ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!

Twitter
Facebook
LinkedIn
WhatsApp
ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!

ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ(Electronic City) ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. 5ನೇ ಮಹಡಿಯಿಂದ ಹಾರಿ ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬ, ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇನ್ನು ಮೃತ ವಿದ್ಯಾರ್ಥಿ ರಾಹುಲ್, ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ(ಮೇ.14) ಪರೀಕ್ಷೆಗೆ ರಾಹುಲ್ ತಡವಾಗಿ ಬಂದಿದ್ದ, ಈ ವಿಚಾರವಾಗಿ ಕಾಲೇಜಿನಲ್ಲಿ ರಾಹುಲ್​ನನ್ನು ನಿಂದಿಸಿರುವ ಅನುಮಾನ ಇದ್ದು, ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿಯಲ್ಲಿ ಸಿಡಿಲು ಬಡಿದು ಯುವಕ ಸಾವು..!

ಕಳೆದ ಮೂರು ತಿಂಗಳಿಂದ ವಿಪರೀತ ಬಿಸಿಲಿನಿಂದ ಕಂಗೆಟ್ಟಿದ್ದ ಉಡುಪಿ ಜಿಲ್ಲೆಯ ಜನರಿಗೆ ವರುಣ ಕೃಪೆ ತೋರಿದ್ದು, ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿನ್ನೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಅನಾಹುತಗಳು ಕೂಡ ಸಂಭವಿಸಿದೆ

ಉಡುಪಿಯಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಸುರೇಶ್‌ ಶೆಟ್ಟಿ (38) ಸಿಡಿಲು ಬಡಿದು ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಗುಡುಗು-ಸಿಡಿಲು ಸಹಿತ ಮಳೆ ಆರಂಭವಾಗಿತ್ತು. ಸುರೇಶ್‌ ಶೆಟ್ಟಿ ಮಳೆ ಬರುವ ವೇಳೆ ಮನೆಯ ಪಕ್ಕ ನಿಂತಿದ್ದರು. ಈ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಸುರೇಶ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ