ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಕಾಂತಾರ’ ಸಿನಿಮಾ ಗೆಲುವನ್ನು ದೈವಕ್ಕೆ ಅರ್ಪಿಸಿದ ರಿಷಬ್ ಶೆಟ್ಟಿ

Twitter
Facebook
LinkedIn
WhatsApp
‘ಕಾಂತಾರ’ ಸಿನಿಮಾ ಗೆಲುವನ್ನು ದೈವಕ್ಕೆ ಅರ್ಪಿಸಿದ ರಿಷಬ್ ಶೆಟ್ಟಿ

ದೇಶಾದ್ಯಂತ ಕಾಂತಾರ (Kantara) ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ ಭರ್ತಿ ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು (Win) ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ (Rishabh Shetty) ದೈವಕ್ಕೆ (Daiva) ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.

ಅತ್ಯುತ್ತಮ ಚಲನಚಿತ್ರಗಳನ್ನು ನಿರ್ಮಿಸಿ ಕನ್ನಡಿಗರ ಮನೆಮಾತಾಗಿರುವ ಹೆಮ್ಮೆಯ ‘ಹೊಂಬಾಳೆ ಫಿಲಮ್ಸ್ ‘ , ಚಿತ್ರರಸಿಕರ ನಿರೀಕ್ಷೆಯಂತೆ ಸತತವಾಗಿ ಯಶಸ್ವಿ ಚಿತ್ರಗಳನ್ನು ದೇಶದ ಚಲನಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿ ಮೆಚ್ಚುಗೆ ಗಳಿಸಿದೆ. ಇತ್ತೀಚೆಗೆ ಬಿಡುಗಡೆಯಾದ  ‘ಕಾಂತಾರ’  ದೇಶ-ವಿದೇಶಗಳಲ್ಲಿ ಜನಮೆಚ್ಚುಗೆ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ಇದೀಗ ಕಾಂತಾರ ಬಿಡುಗಡೆಯಾದ ಇಪ್ಪತ್ತೈದು ದಿನಕ್ಕೆ ಹೊಸ ದಾಖಲೆಯೊಂದನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಮ್ಸ್ ಯಶಸ್ಸಿನ ಮುಕುಟಕ್ಕೆ ಹೊಸ ಗರಿ ಮೂಡಿದೆ.

ಈವರೆಗೆ ಹೊಂಬಾಳೆ ಬ್ಯಾನರ್ (Hombale Films) ನಲ್ಲಿ ನಿರ್ಮಿಸಿದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರು ವೀಕ್ಷಿಸಿದ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕರ್ನಾಟಕದಲ್ಲಿ 25 ದಿನಗಳಲ್ಲಿ 77 ಲಕ್ಷ ಮಂದಿ ಸಿನಿಮಾಪ್ರಿಯರು ಕಾಂತಾರ ವೀಕ್ಷಿಸಿರುವುದು ಹೊಸ ದಾಖಲೆಯಾಗಿದೆ. ಹೊಂಬಾಳೆ ಫಿಲಮ್ಸ್ ಸಂಸ್ಥೆ  ನಿರ್ಮಿಸಿ 2017 ರಲ್ಲಿ ಬಿಡುಗಡೆಯಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಿ, ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದ ಚಿತ್ರ ‘ ರಾಜಕುಮಾರ’ ಸೂಪರ್ ಹಿಟ್ ಚಿತ್ರವಾಗಿತ್ತು. ಕನ್ನಡಿಗರ ಮನಸೂರೆಗೊಂಡಿರುವ ಈ ಚಲನಚಿತ್ರವನ್ನು 65 ಲಕ್ಷ ಜನರು ವೀಕ್ಷಿಸಿ ದಾಖಲೆ ನಿರ್ಮಾಣವಾಗಿತ್ತು.

2018 ರಲ್ಲಿ ಹೊಂಬಾಳೆ ನಿರ್ಮಿಸಿದ ಮತ್ತೊಂದು ಸೂಪರ್ ಹಿಟ್ ಚಿತ್ರ ಕೆಜಿಎಫ್ 1 ಬಿಡುಗಡೆಯಾಯಿತು. ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ ದೇಶದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿತ್ತು. ಈ ಚಿತ್ರವನ್ನು ಈವರೆಗೆ ಕರ್ನಾಟಕದಲ್ಲಿ 75 ಲಕ್ಷ ಜನರು ವೀಕ್ಷಿಸಿ ಮತ್ತೊಂದು ದಾಖಲೆ ನಿರ್ಮಿಸಿತ್ತು.. ಆ ಮೂಲಕ ಹೊಂಬಾಳೆ ಬ್ಯಾನರ್ ನ ಹಿಂದಿನ ದಾಖಲೆಯನ್ನು ‘ಕೆಜಿಎಫ್ 1 ‘ ಬ್ರೇಕ್ ಮಾಡಿತ್ತು. 

ಹೊಂಬಾಳೆ ಸಂಸ್ಥೆ ನಿರ್ಮಿಸಿ 2022 ರಲ್ಲಿ ಬಿಡುಗಡೆಯಾದ ಮಗದೊಂದು ಚಿತ್ರ ‘ಕೆಜಿಎಫ್ 2’  ದೇಶ-ವಿದೇಶಗಳಲ್ಲಿ ಭರ್ಜರಿ ಯಶಸ್ಸು ಕಂಡಿತ್ತು. ಯಶ್ ಅಭಿನಯದ ಈ ಚಿತ್ರ ಬಾಲಿಹುಡ್ ನ ಎಲ್ಲ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿತ್ತು.. ದೇಶದ ಚಿತ್ರರಂಗವೇ ಕನ್ನಡದ ಕಡೆಗೆ ತಿರುಗಿ ನೋಡುವಂತೆ ಮಾಡಿತ್ತು.. ಕರ್ನಾಟಕದ 72 ಲಕ್ಷ ಸಿನಿಮಾಪ್ರಿಯರು ಇದುವರೆಗೆ ಈ ಚಿತ್ರ ವೀಕ್ಷಿಸಿದ್ದೂ ಕೂಡ ದಾಖಲೆಯಾಗಿ ಉಳಿದಿದೆ.

ಹೊಂಬಾಳೆ ಬ್ಯಾನರ್ ನ ಚಿತ್ರಗಳು ಸ್ಥಾಪಿಸಿದ ದಾಖಲೆಗಳನ್ನು ಅವರದೇ ಸಂಸ್ಥೆಯ ನಿರ್ಮಾಣದ ಚಿತ್ರಗಳು ಮುರಿಯುತ್ತಾ ನೂತನ ದಾಖಲೆಯೊಂದಿಗೆ ಇತಿಹಾಸ ನಿರ್ಮಿಸುತ್ತಾ ಬಂದಿದೆ. ಇದೀಗ ಕಾಂತಾರ ಚಲನಚಿತ್ರ ಆ ಸಾಲಿಗೆ ಸೇರುವ ಮೂಲಕ ಹೊಂಬಾಳೆ ಸಂಸ್ಥೆಗೆ  ಗರಿಮೆ ಮೂಡಿಸಿದೆ.. ಹೊಂಬಾಳೆ ನಿರ್ಮಾಣದ ಎಲ್ಲ ಚಲನಚಿತ್ರಗಳ ಇದುವರೆಗಿನ ಎಲ್ಲಾ ಹಿಂದಿನ ದಾಖಲೆಗಳನ್ನು ಇಪ್ಪತ್ತೈದು ದಿನಗಳಲ್ಲಿಯೇ ಬ್ರೇಕ್ ಮಾಡಿ ಮುನ್ನುಗ್ಗುತ್ತಿದೆ ‘ಕಾಂತಾರ’ ಎನ್ನುವುದು ಹೆಮ್ಮೆಯ ವಿಷಯ. ಮುಂದಿನ ವಾರಗಳಲ್ಲಿ ಒಂದು ಕೋಟಿ ಸಿನಿಮಾಪ್ರಿಯರು ವೀಕ್ಷಿಸಿ ಮಗದೊಂದು ದಾಖಲೆ ನಿರ್ಮಿಸುವ ಕಡೆಗೆ ‘ಕಾಂತಾರ’ ಸಾಗುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist