾಗಿ ದೇಶಾದ್ಯಂತ ದೊಡ್ಡ ಮಟ್ಟದ ಯಶಸ್ಸು ಸಂಪಾದಿಸಿರುವ ರಿಷಬ್‌ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿದೆ. ಚಿತ್ರದದಲ್ಲಿ ಬಳಕೆ ಮಾಡಲಾಗಿರುವ ವರಾಹ ರೂಪಂ ಹಾಡಿನ ಸಂಗೀತ ನಮ್ಮ ಸೃಷ್ಟಿ ಅದನ್ನು ಅನುಮತಿಯಿಲ್ಲದೆ ಬಳಸಿಕೊಳ್ಳಲಾಗಿದೆ ಎಂದು ತೈಕುಡಂ ಬ್ರಿಡ್ಜ್‌ ಬ್ಯಾಂಡ್‌ ಕೋಝಿಕ್ಕೋಡ್‌ ಕೋರ್ಟ್‌ನ ಮೆಟ್ಟಿಲೇರಿತ್ತು. ಈ ಕುರಿತಾಗಿ ಶುಕ್ರವಾರ ವಿಚಾರಣೆ ಮಾಡಿದ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮ್ಯೂಸಿಕ್‌ ಆಪ್‌ಗಳಲ್ಲಿ ಈ ಹಾಡನ್ನು ಪ್ಲೇ ಮಾಡದಂತೆ ಸೂಚನೆ ನೀಡಿದ್ದು, ತೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ಚಿತ್ರದಲ್ಲಿ “ವರಾಹ ರೂಪಂ” ಹಾಡನ್ನು ಪ್ಲೇ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ. ಇದೇ ವಿಷಯವನ್ನು ತೈಕುಡಂ ಬ್ರಿಡ್ಜ್‌ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಚಲನಚಿತ್ರದಲ್ಲಿ ಬಳಸಲಾದ ಹಾಡು ತಮ್ಮ “ನವರಸಂ” ಹಾಡಿನ ಭಾಗಗಳನ್ನು ನೇರವಾಗಿ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿ ಬ್ಯಾಂಡ್ ಸಲ್ಲಿಸಿದ ಔಪಚಾರಿಕ ದೂರಿನ ನಂತರ ಈ ಬೆಳವಣಿಗೆ ಸಂಭವಿಸಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಈ ವಿಚಾರವನ್ನು ಬರೆದುಕೊಂಡಿದ್ದ ತೈಕುಡಂ ಬ್ರಿಡ್ಜ್‌ ಬ್ಯಾಂಡ್‌, “ತೈಕ್ಕುಡಂ ಬ್ರಿಡ್ಜ್‌ ಯಾವುದೇ ರೀತಿಯಲ್ಲಿ “ಕಾಂತಾರ” ಚಿತ್ರದೊಂದಿಗೆ ಸಂಯೋಜಿತವಾಗಿಲ್ಲ ಎಂದು ನಮ್ಮ ಕೇಳುಗರಿಗೆ ತಿಳಿಯಬೇಕೆಂದು ನಾವು ಬಯಸುತ್ತೇವೆ. ನಮ್ಮ ಐಪಿ “ನವರಸಂ” ಮತ್ತು “ವರಾಹ ರೂಪಂ” ನಡುವಿನ ಅನಿವಾರ್ಯ ಹೋಲಿಕೆಗಳು ಪರಿಭಾಷೆಯಲ್ಲಿ ಆದ್ದರಿಂದ ಆಡಿಯೊ ಹಕ್ಕುಸ್ವಾಮ್ಯ ಕಾನೂನುಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಬರೆದುಕೊಂಡಿತ್ತು.

ಆಪಾದಿತ ಹಕ್ಕುಸ್ವಾಮ್ಯ ಉಲ್ಲಂಘನೆಯ ಬಗ್ಗೆ ಪ್ರಚಾರ ಮಾಡುವಂತೆ ಬ್ಯಾಂಡ್ ತನ್ನ ಬೆಂಬಲಿಗರಲ್ಲಿ ಮನವಿ ಮಾಡಿಕೊಂಡಿತ್ತು.”ನಮ್ಮ ದೃಷ್ಟಿಕೋನದಿಂದ, “ಪ್ರೇರಿತ” ಮತ್ತು “ಕೃತಿಚೌರ್ಯ” ನಡುವಿನ ಗೆರೆಯು ವಿಭಿನ್ನವಾಗಿದೆ ಮತ್ತು ನಿರ್ವಿವಾದವಾಗಿದೆ ಮತ್ತು ಆದ್ದರಿಂದ ನಾವು ಇದಕ್ಕೆ ಕಾರಣವಾದ ಕ್ರಿಯೇಟಿವ್‌ ಟೀಮ್‌ ವಿರುದ್ಧ ಕಾನೂನು ಕ್ರಮವನ್ನು ಬಯಸುತ್ತೇವೆ. ವಿಷಯ ಮತ್ತು ಹಾಡಿನ ಮೇಲೆ ನಮ್ಮ ಹಕ್ಕುಗಳಿಗೆ ಯಾವುದೇ ಅಂಗೀಕಾರ ನೀಡಲಾಗಿಲ್ಲ. ಚಲನಚಿತ್ರದ ಸೃಜನಾತ್ಮಕ ತಂಡದಿಂದ ಮೂಲ ಕೃತಿಯಾಗಿ ಪ್ರಚಾರ ಮಾಡಲಾಗಿದೆ” ಎಂದು ಅವರ ಪೋಸ್ಟ್‌ನಲ್ಲಿ ವಿವರಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist