ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನಲ್ಲಿಯೇ ಮಂಗಳೂರಿನ ಬೆಂಗ್ರೆ ಕೂಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

Twitter
Facebook
LinkedIn
WhatsApp
ಕಾರಿನಲ್ಲಿಯೇ ಮಂಗಳೂರಿನ ಬೆಂಗ್ರೆ ಕೂಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ.

ಮಂಗಳೂರು: ಮಹಿಳೆಯೊಬ್ಬರಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿ ಬಳಿಕ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಪ್ರಕರಣದ ಆರೋಪಿ. ಮಹಿಳೆಯೊಬ್ಬರು ತನ್ನ ಗಂಡನಿಗೆ ವಿಚ್ಛೇದನ ನೀಡಿದ ಬಳಿಕ ತಂದೆ – ತಾಯಿ ಜತೆ ವಾಸಿಸುತ್ತಿದ್ದು, ಎರಡು ತಿಂಗಳ ಹಿಂದೆ ಪ್ರತ್ಯೇಕ ಮನೆ ಮಾಡುವ ಉದ್ದೇಶದಿಂದ ಬಾಡಿಗೆ ಮನೆ ಹುಡುಕುತ್ತಿದ್ದು, ಬೆಂಗರೆ ಕೂಳೂರು ನಿವಾಸಿ ಪ್ರಶಾಂತ್‌ ಅಪ್ಪು ಎಂಬುವರಿಂದ ಬಾಡಿಗೆ ಮನೆ ಪಡೆದಿದ್ದರು.
ಇದಾದ ಬಳಿಕ ತನ್ನ ಬಟ್ಟೆ ಬರೆಗಳನ್ನು ರೂಮ್‌ನಲ್ಲಿಟ್ಟು ಬಂದಿದ್ದು, ಮಹಿಳೆಗೆ ಜ್ವರ ಬಂದಿದ್ದ ಕಾರಣ ಬಾಡಿಗೆ ಮನೆಗೆ ತೆರಳಲಿಲ್ಲ. ಈ ಸಂದರ್ಭ ಆರೋಪಿ ಎಡೆಬಿಡದೆ ಫೋನ್‌ ಮಾಡಿ ‘ಬಟ್ಟೆ ಬರೆಗಳನ್ನು ವಾಪಸ್‌ ಕೊಂಡು ಹೋಗು’ ಎಂದು ತಿಳಿಸಿದ್ದಾನೆ.

ಜೂನ್ 8ರಂದು ನಿನ್ನ ಬಟ್ಟೆಗಳನ್ನು ಕುಂಟಿಕಾನ ಬಳಿ ತಂದು ನೀಡುವುದಾಗಿ ಹೇಳಿದ ಆರೋಪಿ, ಅಲ್ಲಿಗೆ ಕಾರಿನಲ್ಲಿ ಬಂದಿದ್ದಾನೆ. ಬಟ್ಟೆ ತರಲು ಮಹಿಳೆ ಹೋದಾಗ ‘ಬಟ್ಟೆ ಬಿಟ್ಟು ಬಂದಿದ್ದೇನೆ, ನೀನು ಬಂದು ತೆಗೆದುಕೊಂಡು ಹೋಗು’ ಎಂದು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ.

ಬಳಿಕ ಆ ತನಕ ಮನೆಗೆ ಹೋಗುವ ಒಳ ರಸ್ತೆಗೆ ಕಾರನ್ನು ಚಲಾಯಿಸಿ ಜನಸಂಚಾರವಿಲ್ಲದ ಜಾಗದಲ್ಲಿ ಅತ್ಯಾಚಾರ ನಡೆಸಿದ್ದಾನೆಂದು ಮಹಿಳೆ ದೂರಿದ್ದಾರೆ. ಇದಾದ ಕೆಲ ದಿನಗಳ ನಂತರ ಆರೋಪಿ ಮಹಿಳೆಗೆ ಕರೆ ಮಾಡಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದು, ಇದಕ್ಕೆ ಮಹಿಳೆ ನಿರಾಕರಿಸಿದಾಗ ಸಂದೇಶ ಮೂಲಕ ‘ಮದುವೆಯಾಗದಿದ್ದಲ್ಲಿ ಕೊಲ್ಲುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು